ಬೆಂಗಳೂರು: ಚಿಕಿತ್ಸೆಗೆ ಸಹಕರಿಸದ ಕರೊನಾ ಸೋಂಕಿತರ ಜತೆ ಪ್ರಾಥಮಿಕ ಸಂಪರ್ಕ ಹೊಂದಿರುವವರ ದೂರವಾಣಿ ಕರೆಗಳ ವಿವರ ಕಲೆಹಾಕುವ ಮೂಲಕ ಅವರ ಪತ್ತೆಗೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಬೆಂ. ನಗರ ಜಿಲ್ಲಾಧಿಕಾರಿ ಜಿ.ಎನ್.ಶಿವಮೂರ್ತಿ ಸೂಚಿಸಿದ್ದಾರೆ.
ಕರೊನಾ ಸೋಂಕು ತಡೆಯುವುದು ಮತ್ತು ಸೋಂಕಿತರೊಂದಿಗೆ ಸಂಪರ್ಕ ಹೊಂದಿದವರ ಪತ್ತೆ ಕುರಿತಂತೆ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಮಂಗಳವಾರ ಸಭೆ ನಡೆಸಲಾಯಿತು. ಈ ವೇಳೆ ಸಭೆಯಲ್ಲಿದ್ದ ಆರೋಗ್ಯ ಇಲಾಖೆ ಅಧಿಕಾರಿಗಳು, ಸೋಂಕಿತರ ಸಂಪರ್ಕದಲ್ಲಿದವರ ಮಾಹಿತಿ ಕಲೆ ಹಾಕುವ ಕೆಲಸ ನಿರೀಕ್ಷಿತ ಮಟ್ಟದಲ್ಲಿ ಸಾಗುತ್ತಿಲ್ಲ. ಇಲಾಖೆ ಸಿಬ್ಬಂದಿ ಮನೆ ಮನೆ ಸರ್ವೆ ನಡೆಸಿದರೂ, ಮಾಹಿತಿ ಸಿಗುತ್ತಿಲ್ಲ ಎಂದು ಹೇಳಿದರು.
ಅದಕ್ಕೆ ಪ್ರತಿಕ್ರಿಯಿಸಿದ ಡಿಸಿ, ಸೋಂಕಿತರ ಜತೆ ಪ್ರಾಥಮಿಕ ಸಂಪರ್ಕ ಹೊಂದಿರುವವರ ಪತ್ತೆ ಮಾಡಲೇಬೇಕು. ಅದರಿಂದ ಸೋಂಕು ಹರಡುವ ಕೊಂಡಿ ತಪ್ಪುತ್ತದೆ. ಹೀಗಾಗಿ ಸೋಂಕಿತರ ಮತ್ತು ಅವರ ಸಂಪರ್ಕದಲ್ಲಿರುವವರ ದೂರವಾಣಿ ಕರೆಗಳ ವಿವರ ಸಿದ್ಧಪಡಿಸಿ. ಮುಂದಿನ 24 ಗಂಟೆ ಯೊಳಗಾಗಿ ಪಟ್ಟಿ ಸಿದ್ಧಪಡಿಸಿ ಸಲ್ಲಿಸಬೇಕು. ಜತೆಗೆ ಪ್ರಾಥಮಿಕ ಸಂಪರ್ಕದಲ್ಲಿದ್ದವ ರೊಂದಿಗೆ ಒಡನಾಟವಿಟ್ಟುಕೊಂಡಿದ್ದವರ ವಿವರವನ್ನು 24 ಗಂಟೆಗಳಲ್ಲಿ ಸಲ್ಲಿಸುವಂತೆ ಸೂಚಿಸಿದರು.
ಆಹಾರ ನೆರವಿಗೆ ಸಹಾಯ ಸೇತುವೆ ಆ್ಯಪ್ ಅಭಿವೃದ್ಧಿ ಪಡಿಸಿದೆ ಬಿಬಿಎಂಪಿ- ಇದು ಹೇಗೆ ಕೆಲಸ ಮಾಡುತ್ತೆ ಎಂಬ ವಿವರ ಇಲ್ಲಿದೆ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − twelve =
Remember me
