ಮುಳಬಾಗಿಲು:ನಗರದ ಅಶ್ವತ್ಥ್​ನಾರಾಯಣಶೆಟ್ಟಿ ಬಡಾವಣೆಯಲ್ಲಿ ಬುಧವಾರ ರಾತ್ರಿ ಸರ್ಕಾರಿ ಶಾಲೆಯ ಶಿಕ್ಷಕಿಯನ್ನು ಬರ್ಬರವಾಗಿ ಕುತ್ತಿಗೆ ಕೊಯ್ದು ಕೊಲೆ ಮಾಡಿದ್ದು, ಘಟನೆ ಸುತ್ತಮುತ್ತಲಿನವರನ್ನು ಬೆಚ್ಚಿ ಬೀಳಿಸಿದೆ.
ದಿವ್ಯಶ್ರೀ, (46) ಕೊಲೆಯಾದವರು.  ಮನೆಯಲ್ಲಿ ಟಿವಿ ನೋಡುತ್ತ ಕುಳಿತಿದ್ದಾಗ ರಾತ್ರಿ 7.30ರ ಆಸುಪಾಸಿನಲ್ಲಿ ಏಕಾಏಕಿ ಮನೆಗೆ ಆಗಮಿಸಿದ ಮೂವರು ಆಗಂತುಕರು ಶಿಕ್ಷಕಿಯ ಕುತ್ತಿಗೆ ಕೊಯ್ದು ಪರಾರಿಯಾಗಿದ್ದು, ಮನೆಯ ಮೇಲ್ಬಾಗದಲ್ಲಿದ್ದ ಪುತ್ರಿ ಕೆಳಗೆ ಬರುವಷ್ಟರಲ್ಲಿ ಹಂತಕರು ಪರಾರಿಯಾಗಿದ್ದಾರೆ.
ದಿವ್ಯಶ್ರೀ ಮುಳಬಾಗಿಲು ತಾಲೂಕಿನ ಮುಡಿಯನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಶಿಕ್ಷಕಿಯ ಪತಿ ಪದ್ಮನಾಭಶೆಟ್ಟಿ ಹಣಕಾಸು ವ್ಯವಹಾರ ಮತ್ತು ಊದುಬತ್ತಿ ಕಾರ್ಖಾನೆ ಮಾಲೀಕರಾಗಿದ್ದಾರೆ. ಕೋಲಾರದಿಂದ ಬೆರಳಚ್ಚು, ಎಫ್​ಎಸ್​ಎಲ್ ತಜ್ಞರು, ಶ್ವಾನ ದಳ ಸಿಬ್ಬಂದಿ ಆಗಮಿಸಿ ಮಾದರಿ ಸಂಗ್ರಹಿಸಿದ್ದಾರೆ.
ಸುದ್ದಿ ತಿಳಿದ ತಕ್ಷಣ ಶಾಸಕ ಸಮೃದ್ಧಿ ವಿ.ಮಂಜುನಾಥ, ಎಸ್​ಪಿ ಬಿ.ನಿಖಿಲ್, ತಹಸೀಲ್ದಾರ್ ಬಿ.ಎಸ್.ವೆಂಕಟಾಚಲಪತಿ, ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿಗಳಾದ ರವಿಶಂಕರ, ಜಗದೀಶ್, ಡಿವೈಎಸ್ಪಿ ಡಿ.ಸಿ.ನಂದಕುಮಾರ್, ನಗರ ಠಾಣೆ ಇನ್​ಸ್ಪೆಕ್ಟರ್ ಎಚ್.ಎಂ.ಶಿವಕುಮಾರ್, ಗ್ರಾಮಾಂತರ ಠಾಣೆ ಸಿಪಿಐ ಕೆಜಿ ಸತೀಶ್, ಪಿಎಸ್​ಐಗಳಾದ ವಿಠಲ್ ವೈ.ತಳವಾರ್, ಎಲ್.ಮಮತಾ, ನಂಗ್ಲಿ ಠಾಣೆಯ ಪಿಎಸ್​ಐ ಅರ್ಜುನ್, ಆರ್.ಎಸ್.ಗೌಡ ಸ್ಥಳಕ್ಕೆ ಭೇಟಿ ನೀಡಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಜಾರಿ ನಿರ್ದೇಶನಾಲಯ ನೂತನ ನಿರ್ದೇಶಕರಾಗಿ ರಾಹುಲ್ ನವೀನ್ ನೇಮಕ

ದಿಲ್ಲಿಯ ಕೆಂಪುಕೋಟೆಯಲ್ಲಿ ಸತತ 11ನೇ ಬಾರಿಗೆ ಪ್ರಧಾನಿ ಮೋದಿಯಿಂದ ರಾಷ್ಟ್ರಧ್ವಜಾರೋಹಣ!

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:6 + 19 =
Remember me
