ಎನ್.ಎಲ್. ಶಿವಮಾದುಬೆಂಗಳೂರುಸರ್ಕಾರಿ ಶಾಲಾ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್‌ಗೆ ಕೇವಲ 2 ದಿನಗಳು ಬಾಕಿ ಇರುವ ಸಮಯದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರ ಅನುಮೋದನೆ ಪಡೆದು 27 ಪ್ರೌಢಶಾಲಾ ಶಿಕ್ಷಕರನ್ನು ವರ್ಗಾವಣೆ ಹಾಗೂ 67 ಪ್ರಾಥಮಿಕ ಶಾಲಾ ಶಿಕ್ಷಕರನ್ನು ನಿಯೋಜನೆ (ಡೆಪ್ಯುಟೇಷನ್) ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.
ವರ್ಗಾವಣೆ ಪ್ರಕ್ರಿಯೆ ಪ್ರಗತಿಯಲ್ಲಿರುವಾಗಲೇ 68 ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರನ್ನು ವಿವಿಧ ಜಿಲ್ಲೆಗಳ ಶಾಲೆಗಳಿಗೆ ನಿಯೋಜಿಸಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟರೆ, 27 ಪ್ರೌಢಶಾಲಾ ಶಿಕ್ಷಕರನ್ನು ವರ್ಗಾವಣೆ ಮೂಲಕ ಶಿಕ್ಷಕರ ವರ್ಗಾವಣೆ ಕಾಯ್ದೆ ಉಲ್ಲಂಸಲಾಗಿದೆ ಎಂದು ಶಿಕ್ಷಕರು ಗಂಭೀರ ಆರೋಪ ಮಾಡಿದ್ದಾರೆ.
ಜು.4ರಂದು ಪ್ರಾಥಮಿಕ ಶಾಲಾ ಶಿಕ್ಷಕರನ್ನು ನಿಯೋಜನೆ ಮಾಡಲಾಗಿತ್ತು. ಜು.15ರಂದು ಇಲಾಖೆಯ ಅಧೀನ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದಾರೆ. ವರ್ಗಾವಣೆ ಪ್ರಕ್ರಿಯೆ ಜಾರಿಯಲ್ಲಿರುವ ಸಮಯದಲ್ಲಿ ನಿಯೋಜನೆ ಮತ್ತು ವರ್ಗಾವಣೆಗೆ ಯಾವ ರೀತಿಯಲ್ಲಿ ಅನುಮತಿ ಕೊಡುತ್ತಾರೆ ಎಂಬುದು ಶಿಕ್ಷಕರ ಪ್ರಶ್ನೆಯಾಗಿದೆ.
ಪ್ರಾಥಮಿಕ ಶಾಲಾ ಶಿಕ್ಷಕರ ನಿಯೋಜನೆ:
ಇದರಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಜಿಲ್ಲಾ ಉಸ್ತುವಾರಿ ಹೊಣೆ ಇರುವ. ಸ್ವಕ್ಷೇತ್ರ ಶಿವಮೊಗ್ಗ ಹಾಗೂ ದಾವಣಗೆರೆ ಜಿಲ್ಲೆಯಲ್ಲಿಯೇ 25 ಶಿಕ್ಷಕರನ್ನು ನಿಯೋಜಿಸಲಾಗಿದೆ. ಅಲ್ಲದೆ, ಒಟ್ಟು 48 ಮಹಿಳಾ ಶಿಕ್ಷಕರು ನಿಯೋಜನೆಯ ಲಾಭ ಪಡೆದಿದ್ದಾರೆ.ಆದರೆ, ವರ್ಗಾವಣೆ ಬಯಸಿರುವ ಶಿಕ್ಷಕರು ಸರ್ಕಾರದ ಕ್ರಮವನ್ನು ವಿರೋಧಿಸಿದ್ದು, ವರ್ಗಾವಣೆ ನಡೆಯುತ್ತಿರುವ ಸಮಯದಲ್ಲಿ ಪೂರ್ವ ನಿಯೋಜನೆ ಮಾಡಿರುವುದು ಅರ್ಹ ಶಿಕ್ಷಕರಿಗೆ ಅನ್ಯಾಯವಾಗಲಿದೆ. ಅಲ್ಲದೆ, ವರ್ಗಾವಣೆಗೆ ನಿಯಮಗಳನ್ನು ರೂಪಿಸಿರುವುದು ಕೂಡ ವ್ಯರ್ಥವಾಗಲಿದೆ ಎಂದು ಅಸಮಾಧಾನ ಹೊರ ಹಾಕಿದ್ದಾರೆ.
3-4 ಶಾಲೆಗಳ ಆಯ್ಕೆಗೆ ಅವಕಾಶ:
ರಾಜ್ಯದಲ್ಲಿ 2023-24ನೇ ಸಾಲಿನ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗಳು ಪ್ರಗತಿಯಲ್ಲಿದ್ದು, ಇದೇ 19ರಿಂದ ಜಿಲ್ಲಾ ಹಂತದ ವರ್ಗಾವಣೆ ಕೌನ್ಸೆಲಿಂಗ್ ಆರಂಭವಾಗಲಿದ್ದು, ಸಾವಿರಾರು ಶಿಕ್ಷಕರು ವರ್ಗಾವಣೆಗಾಗಿ ಕಾಯುತ್ತಿದ್ದಾರೆ.
ಆದರೆ, ಇದರ ಮಧ್ಯೆ ಸರ್ಕಾರ ಸದ್ದಿಲ್ಲದೆ ಬೇರೆ ಬೇರೆ ಶಾಲೆಗಳಿಗೆ ಶಿಕ್ಷಕರನ್ನು ನಿಯೋಜಿಸುತ್ತಿದೆ. ನಿಯೋಜನೆ ಸಮಯದಲ್ಲಿ ಕೆಲವು ಶಿಕ್ಷಕರಿಗೆ ಮೂರು ಅಥವಾ ನಾಲ್ಕು ಶಾಲೆಗಳನ್ನು ಆಯ್ಕೆ ಮಾಡಲು ಅವಕಾಶ ನೀಡಿರುವುದು ಶಿಕ್ಷಕರ ಕೆಂಗಣ್ಣಿಗೆ ಗುರಿಯಾಗಿದೆ. ಅನೇಕ ಶಿಕ್ಷಕರನ್ನು ಒಂದೇ ಜಿಲ್ಲೆಯೊಳಗೆ ಒಂದು ತಾಲ್ಲೂಕಿನಿಂದ ಇನ್ನೊಂದಕ್ಕೆ ನಿಯೋಜಿಸಲಾಗಿದೆ ಮತ್ತು ಕೆಲವು ಶಿಕ್ಷಕರನ್ನು ಅದೇ ತಾಲ್ಲೂಕಿನಲ್ಲಿರುವ ವಿವಿಧ ಶಾಲೆಗಳಿಗೆ ನಿಯೋಜಿಸಲಾಗಿದೆ.
ವರ್ಗಾವಣೆ ಕೌನ್ಸೆಲಿಂಗ್ ಸಮಯದಲ್ಲಿ, ಸಂಬಂಧಪಟ್ಟ ತಾಲ್ಲೂಕು ಅಥವಾ ಜಿಲ್ಲೆಯ ವ್ಯಾಪ್ತಿಯಲ್ಲಿ ಒಂದು ಶಾಲೆಯನ್ನು ಮಾತ್ರ ಆಯ್ಕೆ ಮಾಡಲು ನಮಗೆ ಅವಕಾಶವಿದೆ. ಆದರೆ, ಕೊಪ್ಪಳ ಜಿಲ್ಲೆಯಿಂದ ಮೈಸೂರು ಜಿಲ್ಲೆಗೆ ನಿಯೋಜನೆಗೊಂಡಿರುವ ಶಿಕ್ಷಕರೊಬ್ಬರಿಗೆ ತಿ.ನರಸೀಪುರ ತಾಲ್ಲೂಕಿನಲ್ಲಿ ನಾಲ್ಕು ಶಾಲೆಗಳನ್ನು ಆಯ್ಕೆ ಮಾಡಲು ಅವಕಾಶ ನೀಡಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನಿಂದ ನೆಲಮಂಗಲ ತಾಲ್ಲೂಕಿಗೆ ನಿಯೋಜನೆಗೊಂಡಿರುವ ಶಿಕ್ಷಕರಿಗೆ ಮೂರು ಶಾಲೆಗಳ ಆಯ್ಕೆ ನೀಡಲಾಗಿದೆ. ಹೀಗಾಗಿ ಜುಲೈ 19ರಂದು ನಡೆಯಲಿರುವ ವರ್ಗಾವಣೆ ಕೌನ್ಸೆಲಿಂಗ್ ವೇಳೆ ನಿಯೋಜನೆಗೊಂಡ ಶಿಕ್ಷಕರು ಶಾಲೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ತೋರಿಸುತ್ತಾರಾ? ಖಾಲಿ ತೋರಿಸುತ್ತೋ ಇಲ್ಲವೋ ಗೊತ್ತಿಲ್ಲ’ ಎಂಬುದು ವರ್ಗಾವಣೆ ಬಯಸಿರುವ ಶಿಕ್ಷಕರೊಬ್ಬರ ಆತಂಕವಾಗಿದೆ.
ವರ್ಗಾವಣೆ ಬಯಸಿರುವ ಶಿಕ್ಷಕರ ವಿರೋಧ
ವರ್ಗಾವಣೆ ಪ್ರಕ್ರಿಯೆ ನಡೆಯುತ್ತಿರುವಾಗಲೇ ಶಿಕ್ಷಕರನ್ನು ನಿಯೋಜಿಸುವ ಸರ್ಕಾರದ ನಿರ್ಧಾರಕ್ಕೆ ಶಿಕ್ಷಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.ಕೆಲವು ಶಿಕ್ಷಕರನ್ನು ನಿಯೋಜಿಸುವ ಮೂಲಕ ಸರ್ಕಾರವು ಅವರ ಆದ್ಯತೆಯ ಸ್ಥಳಗಳಲ್ಲಿ ಕೆಲಸ ಮಾಡಲು ಅವಕಾಶ ಮಾಡಿಕೊಟ್ಟಿದೆ. ಹೀಗಾಗಿ, ಇದು ಶಿಕ್ಷಕರ ವರ್ಗಾವಣೆ ಕಾಯ್ದೆಯ ಸಿಂಧುತ್ವವನ್ನು ಪ್ರಶ್ನಿಸುವ ಜತೆಗೆ ಅದರ ಮೂಲ ಉದ್ದೇಶಕ್ಕೆ ಧಕ್ಕೆ ತರುತ್ತದೆ ಎನ್ನುತ್ತಾರೆ ಶಿಕ್ಷಕರು.
ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು (ಶಿಕ್ಷಕರ ವರ್ಗಾವಣೆ ನಿಯಂತ್ರಣ) ಅಧಿನಿಯಮ-2020ರ ಪ್ರಕಾರ ಅಧಿಸೂಚನೆಯಂತೆ ವರ್ಗಾವಣೆ ಪ್ರಕ್ರಿಯೆಗಳನ್ನು ನಡೆಸಬೇಕು. ಅರ್ಜಿ ಸಲ್ಲಿಕೆ, ಕೌನ್ಸೆಲಿಂಗ್, ಸ್ಥಳ ನಿಯುಕ್ತಿ ಸೇರಿ ಪ್ರತಿ ಹಂತ ಕೂಡ ಆನ್‌ಲೈನ್ ಮೂಲಕವೇ ನಡೆಸಬೇಕಿದೆ ಎಂಬ ನಿಯಮವಿದೆ. ಆದರೆ, ಸಚಿವರ ಅನುಮೋದನೆ ಮೇರೆಗೆ ವರ್ಗಾವಣೆ ಮಾಡಲಾಗಿದೆ ಎಂಬ ಆದೇಶ ಹೊರಡಿಸಲಾಗಿದೆ.
ಶಿಕ್ಷಕರ ವರ್ಗಾವಣೆ ಕಾಯ್ದೆ ಉಲ್ಲಂಸಿ ಸರ್ಕಾರವು ವರ್ಗಾವಣೆ ಮಾಡಿದೆ. ಅದೇ ರೀತಿ ಎಲ್ಲ ಶಿಕ್ಷಕರಿಗೂ ಮಾನದಂಡ ಅನುಸರಿಸುತ್ತಾ ಎಂಬ ಅನುಮಾನ ಮೂಡಿದೆ. ಸರ್ಕಾರವು ಈ ವಿಚಾರವಾಗಿ ಸ್ಪಷ್ಟತೆ ಕೊಡಬೇಕಿದೆ.– ಅರುಣ್ ಶಹಾಪುರ, ಮಾಜಿ ಎಂಎಲ್‌ಸಿ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four + 8 =
Remember me
