ಬೆಂಗಳೂರು:ಮಹರ್ಷಿ ವಾಲ್ಮಿಕಿ ಅಭಿವೃದ್ಧಿ ನಿಗಮದ ಹಗರಣ ಕುರಿತು ಸಿಐಡಿ ತನಿಖೆ ನಡೆಸುತ್ತಿದೆ. ಬೇರೆಬೇರೆ ಐಟಿ ಕಂಪನಿಗಳಿಗೆ ವರ್ಗಾವಣೆಯಾಗಿರುವ ಆರೋಪ ತನಿಖೆಯಿಂದ ಹೊರಬರುತ್ತದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದರು.
ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದೊಂದು ಘಟನೆ ಆದಾಗಲೂ ಪ್ರತಿಪಕ್ಷದವರು ರಾಜೀನಾಮೆ ಕೇಳುತ್ತಾರೆ. ಹಣ ವರ್ಗಾವಣೆಗೆ ಮೌಖಿಕವಾಗಿ ಆದೇಶ ಕೊಟ್ಟಿದ್ದಾರೆ ಎಂಬ ಆರೋಪ ತನಿಖೆಯಲ್ಲಿ ಸಾಬೀತಾದರೆ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ. ಈಶ್ವರಪ್ಪ ಅವರ ವಿರುದ್ಧದ ಪ್ರಕರಣದಲ್ಲಿ ಅವರ ಹೆಸರನ್ನು ನೇರವಾಗಿ ಆರೋಪಿಸಲಾಗಿತ್ತು. ಈ ಪ್ರಕರಣದಲ್ಲಿ ಸಚಿವರ ಹೆಸರನ್ನು ಎಲ್ಲಿಯೂ ನೇರವಾಗಿ ಹೇಳಿಲ್ಲ. ತನಿಖೆ ಆಗುವವರೆಗೂ ಕಾಯಬೇಕು ಎಂದು ಹೇಳಿದರು.
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ಬಂಧನಕ್ಕೆ ಪಕ್ಷ ಎಂಬುದು ಬರುವುದಿಲ್ಲ. ಪ್ರಕರಣದಲ್ಲಿ ಭಾಗಿಯಾಗಿರುವುದು ಕಂಡು ಬಂದರೆ ಅಂತವರನ್ನು ಬಂಧಿಸಲಾಗುತ್ತದೆ ಎಂದು ಹೇಳಿದರು.
ಕಾಂಗ್ರೆಸ್, ಜನತಾದಳ, ಬಿಜೆಪಿ ಎಂಬುದಕ್ಕಿಂತ ಹೆಚ್ಚಾಗಿ, ಈ ಪ್ರಕರಣದಲ್ಲಿ ಯಾರು ಭಾಗಿಯಾಗಿರುವುದು ಕಂಡು ಬರುತ್ತದೆಯೋ ಅಂತವರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತದೆ. ಈಗಾಗಲೇ ಪ್ರಕರಣದಲ್ಲಿ 11-12 ಜನರನ್ನು ಬಂಧಿಸಲಾಗಿದೆ ಎಂದರು.
ಪ್ರಜ್ವಲ್ ವಿರುದ್ಧ ವಾರಂಟ್ ಜಾರಿಯಾಗಿರುವುದರಿಂದ ಬಂಧಿಸಬೇಕಾಗುತ್ತದೆ. ಇದಕ್ಕೆ ಸಂಬಂಧಿಸಿದಂತೆ ಎಸ್‌ಐಟಿಯವರು ಪ್ರಕ್ರಿಯೆ ಆರಂಭಿಸಿದ್ದಾರೆ ಎಂದು ತಿಳಿಸಿದರು.
ಎಂಎಲ್‌ಸಿ ಅಭ್ಯರ್ಥಿಗಳ ಆಯ್ಕೆ ವಿಚಾರದ ಕುರಿತು. ನನ್ನ ಹೇಳಿಕೆಯನ್ನು ಯಾರು ತಪ್ಪಾಗಿ ಅರ್ಥೈಸಿಕೊಳ್ಳಬೇಕಾದ ಅಗತ್ಯ ಇಲ್ಲ. ಪ್ರಮುಖರೊಂದಿಗೆ ಸಮಾಲೋಚನೆ ಅಭ್ಯರ್ಥಿಗಳ ಆಯ್ಕೆ ಮಾಡಬೇಕಾದುದು ಪ್ರಕ್ರಿಯೆ. ಯಾರು ಸಹ ಇದನ್ನು ತಪ್ಪು ಅಂತ ಹೇಳಲಾಗುವುದಿಲ್ಲ. ನಾನು ಸಹ ಕೆಪಿಸಿಸಿ ಅಧ್ಯಕ್ಷನಾಗಿ ಕೆಲಸ ಮಾಡಿದ ಅನುಭವದಿಂದ ಆ ಮಾತು ಹೇಳಿದ್ದೇನೆ. ನಾವು ಹೇಳಿದವರಿಗೆ ಅವಕಾಶ ನೀಡಬೇಕು ಅಂತ ಹೇಳಲು ಬರುವುದಿಲ್ಲ ಎಂದು ಸ್ಪಷ್ಟಪಡಿಸಿದರು.ಪಕ್ಷಕ್ಕಾಗಿ ಕೆಲಸ ಮಾಡಿದ ಅನೇಕರಿಗೆ ಅನುಭವ ಇರುತ್ತದೆ. ಅಂತವರೊಂದಿಗೆ ಸಮಾಲೋಚಿಸಿ ಅಭಿಪ್ರಾಯ ಪಡೆಯಬೇಕು ಎಂಬುದನ್ನು ಹೇಳಿದ್ದೇನೆ. ಹೈಪವರ್ ಕಮಿಟಿ ರಚಿಸಿ, ಚರ್ಚಿಸಿದರೆ ಸಲಹೆಗಳು ಬರುತ್ತವೆ. ಹೈಪವರ್ ಕಮಿಟಿ ರಚಿಸುವ ಸಮಯ ಮೀರಿದೆ ಎಂದು ಡಾ.ಪರಮೇಶ್ವರ ಹೇಳಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 + 4 =
Remember me
