
ಬೆಂಗಳೂರು:ಮುಂಬರಲಿರುವ ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಗೆ ಸಿದ್ಧತೆಗಳನ್ನು ನಡೆಸಲು ಜೆಡಿಎಸ್ ಮುಂದಾಗಿದೆ.ಲೋಕಸಭೆ ಚುನಾವಣೆ ಮುಗಿದ ಬೆನ್ನಲ್ಲಿಯೇ ವಿಧಾನ ಪರಿಷತ್ ಚುನಾವಣೆ ಎದುರಾಗಿದೆ. ಈ ಚುನಾವಣೆ ಮುಗಿದ ಬಳಿಕ ಜಿಪಂ ಮತ್ತು ತಾಪಂ ಚುನಾವಣೆ ನಡೆಸುವ ಇರಾದೆಯನ್ನು ಮುಖ್ಯಮಂತ್ರಿಗಳು ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ದಳಪತಿಗಳು ಕೂಡ ಅಲರ್ಟ್ ಆಗಿದ್ದಾರೆ.ಪ್ರಜ್ವಲ್ ಪ್ರಕರಣದಿಂದ ಪಕ್ಷಕ್ಕೆ ಆಗಿರುವ ಡ್ಯಾಮೇಜ್ ಕಂಟ್ರೋಲ್‌ಗೆ ಪಕ್ಷದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಬಿದ್ದ ಹೋಗಿರುವ ಪಕ್ಷದ ಇಮೇಜ್ ಹೆಚ್ಚಿಸಲು ಮೊದಲು ಕಾರ್ಯಕರ್ತರ ಪಡೆಯನ್ನ ಸಜ್ಜುಗೊಳಿಸಬೇಕು ಎನ್ನುವ ನಿಟ್ಟಿನಲ್ಲಿ ಜಿಲ್ಲಾ ಮತ್ತು ತಾಲೂಕು ಘಟಕಗಳಿಗೂ ಸೂಚನೆಯನ್ನು ರವಾನಿಸಿದ್ದಾರೆ.ಕಳೆದ ತಾಪಂ, ಜಿಪಂ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಹೆಚ್ಚಿನ ಸ್ಥಾನಗಳನ್ನು ಪಡೆದಿದ್ದರೆ, ನಂತರದ ಸ್ಥಾನದಲ್ಲಿ ಜೆಡಿಎಸ್ ಇತ್ತು. ವಿಶೇಷವಾಗಿ ಹಳೆಮೈಸೂರು ಭಾಗದಲ್ಲಿ ಹಾಸನ, ಮಂಡ್ಯ, ರಾಮನಗರ, ತುಮಕೂರು, ಬೆಂಗಳೂರು ಗ್ರಾಮಾಂತರದಲ್ಲಿ ಹಲವು ತಾಪಂಗಳಲ್ಲಿ ಅಧಿಕಾರವನ್ನು ಹಿಡಿದಿತ್ತು. ಕೆಲ ಜಿಪಂಗಳು ಜೆಡಿಎಸ್ ತೆಕ್ಕೆಗೆ ಒಲಿದಿದ್ದವು.ಈ ಬಾರಿ ಕನಿಷ್ಠ ತಮ್ಮ ಅಸ್ಥಿತ್ವವನ್ನು ಉಳಿಸಿಕೊಳ್ಳಲು ಶತಾಯ ಗತಾಯ ಹೋರಾಟ ಮಾಡಲೇಬೇಕು ಎಂದು ನಿರ್ಧರಿಸಿರುವ ದಳಪತಿಗಳು ಚುನಾವಣೆಗೆ ಕಾರ್ಯಕರ್ತರ ಪಡೆಗೆ ಸಜ್ಜುಗೊಳಿಸಲು ನಿರ್ಧರಿಸಿದ್ದು, ಅದಕ್ಕಾಗಿ ಈಗಿನಿಂದಲೇ ಸಿದ್ಧತೆಯನ್ನು ಪ್ರಾರಂಭಿಸಿದ್ದಾರೆ.
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:20 − 16 =
Remember me
