ವಿಜಯವಾಣಿ ಸುದ್ದಿಜಾಲ, ಬೆಂಗಳೂರು:ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ.50 ಡಿಸ್ಕೌಂಟ್ ನೀಡಿದ 2ನೇ ದಿನ 22.36 ಲಕ್ಷ ರೂ. ದಂಡ ಸಂಗ್ರಹವಾಗಿದೆ. ಎರಡು ದಿನಗಳಲ್ಲಿ ಒಟ್ಟು 50.71 ಲಕ್ಷ ರೂ. ಸಂಗ್ರಹವಾಗಿದೆ.
ಫೆ.11ರ ಒಳಗೆ ಸಂಚಾರ ಪೊಲೀಸರು ದಾಖಲಿಸಿರುವ ಇ-ಚಲನ್ ದಂಡ ಪಾವತಿಗೆ 3ನೇ ಬಾರಿ ಶೇ.50 ರಿಯಾಯಿತಿ ನೀಡಿ ಸಾರಿಗೆ ಇಲಾಖೆ ಆದೇಶ ಹೊರಡಿಸಿತ್ತು.
ಈ ಸೌಲಭ್ಯ ಬಳಕೆ ಮಾಡಿಕೊಂಡಿರುವ ವಾಹನ ಸವಾರ, ಚಾಲಕರು ಶುಕ್ರವಾರ 7,160 ಪ್ರಕರಣಗಳಲ್ಲಿ 22,36,350 ರೂ. ದಂಡ ಪಾವತಿ ಮಾಡಿದ್ದಾರೆ. ಇದೀಗ ಒಟ್ಟಾರೆ ಎರಡು ದಿನಗಳಲ್ಲಿ 15,980 ಪ್ರಕರಣಗಳಿಂದ 50,71,850 ರೂ. ದಂಡ ಸಂಗ್ರಹವಾಗಿದೆ. ಸೆಪ್ಟೆಂಬರ್ 9ರ ವರೆಗೂ ಈ ಸೌಲಭ್ಯವಿದೆ. ಸಾರ್ವಜನಿಕರು ಬಳಸಿಕೊಳ್ಳಬೇಕೆಂದು ಸಂಚಾರ ಪೊಲೀಸರು ಸಲಹೆ ನೀಡಿದ್ದಾರೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:ten + 9 =
Remember me
