ರೋಣ:‘ಮಾವನ ಮನೆಗೆ ಬಂದಂತೆ ಬರುತ್ತೀರಿ. ಇಲ್ಲಿಯವರೆಗೂ ನಿಮ್ಮ ಇಲಾಖೆಗೆ ಸಂಬಂಧಿಸಿದಂತೆ ಸಂಪೂರ್ಣ ಮಾಹಿತಿ ನೀಡುತ್ತಿಲ್ಲ. ಪ್ರತಿ ಸಭೆಯಲ್ಲಿ ನಿಮಗೆ ಹೇಳಿ ಹೇಳಿ ಸಾಕಾಗಿದೆ. ಆದರೂ, ನಿಮ್ಮಲ್ಲಿ ಯಾವುದೇ ಸುಧಾರಣೆ ಕಂಡು ಬಂದಿಲ್ಲ’ ಎಂದು ತಾಪಂ ಉಪಾಧ್ಯಕ್ಷೆ ಇಂದ್ರಾ ತೇಲಿ ತಾಲೂಕು ಮಟ್ಟದ ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಶುಕ್ರವಾರ ತಾಪಂ ಅಧ್ಯಕ್ಷೆ ಪ್ರೇಮವ್ವ ನಾಯಕ ಅಧ್ಯಕ್ಷತೆಯಲ್ಲಿ ನಡೆದ ಕೆಡಿಪಿ ಸಭೆಯ ಆರಂಭದಲ್ಲಿಯೇ ರೇಷ್ಮೆ ಇಲಾಖೆ ಅಧಿಕಾರಿ ಎಸ್.ಐ. ಸಂಗಳದ ಅವರ ವಿರುದ್ಧ ಹರಿಹಾಯ್ದ ಉಪಾಧ್ಯಕ್ಷೆ ಇಂದ್ರಾ ತೇಲಿ, ಎರಡು ವರ್ಷಗಳಿಂದ ಗಮನಿಸುತ್ತಿದ್ದೇನೆ. ಮಾಹಿತಿ ಇಲ್ಲದೆ ಸಭೆಗೆ ಬರುತ್ತೀರಿ. ಕೇಳಿದರೆ ಏನಾದರೊಂದು ಸಬೂಬು ಹೇಳುತ್ತೀರಿ ಎಂದರು. ಇನ್ನು ಭೂಸೇನಾ ನಿಗಮ ಹಾಗೂ ನಿರ್ವಿುತಿ ಕೇಂದ್ರದ ವತಿಯಿಂದ ಕೈಗೊಳ್ಳಲಾಗುತ್ತಿರುವ ಕಾಮಗಾರಿಗಳು ಕಳಪೆಯಾಗುತ್ತಿವೆ ಎಂಬ ಆರೋಪಗಳು ಕೇಳಿ ಬರುತ್ತಿದ್ದು, ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಗಮನ ಹರಿಸಬೇಕು ಎಂದು ಸೂಚಿಸಿದರು.
ತಾಲೂಕಿನಲ್ಲಿರುವ ತಾಂಡಾಗಳಲ್ಲಿನ ಜನರು ಗೋವಾ, ಮಂಗಳೂರು ಹಾಗೂ ಇನ್ನಿತರ ನಗರಗಳಿಗೆ ದುಡಿಯಲು ಹೋಗಿಬರುತ್ತಿರುತ್ತಾರೆ, ಅವರ ಆರೋಗ್ಯದತ್ತ ಹೆಚ್ಚಿನ ಗಮನ ವಹಿಸುವಂತೆ ಆರೋಗ್ಯ ಇಲಾಖೆಯವರಿಗೆ ಎಚ್ಚರಿಕೆ ನೀಡಿದರು. ಅಲ್ಲದೆ, ಅಂಗನವಾಡಿಗಳಿಗೆ ಪೂರೈಕೆಯಾಗುವ ಆಹಾರ ಸಾಮಗ್ರಿಗಳು ಕಳಪೆಯಾಗಿರುವ ಕುರಿತು ಸಾರ್ವಜನಿಕರಿಂದ ದೂರು ಕೇಳಿ ಬರುತ್ತಿದ್ದು, ಈ ಕುರಿತು ಗಮನ ಹರಿಸುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ನಾಗನಗೌಡ ಪಾಟೀಲ ಅವರಿಗೆ ತೇಲಿ ಅವರು ಸೂಚಿಸಿದರು. ತಾಪಂ ಇಒ ಸಂತೋಷ ಪಾಟೀಲ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × three =
Remember me
