ಬೆಂಗಳೂರು:ತನ್ನಷ್ಟಕ್ಕೆ ತಾನು ರಸ್ತೆಬದಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆ ಬಳಿಗೆ ಬೈಕ್​ನಲ್ಲಿ ಬಂದ 18 ವರ್ಷದ ಯುವಕನೊಬ್ಬ ಆಕೆಯ ಮೈಮುಟ್ಟಿ ಅಸಭ್ಯವಾಗಿ ನಡೆದುಕೊಂಡಿದ್ದಾನೆ.
ಗಂಗಾನಗರ ನಿವಾಸಿ 40 ವರ್ಷದ ಮಹಿಳೆಯು ಜೂ. 20ರ ಮಧ್ಯಾಹ್ನ 12ರ ಸುಮಾರಿನಲ್ಲಿ ದಿನಸಿ ಸಾಮಗ್ರಿ ಖರೀದಿಸಿ, ಗಿಡ್ಡಪ್ಪ ಬ್ಲಾಕ್​ ದೃವ ಅಪಾರ್ಟ್​ಮೆಂಟ್​ ಬಳಿ ರಸ್ತೆಬದಿ ನಡೆದುಕೊಂಡು ಮನೆಗೆ ತೆರಳುತ್ತಿದ್ದರು. ಇದೇ ವೇಳೆ ಹಿಂಬದಿಯಿಂದ ಸ್ಕೂಟರ್​ನಲ್ಲಿ ಬಂದ ಆರೋಪಿ ಲಕ್ಷ್ಮಯ್ಯ ಬ್ಲಾಕ್​ ನಿವಾಸಿ ಸಂತೋಷ್ (18), ಮಹಿಳೆಯ ಮೈಮುಟ್ಟಿ ಅನುಚಿತವಾಗಿ ವರ್ತಿಸಿ ಪರಾರಿಯಾಗಿದ್ದ.ಇದನ್ನೂ ಓದಿರಿರಾಜವಂಶಸ್ಥ ಯದುವೀರ್ ವಿರುದ್ಧವೇ ತಿರುಗಿಬಿದ್ದ ಸಂಘಟನೆಗಳು!
ಸಂತ್ರಸ್ತೆ ಕೊಟ್ಟ ದೂರಿನ ಮೇರೆಗೆ ತನಿಖೆ ಕೈಗೊಂಡ ಆರ್​.ಟಿ. ನಗರ ಪೊಲೀಸರು ಘಟನಾ ಸ್ಥಳದ ಸಿಸಿ ಕ್ಯಾಮರಾ ದೃಶ್ಯಗಳನ್ನು ವಶಕ್ಕೆ ಪಡೆದು ಪರಿಶೀಲಿಸಿದ್ದರು. ಆರೋಪಿಯ ಮುಖಚಹರೆ ಹಾಗೂ ಸ್ಕೂಟರ್​ ನಂಬರ್​ ಸೆರೆಯಾಗಿತ್ತು. ಅದನ್ನು ಆಧರಿಸಿ ಆರೋಪಿಯನ್ನು ಬಂಧಿಸಲಾಗಿದೆ. ಈ ಹಿಂದೆಯೂ ಕೃತ್ಯ ಎಸಗಿರುವ ಶಂಕೆ ಇದೆ. ಸಂತ್ರಸ್ತರು ದೂರು ಕೊಟ್ಟರೆ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಜೈಲಿಂದ ಬಿಡುಗಡೆಯಾದ ರೌಡಿ ಕೊರಂಗು ಕೃಷ್ಣನನ್ನು ಕರೆದೊಯ್ಯಲು ಬಂದದ್ದು 70 ಕಾರುಗಳು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × two =
Remember me
