ಬೆಂಗಳೂರು:ರಾಜ್ಯ ರಸ್ತೆ ಸಾರಿಗೆ ನಿಗಮಗಳಲ್ಲಿನ ನೌಕರರ ತರಬೇತಿ ಅವಧಿ 2 ವರ್ಷದಿಂದ 1 ವರ್ಷಕ್ಕಿಳಿಸಿ ಸಾರಿಗೆ ಇಲಾಖೆ ಆದೇಶಿಸಿದೆ. ಆ ಮೂಲಕ ಸಾರಿಗೆ ನೌಕರರ 9 ಬೇಡಿಕೆಗಳ ಪೈಕಿ 8 ಬೇಡಿಕೆ ಈಡೇರಿದಂತಾಗಿದೆ.
ಸಾರಿಗೆ ನೌಕರರ ವೇತನಕ್ಕೆ 6ನೇ ವೇತನ ಆಯೋಗದ ಶಿಾರಸು ಅಳವಡಿಕೆ ಸೇರಿ 10 ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕಳೆದ ಡಿಸೆಂಬರ್‌ನಲ್ಲಿ ಸಾರಿಗೆ ನೌಕರರು ದೊಡ್ಡ ಮಟ್ಟದಲ್ಲಿ ಪ್ರತಿಭಟಿಸಿದ್ದರು. ಆ ವೇಳೆ 10 ಬೇಡಿಕೆಗಳ ಪೈಕಿ 9 ಬೇಡಿಕೆ ಈಡೇರಿಸುವ ಕುರಿತು ಸರ್ಕಾರ ಭರವಸೆ ನೀಡಿತ್ತು. ಅದರಂತೆ ಇದೀಗ ಆರೋಗ್ಯ ವಿಮೆ, ಕರೊನಾದಿಂದ ಮೃತಪಟ್ಟ ನೌಕರರ ಕುಟುಂಬಕ್ಕೆ 30 ಲಕ್ಷ ರೂ. ಪರಿಹಾರ ಸೇರಿ ಇನ್ನಿತರ 7 ಬೇಡಿಕೆಗಳನ್ನು ಕಳೆದೆರಡು ತಿಂಗಳಿನಿಂದ ಈಡೇರಿಸಲಾಗಿದೆ. ಇದೀಗ ತರಬೇತಿ ನೌಕರರ ಅವಧಿ ಕಡಿತಕ್ಕೂ ಸರ್ಕಾರ ಒಪ್ಪಿಗೆ ಸೂಚಿಸಿದೆ. ಅದರಂತೆ 2 ವರ್ಷದ ತರಬೇತಿ ಅವಧಿಯನ್ನು 1 ವರ್ಷಕ್ಕೆ ಇಳಿಸಲಾಗಿದೆ.
6ನೇ ವೇತನ ಆಯೋಗವೇ ಮುಖ್ಯ: ಸರ್ಕಾರ ನೌಕರರ ಬೇಡಿಕೆಗಳನ್ನು ಹಂತ ಹಂತವಾಗಿ ಈಡೇರಿಸುತ್ತಿದೆ. ಆದರೂ, ಸಾರಿಗೆ ನೌಕರರು ಮಾತ್ರ ತಮಗೂ ಮತ್ತು ಸರ್ಕಾರಿ ನೌಕರರಿಗಿರುವ ವೇತನ ತಾರತಮ್ಯ ನಿವಾರಿಸಲು ಆಗ್ರಹಿಸುತ್ತಿದ್ದಾರೆ. ಅದಕ್ಕಾಗಿ 6ನೇ ವೇತನ ಆಯೋಗದ ಶಿಫಾರಸು ಜಾರಿಗೆ ಒತ್ತಾಯಿಸುತ್ತಿದ್ದು, ಅಲ್ಲಿಯವರೆಗೆ ಬೇಡಿಕೆ ಈಡೇರಿಕೆ ಪೂರ್ಣವಾಗುವುದಿಲ್ಲ ಎಂದು ಹೇಳುತ್ತಿದ್ದಾರೆ.
ಸರ್ಕಾರಿ ನೌಕರರಿಗೆ ಮಹತ್ವದ ಸೂಚನೆ ಹೊರಡಿಸಿದ ಮುಖ್ಯ ಕಾರ್ಯದರ್ಶಿ

ನಂಬರ್​ ಪ್ಲೇಟ್​ ಮೇಲೆ ಹೆಸರು, ಹುದ್ದೆಯಿದ್ದರೆ ಶಿಕ್ಷೆ ಫಿಕ್ಸ್​! ವಾಹನ ಸವಾರರಿಗೆ ಆರ್​ಟಿಓ ಶಾಕ್​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − 10 =
Remember me
