ಬೆಂಗಳೂರು:ಮುಂಬರುವ ವಿಧಾನಸಭೆ ಸಾರ್ವತ್ರಿಕ ಚುನಾವಣೆಗೆ ಕಾಂಗ್ರೆಸ್ ಅಧಿಕೃತವಾಗಿ ತಯಾರಿ ಆರಂಭಿಸುತ್ತಿದೆ. ಪಕ್ಷದ ಮುಖಂಡ ರಾಹುಲ್ ಗಾಂಧಿ ಮಾ.31ರಂದು ರಾಜ್ಯ ಪ್ರವಾಸ ಆರಂಭಿಸುತ್ತಿದ್ದು, 2018ರ ವಿಧಾನಸಭೆ ಚುನಾವಣೆಯಲ್ಲಿ ಗೆದ್ದವರು ಮತ್ತು ಸೋತ ಅಭ್ಯರ್ಥಿಗಳ ಜತೆ ಸಭೆ ನಡೆಸಲಿದ್ದಾರೆ. ಹಾಗೆಯೇ ಯುವ ಕಾಂಗ್ರೆಸ್, ಮಹಿಳಾ ಕಾಂಗ್ರೆಸ್ ಸೇರಿ ವಿವಿಧ ಘಟಕಗಳೊಂದಿಗೆ ಪ್ರತ್ಯೇಕ ಸಭೆ ನಡೆಸಿ, ಚುನಾವಣೆ ತಯಾರಿಗೆ ಜವಾಬ್ದಾರಿ ನಿಗದಿ ಮಾಡಲಿದ್ದಾರೆ. ಮಂಗಳವಾರ ಸುದ್ದಿಗಾರರಿಗೆ ಈ ಬಗ್ಗೆ ಮಾಹಿತಿ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಿದ್ಧಗಂಗೆಯ ಶ್ರೀ ಶಿವಕುಮಾರ ಸ್ವಾಮೀಜಿ ಅವರ 115ನೇ ಜಯಂತಿ ಕಾರ್ಯಕ್ರಮ ನಿಮಿತ್ತ ರಾಹುಲ್ ಗಾಂಧಿ ಮಾ.31ರಂದು ಮಧ್ಯಾಹ್ನ 2 ಗಂಟೆಗೆ ಬೆಂಗಳೂರು ದೇವನಹಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ಅಲ್ಲಿಂದ ನೇರವಾಗಿ ಸಿದ್ದಗಂಗಾ ಮಠಕ್ಕೆ ತೆರಳಿ, ಗದ್ದುಗೆಗೆ ಪೂಜೆ ಸಲ್ಲಿಸುವರು. ಅಲ್ಲಿಯೇ ಪ್ರಸಾದ ಸ್ವೀಕರಿಸುತ್ತಾರೆ ಎಂದರು. ನಂತರ ಬೆಂಗಳೂರಿಗೆ ಬಂದು ಕಾಂಗ್ರೆಸ್ ಕಚೇರಿಯಲ್ಲಿ ಸಭೆ ನಡೆಸಿ ಬಿಬಿಎಂಪಿ ವ್ಯಾಪ್ತಿ ನಾಯಕರನ್ನು ಭೇಟಿ ಮಾಡಲಿದ್ದಾರೆ. ಏ.1ರಂದು ಎಲ್ಲ ಶಾಸಕರು, ಮಾಜಿ ಶಾಸಕರು, 2018ರ ಚುನಾವಣೆ ಪರಾಜಿತ ಅಭ್ಯರ್ಥಿಗಳು, ಸಂಸತ್ ಚುನಾವಣೆ ಪರಾಜಿತ ಅಭ್ಯರ್ಥಿಗಳು, ಮಾಜಿ ಸಂಸದರು, ವಿವಿಧ ಘಟಕಗಳ ಅಧ್ಯಕ್ಷರ ಜತೆ ಸಭೆ ಮಾಡಲಿದ್ದಾರೆ ಎಂದು ಡಿಕೆಶಿ ವಿವರಣೆ ನೀಡಿದರು.
ಗಾಂಧಿ ಕುಟುಂಬಕ್ಕೂ ಮಠ ಹಾಗೂ ಎಲ್ಲ ಧರ್ಮಗಳಿಗೂ ಇರುವ ಸಂಬಂಧ ಭಕ್ತ ಹಾಗೂ ಭಗವಂತನಿಗೆ ಇರುವ ಸಂಬಂಧದಂತೆ. ಈಗ ಕೆಲ ಬಿಜೆಪಿ ನಾಯಕರು ಹೈಜಾಕ್ ಮಾಡಲು ಹೊರಟಿದ್ದಾರೆ.
|ಡಿ.ಕೆ.ಶಿವಕುಮಾರ್ಕೆಪಿಸಿಸಿ ಅಧ್ಯಕ್ಷ
ಜಾಗಟೆ ಪ್ರತಿಭಟನೆ:ದಿನನಿತ್ಯ ಜನಸಾಮಾನ್ಯರ ಜೇಬು ಪಿಕ್ ಪಾಕೆಟ್ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಮಾ.31ರಂದು ರಾಜ್ಯದ ಎಲ್ಲ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ತಮ್ಮ ಮನೆಯ ಮುಂದೆ ವಾಹನ, ಗ್ಯಾಸ್ ಸಿಲಿಂಡರ್ ಇಟ್ಟು ಹೂವಿನ ಹಾರ ಹಾಕಿ ಜಾಗಟೆ ಬಾರಿಸಬೇಕು. ನಂತರ ಅದರ ವಿಡಿಯೋ, ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಟ್ಯಾಗ್ ಮಾಡಬೇಕು. ನಮ್ಮ ಎಲ್ಲ ನಾಯಕರು ಹಾಗೂ ಕಾರ್ಯಕರ್ತರು ಇದನ್ನು ಮಾಡಬೇಕಾಗಿ ಮನವಿ ಮಾಡುತ್ತೇನೆ ಎಂದು ಡಿ.ಕೆ.ಶಿವಕುಮಾರ್ ಹೇಳಿದರು. ಏ.7ರಂದು ಜಿಲ್ಲಾ ಮಟ್ಟದಲ್ಲಿ ಇದೇ ವಿಚಾರವಾಗಿ ರ‍್ಯಾಲಿ ಹಮ್ಮಿಕೊಳ್ಳಲು ಸೂಚನೆ ನೀಡುತ್ತೇವೆ. ರಾಜ್ಯಮಟ್ಟದ ಪ್ರತಿಭಟನೆ ದಿನಾಂಕವನ್ನು ರ್ಚಚಿಸಿ ಪ್ರಕಟಿಸುತ್ತೇವೆ ಎಂದರು.
ಯಾವಾಗ ಬೇಕಾದರೂ ಚುನಾವಣೆ ಮಾಡಲಿ, ಈ ತಿಂಗಳು ಅಥವಾ ನಾಳೆಯೇ ಮಾಡಲಿ, ನವೆಂಬರ್ 27ಕ್ಕೆ ಚುನಾವಣೆ ಪ್ರಕಟಿಸಲಿ, ಕಾಂಗ್ರೆಸ್ ಸಜ್ಜಾಗಿದೆ ಎಂದು ಡಿ.ಕೆ.ಶಿವಕುಮಾರ್ ಹೇಳಿದರು. ನ.27 ಎಂದು ಹೇಗೆ ಹೇಳುತ್ತೀರಿ ಎಂಬ ಪತ್ರಕರ್ತರ ಪ್ರಶ್ನೆಗೆ, ನಿಮಗೆ ಮಾಹಿತಿ ನೀಡಲು ಮೂಲಗಳು ಇರುವಂತೆ ನಮಗೂ ಇದ್ದಾರೆ ಎಂದರು. ಸಚಿವ ಈಶ್ವರಪ್ಪ ಪ್ರಕರಣ ಉಲ್ಲೇಖಿಸಿ ಈ ರೀತಿ ಪತ್ರ ಬರೆಯುವುದು ಟ್ರೆಂಡ್ ಆಗಿದ್ದು, ನಾಳೆ ನಿಮ್ಮ ಸರ್ಕಾರ ಬಂದಾಗ ಇದೇ ರೀತಿ ಪತ್ರ ಬರೆದರೆ ಆಗ ನೀವು ರಾಜೀನಾಮೆ ನೀಡುತ್ತೀರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಡಿಕೆಶಿ, ನನ್ನ ಮೇಲೆ ಕೇಸ್ ಹಾಕಿ ಜೈಲಿಗೆ ಕಳಿಸಿದಾಗ ಯಾರಾದರೂ ಪತ್ರ ಬರೆದಿದ್ದರಾ? ಯಾವುದಾದರೂ ತನಿಖೆ ಆಗಿತ್ತಾ? ಲಂಚ, ರೇಪ್ ಕೇಸ್​ಗಳು ದಾಖಲಾಗಿದ್ದವಾ? ಏನು ಇರಲಿಲ್ಲ, ಆದರೂ ದಾಳಿ ಮಾಡಿ ಬಂದಿಸಿದ್ದು ಏಕೆ ಎಂದು ಪ್ರಶ್ನಿಸಿದರು. ಈಶ್ವರಪ್ಪ ಯಡಿಯೂರಪ್ಪನವರ ವಿರುದ್ಧ ರಾಜ್ಯಪಾಲರಿಗೆ ಪತ್ರ ಬರೆದಾಗ ಅವರಿಗೆ ಬುದ್ಧಿ ಇರಲಿಲ್ಲವೇ? ಯತ್ನಾಳ್, ವಿಶ್ವನಾಥ್ ಮಾತನಾಡಿದರಲ್ಲ ಅವರಿಗೆ ಬುದ್ಧಿ ಇರಲಿಲ್ಲವೇ? ಯಾವ ಕ್ರಮ ಕೈಗೊಂಡರು? ಯಾವುದೇ ಕ್ರಮ ಕೈಗೊಳ್ಳದಿರುವುದು ಅವರ ಆರೋಪ ನಿಜ ಎಂದು ಒಪ್ಪಿಕೊಂಡಂತೆ ಎಂದು ಚಾಟಿ ಬೀಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × five =
Remember me
