ವಿಜಯನಗರ(ಹೊಸಪೇಟೆ):ಹರಪನಹಳ್ಳಿ ತಾಲೂಕಿನ ಅಡವಿಹಳ್ಳಿ ಕ್ರಾಸ್ ಬಳಿ ಭಾನುವಾರ ತಡರಾತ್ರಿ ನಿಂತಿದ್ದ ಟ್ರ್ಯಾಕ್ಟರ್​ಗೆ ಟಾಟಾಏಸ್​ ಡಿಕ್ಕಿಯಾಗಿದ್ದು, ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ.
ಹೊಳಿಯಮ್ಮ(32), ದೊಡ್ಡಹಾಳು ಹನುಮಂತಪ್ಪ (46) ಹಾಗೂ ಲಕ್ಷ್ಮವ್ವ (42) ಮೃತ ದುರ್ದೈವಿಗಳು. ನಾಲ್ವರು ಗಾಯಗೊಂಡಿದ್ದಾರೆ. ಇವರೆಲ್ಲರೂ ಟ್ರ್ಯಾಕ್ಟರ್​ನಲ್ಲಿ ಹರಪನಹಳ್ಳಿಯಿಂದ ಕೊಟ್ಟೂರು ಪಟ್ಟಣಕ್ಕೆ ಜವಳ ಕಾರ್ಯಕ್ರಮಕ್ಕೆ ಹೋಗುತ್ತಿದ್ದರು.ಇದನ್ನೂ ಓದಿರಿರಾಮಮಂದಿರ ನಿರ್ಮಾಣಕ್ಕೆ ಹಣ ಕೊಡದವರ ಮನೆಗಳ ಗುರುತು: ಮಾಜಿ ಸಿಎಂ ಎಚ್​ಡಿಕೆ ಆತಂಕ
ರಸ್ತೆಬದಿ ನಿಂತಿದ್ದ ಟ್ರ್ಯಾಕ್ಟರ್​ಗೆ ಟಾಟಾ ಏಸ್​ ಡಿಕ್ಕಿ ಹೊಡೆದ ರಭಸಕ್ಕೆ ಸ್ಥಳದಲ್ಲೇ ಹೊಳಿಯಮ್ಮ ಮತ್ತು , ದೊಡ್ಡಹಾಳು ಹನುಮಂತಪ್ಪ ಮೃತಪಟ್ಟಿದ್ದರು. ಗಂಭೀರವಾಗಿ ಗಾಯಗೊಂಡು ಸಾವು-ಬದುಕಿನ ನಡುವೆ ಹೊರಾಡುತ್ತಿದ್ದ ಲಕ್ಷ್ಮವ್ವ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸೋಮವಾರ ಕೊನೆಯುಸಿರೆಳೆದರು.
ಮೃತರು ಮತ್ತು ಗಾಯಾಳುಗಳು ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಹೊಟ್ಟೆಗೇನಹಳ್ಳಿ ಗ್ರಾಮದವರು. ಹರಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೇಡ ಬೇಡ ಅಂದ್ರೂ ಸಾವಿನ ಮನೆಯ ಕದ ತಟ್ಟಿದ 15ರ ಬಾಲಕ! ಕಳೆದ ವಾರವೇ ಪೊಲೀಸರು ಎಚ್ಚರಿಸಿದ್ದರು

ಇಲ್ಲಿ ಎಎಸ್​ಐ, ಅಲ್ಲಿ ಕೆಎಸ್​ಆರ್​ಟಿಸಿ ಬಸ್​ ಕಂಡಕ್ಟರ್ ಸಾವು! ಕರ್ತವ್ಯನಿರತ ಸ್ಥಳದಲ್ಲಿ ಆಗಿದ್ದೇನು?

ಭಾವಿ ಪತಿಗೆ ತನ್ನ ಮನೆಯಲ್ಲೇ ಮಲಗಲು ಜಾಗ ಕೊಟ್ಟ ಯುವತಿ, ಬೆಳಗ್ಗೆ ಎದ್ದಾಗ ಅಲ್ಲೋಲ-ಕಲ್ಲೋಲ್ಲ​!

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:eighteen + nineteen =
Remember me
