ಬೆಂಗಳೂರು:ಸುಲಲಿತ ವ್ಯವಹಾರ (ಈಸ್ ಆಫ್ ಡೂಯಿಂಗ್ ಬಿಜಿನೆಸ್)ಕ್ಕೆ ಸಂಬಂಧಿಸಿದಂತೆ ಕೈಗಾರಿಕೆ ಮತ್ತು ಆಂತರಿಕ ವ್ಯಾಪಾರ ಉತ್ತೇಜನ ಇಲಾಖೆ (ಡಿಪಿಐಐಟಿ) ಬಿಡುಗಡೆ ಮಾಡಿರುವ ಶ್ರೇಯಾಂಕ ಪಟ್ಟಿಯಲ್ಲಿ ಕರ್ನಾಟಕ ಅಗ್ರಸ್ಥಾನ ಪಡೆದುಕೊಂಡಿದೆ.
2020ರ ಸೆಪ್ಟೆಂಬರ್​ನಲ್ಲಿ ಬಿಡುಗಡೆಯಾಗಿದ್ದ ಶ್ರೇಯಾಂಕ ಪಟ್ಟಿಯಲ್ಲಿ ಕರ್ನಾಟಕ 17ನೇ ಸ್ಥಾನದಲ್ಲಿತ್ತು, ಈಗ ಟಾಪ್ ಅಚೀವರ್ ಆಗಿ ಹೊರಹೊಮ್ಮಿದೆ. ಕೇಂದ್ರ ಸರ್ಕಾರ 2020ರ ವಹಿವಾಟು ಸುಧಾರಣೆ ಕ್ರಿಯಾ ಯೋಜನೆ (ಎಸ್​ಬಿಆರ್​ಎಪಿ) ಅಡಿಯಲ್ಲಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ವಾರ್ಷಿಕ ಸುಧಾರಣಾ ಕ್ರಮಗಳ ಪರಿಶೀಲನಾ ವರದಿ ಗುರುವಾರ ಬಿಡುಗಡೆಯಾಗಿದೆ. ಡಿಪಿಐಐಟಿ ಸೂಚಿಸಿದ್ದ 187 ಸುಧಾರಣಾ ಕ್ರಮಗಳಲ್ಲಿ ಶೇ.100 ಅನುಷ್ಠಾನಗೊಳಿಸಿದ್ದರೂ, ಕರ್ನಾಟಕ 2019ರಲ್ಲಿ 17ನೇ ಸ್ಥಾನಕ್ಕೆ ಕುಸಿದಿತ್ತು. ಹಲವು ಸುಧಾರಣಾ ಕ್ರಮಗಳ ಅನುಷ್ಠಾನದ ಜತೆಗೆ ರಾಜ್ಯದ 30ಕ್ಕೂ ಹೆಚ್ಚು ಇಲಾಖೆಗಳ ನಡುವಿನ ಸಮನ್ವಯತೆ ಮತ್ತು ಪೂರಕ ಪ್ರಯತ್ನಗಳಿಂದ ಪ್ರಸಕ್ತ ಸಾಲಿನಲ್ಲಿ ಅಗ್ರ ಶ್ರೇಣಿಗೆ ಏರಲು ಸಾಧ್ಯವಾಗಿದೆ. ಆಂಧ್ರಪ್ರದೇಶ, ಗುಜರಾತ್, ಹರಿಯಾಣ, ಪಂಜಾಬ್, ತಮಿಳುನಾಡು, ತೆಲಂಗಾಣ ಸಹ ಅಗ್ರ ಸಾಧಕ ರಾಜ್ಯಗಳ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿವೆ.
| ಮುರುಗೇಶ ಆರ್. ನಿರಾಣಿಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ
| ಡಾ.ಇ.ವಿ.ರಮಣರೆಡ್ಡಿಕೈಗಾರಿಕೆ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ
| ಗುಂಜನ್ ಕೃಷ್ಣಕೈಗಾರಿಕಾಭಿವೃದ್ಧಿ ಆಯುಕ್ತರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − eight =
Remember me
