ಚಿಕ್ಕಮಗಳೂರು:ಲಾಕ್​ಡೌನ್ ಮೇ 3ರೊಳಗೆ ಇತ್ಯರ್ಥವಾದರೆ ಆರು ತಿಂಗಳಲ್ಲಿ ಪ್ರವಾಸೋದ್ಯಮ ಕ್ಷೇತ್ರ ಚೇತರಿಸಿಕೊಳ್ಳುತ್ತದೆ. ಇಲ್ಲದಿದ್ದರೆ ಎರಡು ವರ್ಷ ಬೇಕಾಗಬಹುದು ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಆತಂಕ ವ್ಯಕ್ತಪಡಿಸಿದರು.
ವಿಜಯವಾಣಿ ಕಚೇರಿಯಲ್ಲಿ ಭಾನುವಾರ ಏರ್ಪಡಿಸಿದ್ದ ಫೋನ್-ಇನ್ ಕಾರ್ಯಕ್ರಮದಲ್ಲಿ ಮಾತನಾಡಿ, ರಾಜ್ಯದಲ್ಲಿ ಕರೊನಾ ಸೋಂಕಿನಿಂದ ಶೇ.100 ನೆಲಕಚ್ಚಿರುವ ಉದ್ಯಮವಿದ್ದರೆ ಅದು ಪ್ರವಾಸೋದ್ಯಮ ಕ್ಷೇತ್ರ. ಕರೊನಾ ಕಾರಣದಿಂದ ಜಗತ್ತಿನಲ್ಲಿ 14 ಕೋಟಿ ಉದ್ಯೋಗ ನಷ್ಟವಾಗಿದ್ದರೆ, ನಮ್ಮ ರಾಜ್ಯದಲ್ಲಿ ಸುಮಾರು 35 ಲಕ್ಷ ಉದ್ಯೋಗ ನಷ್ಟವಾಗಿದೆ ಎಂದರು.
ಪಶ್ಚಿಮ ಘಟ್ಟ ಹಾಗೂ ಬಯಲು ಪ್ರದೇಶಕ್ಕೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ರೂಪಿಸುವ ಬಗ್ಗೆ ಚಿಂತನೆ ನಡೆಸಲಾಗಿತ್ತು. ಅಷ್ಟರಲ್ಲೇ ಕರೊನಾ ಸಂಕಷ್ಟ ಕಾಲದಲ್ಲಿ ಆ ಚಿಂತನೆ ಶೇ.100 ಉಪಯೋಗವಾಗದು. ಹಾಗಾಗಿ ಈ ಪರಿಸ್ಥಿತಿಗೆ ಅನುಗುಣವಾಗಿ ರೂಪಿಸುವ ನೀತಿ ಬಗ್ಗೆ ಆಲೋಚಿಸಿ ಕೈಗೆತ್ತಿಕೊಳ್ಳಬೇಕಾಗುತ್ತದೆ ಎಂದು ತಿಳಿಸಿದರು.
ರಾಜ್ಯ ಮತ್ತು ದೇಶದಲ್ಲಿ ಕರೊನಾ ಸೋಂಕು ಸಂಪೂರ್ಣ ನಿಯಂತ್ರಣಕ್ಕೆ ಬಂದಲ್ಲಿ ಅಥವಾ ಮೂಲ ಗುರುತಿಸಲು ಸಾಧ್ಯವಾದಲ್ಲಿ ಲಾಕ್​ಡೌನ್ ಅಂತ್ಯಗೊಳ್ಳುವ ಮೇ 3ರ ಬಳಿಕ ಜನಜೀವನ ಸಾಮಾನ್ಯಸ್ಥಿತಿಗೆ ಬರಲಿದೆ. ಎಲ್ಲಿ ರೋಗದ ಮೂಲವಿದೆ ಮತ್ತು ಎಷ್ಟು ಜನರಿಗೆ ಹರಡುತ್ತಿದೆ ಎನ್ನುವುದು ಪತ್ತೆಯಾದಲ್ಲಿ ನಾವು ಅಷ್ಟೂ ಜನರನ್ನು ಕ್ವಾರಂಟೈನ್​ನಲ್ಲಿ ಇಟ್ಟರೆ ಅದು ನಿಯಂತ್ರಣಕ್ಕೆ ಬರುತ್ತದೆ ಎಂದು ತಿಳಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × one =
Remember me
