ರಾಯಚೂರು:ಧಾರಾಕಾರ ಮಳೆಯಿಂದಾಗಿ ಮನೆಯ ಗೋಡೆ ಕುಸಿದು ಒಂದೇ ಕುಟುಂಬದ ಮೂವರು ದುರಂತ ಅಂತ್ಯ ಕಂಡ ಘಟನೆ ಮಾನ್ವಿ ತಾಲೂಕಿನ ಕುರಡಿ ಗ್ರಾಮದಲ್ಲಿ ಸೋಮವಾರ ಬೆಳಗಿನಜಾವ ಸಂಭವಿಸಿದೆ.
ಕುರಡಿ ಗ್ರಾಮದ ಪರಮೇಶ(45) ಮತ್ತು ಇವರ ಪತ್ನಿ ಜಯಮ್ಮ(39) ಹಾಗೂ ಪರಮೇಶನ ತಮ್ಮನ ಮಗ ಭರತ್(5) ಮೃತ ದುರ್ದೈವಿಗಳು.

ರಾಯಚೂರು ಜಿಲ್ಲೆಯಾದ್ಯಂತ ಒಂದು ವಾರದಿಂದ ಮಳೆಯಾಗುತ್ತಿದೆ. ನಿರಂತರ ಮಳೆಗೆ ಪರಮೇಶ ಅವರ ಮನೆಯ ಗೋಡೆ ಕುಸಿದಿದೆ. ಇದ್ಯಾವುದರ ಪರಿವೆ ಇಲ್ಲದೆ ನಿದ್ರೆಮಾಡುತ್ತಿದ್ದ ದಂಪತಿ ಸ್ಥಳದಲ್ಲೇ ಚಿರನಿದ್ರೆಗೆ ಜಾರಿದ್ದಾರೆ. ಇನ್ನು ಗಂಭೀರ ಗಾಯಗೊಂಡಿದ್ದ ಪುಟ್ಟ ಮಗು ಭರತ್​ನನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತ್ತಾದರೂ ಮಾರ್ಗಮಧ್ಯೆ ಕೊನೆಯುಸಿರೆಳೆದಿದೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ICU ಬೆಡ್​ ಮೇಲೆ ಮಲಗಿಕೊಂಡೇ ಸಬ್​ರಿಜಿಸ್ಟ್ರಾರ್​ ಕಚೇರಿಗೆ ಬಂದು ಆಸ್ತಿ ಪತ್ರಕ್ಕೆ ಸಹಿ ಹಾಕಿದ ವೃದ್ಧೆ!

ನಿಮ್ಗೆ ಎಷ್ಟು ಮದ್ವೆ ಆಗಿದೆ? ಯಾರೊಂದಿಗೆ ಡಿವೋರ್ಸ್​ ಆಗಿದೆ, ಗಂಡಂದಿರು ಬಿಡಲು ಕಾರಣ? ಸದ್ಯ ಯಾರ ಜತೆ ಸಂಸಾರ ಮಾಡ್ತಿದ್ದೀರಿ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − 11 =
Remember me
