|ಮಂಜುನಾಥ ಕೆ.ಬೆಂಗಳೂರು
ರಾಜ್ಯದಲ್ಲಿ ವರ್ಷದಿಂದ ವರ್ಷಕ್ಕೆ ಮಕ್ಕಳ ಮೇಲಿನ ದೌರ್ಜನ್ಯ ಮತ್ತು ಮಕ್ಕಳ ಅಪಹರಣ ಪ್ರಕರಣಗಳು ಹೆಚ್ಚಾಗುತ್ತಿದೆ. ಮಕ್ಕಳ ಮೇಲಿನ ದೌರ್ಜನ್ಯ ನಡೆಯುವುದನ್ನು ತಡೆಗಟ್ಟಲು ಸರ್ಕಾರ ಎಷ್ಟೇ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದರೂ ಮಕ್ಕಳ ಮೇಲಿನ ದೌರ್ಜನ್ಯ, ಅಪಹರಣ ಮತ್ತು ಬಾಲ್ಯ ವಿವಾಹದಂತಹ ಪ್ರಕರಣಗಳ ಸಂಖ್ಯೆ ಏರುತ್ತಲೇ ಇವೆ.
ಕಳೆದ ಎಂಟು ವರ್ಷಗಳ ಅಂಕಿ ಅಂಶಗಳನ್ನು ಗಮಸಿದಾಗ ಈ ವಿಚಾರ ಬೆಳಕಿಗೆ ಬಂದಿದ್ದು, ವರ್ಷದಿಂದ ವರ್ಷಕ್ಕೆ ಕಡಿಮೆ ಆಗಬೇಕಿದ್ದ ದೌರ್ಜನ್ಯ ಪ್ರಕರಣಗಳ ಸಂಖ್ಯೆ ವಿರುದ್ಧ ದಿಕ್ಕಿನಲ್ಲಿ ಸಾಗಿದೆ. ಹೀಗಾಗಿ ಮಕ್ಕಳಿಗೆ ನಮ್ಮ ರಾಜ್ಯ ಎಷ್ಟು ಸುರಕ್ಷಿತ ಎನ್ನುವ ಪ್ರಶ್ನೆ ಉದ್ಭವವಾಗುತ್ತದೆ. ಅತ್ಯಾಚಾರ, ಪೋಕ್ಸೋ ಪ್ರಕರಣಗಳ ತನಿಖೆಯನ್ನು ಅಪರಾಧ ಕಾನೂನು ತಿದ್ದುಪಡಿ ಮಾಡಿ ಸುಗ್ರೀವಾಜ್ಞೆ 2018 ರಲ್ಲಿನ ತಿದ್ದುಪಡಿಯಂತೆ ನಿಗಧಿಪಡಿಸಿರುವ 60 ದಿನಗಳ ಕಾಲಮಿತಿಯಲ್ಲಿ ತನಿಖೆಯನ್ನು ಪೂರ್ಣಗೊಳಿಸಲು ರಾಜ್ಯದ ಘಟಕಾಧಿಗಳಿಗೆ ಸರ್ಕಾರ ನಿರ್ದೇಶನ ನೀಡಿದೆ. ಮಹಿಳೆಯ ಮತ್ತು ಮಕ್ಕಳ ಮೇಲಿನ ದೌರ್ಜನ್ಯವನ್ನು ತಡೆಗಟ್ಟುವ ನಿಟ್ಟಿನಲ್ಲಿ 2019-20ನೇ ಸಾಲಿನಲ್ಲಿ 3.88 ಕೋಟಿ ರೂ. ಅನುದಾನವನ್ನು ನಿರ್ಭಯ ಯೋಜನೆಯಡಿಲ್ಲಿ ಬಿಡುಗಡೆ ಮಾಡಲಾಗಿದೆ. ಅನುದಾನದಲ್ಲಿ ರಾಜ್ಯದ 30 ಮಹಿಳಾ ಪೊಲೀಸ್ ಠಾಣೆಗಳಲ್ಲಿ ಮಾನವ ಕಳ್ಳಸಾಗಣೆಕೆ ನಿಷೇಧ ಘಟಕಗಳನ್ನು ಹಾಗೂ 2021-22ನೇ ಸಾಲಿನಲ್ಲಿ ಬಿಡುಗಡೆಯಾಗಿರುವ 37.90 ಲಕ್ಷಗಳ ಅನುದಾನದಲ್ಲಿ 5 ಹೆಚ್ಚುವರಿ ಮಾನವ ಕಳ್ಳಸಾಗಣಿಕ ನಿಷೇಧ ಘಟಕಗಳನ್ನು ಸ್ಥಾಪಿಸಲಾಗಿದೆ. ಆದರೂ ಸಹ ರಾಜ್ಯದಲ್ಲಿ ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳು ಕಡಿಮೆ ಆಗುತ್ತಿಲ್ಲ.

ಪಾಲಕರಲ್ಲಿ ಹೆಚ್ಚಾದ ಆತಂಕ:ರಾಜ್ಯದಲ್ಲಿ ವರ್ಷದಿಂದ ವರ್ಷಕ್ಕೆ ಮಕ್ಕಳ ಮೇಲಿನ ದೌರ್ಜನ್ಯ ಮತ್ತು ಮಕ್ಕಳ ಅಪಹರಣ ಪ್ರಕರಣಗಳು ಹೆಚ್ಚಾಗುತ್ತಿದ್ದು, ನಮ್ಮ ಮಕ್ಕಳಿಗೆ ಸಮಾಜದಲ್ಲಿ ಎಷ್ಟರ ಮಟ್ಟಿಗೆ ಸುರಕ್ಷಿತವಾಗಿ ಇರಲು ಸಾಧ್ಯ ಎಂಬ ಆತಂಕ ಪಾಲಕರಲ್ಲಿ ಮನೆ ಮಾಡಿದೆ. ಹೀಗಾಗಿ ಮಕ್ಕಳ ಮೇಲೆ ದೌರ್ಜನ್ಯ ಎಸಗುವವರ ವಿರುದ್ಧ ಕಾನೂನನ್ನು ಮತ್ತಷ್ಟು ಬಿಗಿಗೊಳಿಸಿ ಆರೋಪಿಗಳಿಗೆ ಶೀಘ್ರ ಕಠಿಣ ಶಿಕ್ಷೆ ಆಗುವಂತೆ ಸರ್ಕಾರ ನೋಡಿಕೊಳ್ಳಬೇಕು ಎಂಬುದು ಪಾಲಕರ ಆಗ್ರಹವಾಗಿದೆ.
2720 ಪ್ರಕರಣ ದಾಖಲು:2015ರಲ್ಲಿ 1524 ಪೋಕ್ಸೋ ಪ್ರಕರಣಗಳು ದಾಖಲಾಗಿತ್ತು. ಆದರೆ 2022 ರ ನವೆಂಬರ್ ಹೊತ್ತಿಗೆ 2720 ಪ್ರಕರಣಗಳು ದಾಖಲಾಗಿವೆ. ರಾಜ್ಯದಲ್ಲಿ ಕಳೆದ ಎಂಟು ವರ್ಷಗಳ ಅವಧಿಯಲ್ಲಿ ಒಟ್ಟು 1196 ಪ್ರಕರಣಗಳು ಹೆಚ್ಚಾಗಿವೆ.
1827 ಅಪಹರಣ ಪ್ರಕರಣಗಳು:ಕಳೆದ ಎಂಟು ವರ್ಷದ ಅವಧಿಯಲ್ಲಿ ಒಟ್ಟು 1827 ಅಪಹರಣ ಮತ್ತು ಕಾಣೆಯಾಗಿರುವ ಪ್ರಕರಣಗಳು ದಾಖಲಾಗಿವೆ. 2015ರಲ್ಲಿ 55 ಪ್ರಕರಣಗಳು ದಾಖಲಾಗಿತ್ತು. ಆದರೆ 2022ರ ನವೆಂಬರ್ ಹೊತ್ತಿಗೆ 2504 ಪ್ರಕರಣಗಳು ದಾಖಲಾಗಿವೆ. 2449 ಪ್ರಕರಣಗಳು ಹೆಚ್ಚಾಗಿವೆ.
ಬಾಲಕಿಯರೇ ಹೆಚ್ಚು:2015ರಲ್ಲಿ 36 ಬಾಲಕಿಯರ ಅಪಹರಣ ಮತ್ತು ನಾಪತ್ತೆ ಪ್ರಕರಣ ದಾಖಲಾಗಿತ್ತು. ಆದರೆ 2022ರ ನವೆಂಬರ್ ಹೊತ್ತಿಗೆ ಒಟ್ಟು 1,827 ಬಾಲಕಿಯರ ಅಪಹರಣ ಮತ್ತು ನಾಪತ್ತೆ ಪ್ರಕರಣ ದಾಖಲಾಗಿವೆ. 677 ಬಾಲಕರ ಅಪಹರಣವಾಗಿದ್ದರೆ 1827 ಬಾಲಕಿಯರ ಅಪಹರಣ ಮತ್ತು ಕಾಣಿಯಾಗಿರುವ ಪ್ರಕರಣಗಳು ದಾಖಲಾಗಿರುವುದು ಆತಂಕಪಡುವ ವಿಷಯವಾಗಿದೆ. ಇನ್ನು 2012 ರಲ್ಲಿ 35 ಬಾಲ್ಯವಿವಾಹ ಪ್ರಕರಣಗಳು ದಾಖಲಾಗಿತ್ತು. ಆದರೆ 2022 ರ ನವೆಂಬರ್ ವೇಳೆಗೆ 200 ಬಾಲ್ಯವಿವಾಹ ಪ್ರಕರಣಗಳು ದಾಖಲಾಗಿವೆ.
‘ನಾನು ಯೂಟ್ಯೂಬರ್ ಆಗಿದ್ದು ಯಾಕೆ?’ ಅಂತ ಖುದ್ದು ಡಾ.ಬ್ರೋ ಅವರೇ ಹಂಚಿಕೊಂಡಿದ್ದಾರೆ ಇಲ್ಲಿ..

ಡಾ.ಬ್ರೋ@ವಿಜಯವಾಣಿ: ಇಲ್ಲಿವೆ ಎಕ್ಸ್​ಕ್ಲೂಸಿವ್ ಫೋಟೋಗಳು..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 − one =
Remember me
