
ಬೆಂಗಳೂರು:ಲೋಕಸಭೆ ಚುನಾವಣೆ ಮತ್ತು ವಿಧಾನ ಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಲಿತಾಂಶವೂ ಲಭ್ಯವಾಗಿರುವ ಹಿನ್ನೆಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗೂ ಮೈತ್ರಿ ಮುಂದುವರಿಸುವ ಸಾಧ್ಯತೆಗಳ ಬಗ್ಗೆ ಚರ್ಚೆ ಶುರುವಾಗಿದೆ.ಮುಂಬರಲಿರುವ ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇದೇ ರೀತಿಯಲ್ಲಿ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸಿದರೆ, ಎರಡೂ ಪಕ್ಷಗಳಿಗೂ ಲಾಭವಾಗಲಿದೆ ಎನ್ನುವ ತರ್ಕದ ಚರ್ಚೆಗಳು ಎರಡೂ ಪಕ್ಷದಲ್ಲಿವೆ.ಹಳೆ ಮೈಸೂರು ಭಾಗದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸಂಪ್ರದಾಯಿಕವಾಗಿ ಜೆಡಿಎಸ್ ಎದುರಾಳಿ. ಇನ್ನುಳಿದಂತೆ ಎಲ್ಲ ಕಡೆಯಲ್ಲೂ ಬಿಜೆಪಿ ಎದುರಾಳಿಯಾಗಿದೆ. ಆದ್ದರಿಂದ ಹಳೆ ಮೈಸೂರು ಭಾಗದಲ್ಲಿ ಹೆಚ್ಚು ಸ್ಥಾನಗಳನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟು, ಇನ್ನುಳಿದ ಕಡೆಯಲ್ಲಿ ಬಿಜೆಪಿ ಸ್ಪರ್ಧೆ ಮಾಡಬಹುದು ಎನ್ನುವ ಅಭಿಪ್ರಾಯಗಳು ಪಕ್ಷದಲ್ಲಿವೆ.ಜೆಡಿಎಸ್ ಹಾಲಿ ಶಾಸಕರು ಇರುವ ಕ್ಷೇತ್ರ ಮತ್ತು ಕಡಿಮೆ ಅಂತರದಿಂದ ಸೋಲಾಗಿರುವ ಕ್ಷೇತ್ರಗಳನ್ನು ಪರಿಗಣಿಸಿದರೆ 60 ರಿಂದ 70 ವಿಧಾನಸಭಾ ಕ್ಷೇತ್ರಗಳಲ್ಲಿ ಮಾತ್ರ ಜೆಡಿಎಸ್ ನೆಲೆ ಸಿಗಬಹುದು. ಇನ್ನು 150 ರಿಂದ 160 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿಗೆ ಯಾವುದೇ ಸಮಸ್ಯೆ ಬರುವುದಿಲ್ಲ. ಆದ್ದರಿಂದ ಪರಸ್ಪರ ಹೊಂದಾಣಿಕೆಯಿಂದ ಹೋಗುವುದು ಉತ್ತಮ ಎನ್ನುವ ಅಭಿಮತ ಎರಡೂ ಪಕ್ಷಗಳಲ್ಲಿದೆ.ಸ್ಥಳೀಯ ಸಂಸ್ಥೆಗಳ ಚುನಾವಣೆ ಆಗಿರುವುದರಿಂದ ಹೊಂದಾಣಿಕೆ ದೊಡ್ಡ ಪ್ರಮಾಣದಲ್ಲಿ ಪ್ರಯೋಜನವಾಗುವುದಿಲ್ಲ. ಆದ್ದರಿಂದ ಎರಡೂ ಪಕ್ಷಗಳು ಪ್ರತ್ಯೇಕವಾಗಿ ಸ್ಪರ್ಧೆ ಮಾಡುವುದು ಸೂಕ್ತ. ಗೆದ್ದ ಮೇಲೆ ಅಧಿಕಾರ ಹಿಡಿಯುವಾಗ ಹೊಂದಾಣಿಕೆಯಿಂದ ಹೋಗುವುದು ಸರಿಯಾದ ಕ್ರಮ ಎಂದು ಬಿಜೆಪಿ ಹಿರಿಯ ನಾಯಕರುಗಳು ಸಲಹೆ ನೀಡಿದ್ದಾರೆ.ಸ್ಥಳೀಯ ಸಂಸ್ಥೆಗಳಲ್ಲಿ ಮೈತ್ರಿಯನ್ನು ಮುಂದುವರಿಸುವ ಸಾಧಕ ಬಾಧಕಗಳ ಬಗ್ಗೆ ಇನ್ನಷ್ಟು ಚರ್ಚೆ ಮಾಡಿ ಬಳಿಕ ಸಹಮತಕ್ಕೆ ಬರುವ ಸಾದ್ಯತೆ ಇದೆ ಎಂದು ಬಿಜೆಪಿ ಉನ್ನತ ಮೂಲಗಳು ತಿಳಿಸಿವೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 4 =
Remember me
