ಕೋಟ:ಶಿಕ್ಷಕ ಸ್ನೇಹಿ ವರ್ಗಾವಣೆ ಕಾಯ್ದೆಯನ್ನು ಮುಂದಿನ ಶೈಕ್ಷಣಿಕ ವರ್ಷದಲ್ಲಿ ಜಾರಿಗೆ ತರಲಾಗುವುದು. ಈ ಕಾಯ್ದೆಯಿಂದ ಇಚ್ಛಿಸುವ ಶಿಕ್ಷಕರಷ್ಟೇ ವರ್ಗಾವಣೆ ಮಾಡಿಕೊಳ್ಳಬಹುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದರು.
ಡಾ.ಶಿವರಾಮ ಕಾರಂತ ಥೀಂ ಪಾರ್ಕ್​ನಲ್ಲಿ ಸೋಮವಾರ ವಿದ್ಯಾರ್ಥಿ ಮತ್ತು ಶಿಕ್ಷಕರೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು. ಈಗಾಗಲೇ ಬೇರೆ ಜಿಲ್ಲೆಗಳಿಗೆ ವರ್ಗಾವಣೆಗೊಂಡ ಶಿಕ್ಷಕರು ತಾವು ಬಯಸುವ ಸ್ಥಳಕ್ಕೆ ಮರು ವರ್ಗಾವಣೆ ಮಾಡಿಕೊಳ್ಳಬಹುದು. ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಅವರ ತಾಲೂಕು ಮತ್ತು ಪ್ರೌಢಶಾಲಾ ಶಿಕ್ಷಕರಿಗೆ ಅವರ ಜಿಲ್ಲಾ ವ್ಯಾಪ್ತಿಯಲ್ಲಿ ವರ್ಗಾವಣೆ ಮಾಡಿಕೊಳ್ಳಲು ಅವಕಾಶ ಸಿಗಲಿದೆ ಎಂದು ತಿಳಿಸಿದರು.
ಮಾರ್ಚ್ 31ರೊಳಗೆ ಮಕ್ಕಳ, ಶಿಕ್ಷಕರ ಮತ್ತು ಪಾಲಕರ ಸಮಸ್ಯೆಗಳಿಗೆ ಸ್ಪಂದಿಸಲು ಟೋಲ್ ಫ್ರೀ ಸಹಾಯವಾಣಿ ಆರಂಭವಾಗಲಿದೆ. ಶಾಲೆಗೆ ಅನುದಾನ ನೀಡಿದ ದಾನಿಗಳು ಮತ್ತು ಶಿಕ್ಷಣ ಪ್ರೇಮಿಗಳನ್ನು ಎಸ್​ಡಿಎಂಸಿಯಲ್ಲಿ ಸೇರ್ಪಡೆ ಮಾಡುವ ಚಿಂತನೆ ಇದೆ. ವಿಜ್ಞಾನ ಶಿಕ್ಷಕರನ್ನು ನೇಮಿಸಿಕೊಳ್ಳುವ ಪ್ರಕ್ರಿಯೆ ನಡೆಯಲಿದೆ. ಪ್ರತಿ ಸರ್ಕಾರಿ ಶಾಲೆಯಲ್ಲೂ ಎಲ್​ಕೆಜಿ, ಯುಕೆಜಿ ಪ್ರಾರಂಭಿಸಲಾಗುವುದು. ಗುರುಸ್ಪಂದನ ಕಾರ್ಯಕ್ರಮಕ್ಕೆ ಪುನಶ್ಚೇತನ ಸಿಗಲಿದೆ. ಪಿಂಚಣಿ ಸಮಸ್ಯೆಗೆ ಪರಿಹಾರ ಒದಗಿಸಿಲು ಮಂಗಳವಾರ ಸಭೆ ನಡೆಸಿ ನಿರ್ಧರಿಸಲಾಗುವುದು ಎಂದು ತಿಳಿಸಿದರು.
ಅನುದಾನ ರಹಿತ ಶಾಲೆಗಳ ಶಿಕ್ಷಕರಿಗೂ ತರಬೇತಿ, ಬಿಸಿಯೂಟ ತಯಾರಕರ ವೇತನ ಹೆಚ್ಚಳ, ಪ್ರತಿಭಾ ಕಾರಂಜಿಯಂತೆ ಕ್ರೀಡಾಕೂಟಗಳಿಗೂ ಅನುದಾನ ನೀಡುವ ಬಗ್ಗೆ ಚಿಂತನೆ ನಡೆಸಲಾಗುವುದು ಎಂದರು.
ಈಗಾಗಲೇ ಆರಂಭಿಸಿರುವ ಸಾವಿರ ಇಂಗ್ಲಿಷ್ ಶಾಲೆಗಳಿಗೆ ತೊಂದರೆಯಾಗದಂತೆ ಇನ್ನೂ ಒಂದು ಸಾವಿರ ಇಂಗ್ಲಿಷ್ ಶಾಲೆ ಆರಂಭಿಸಲಾಗುವುದು.
| ಸುರೇಶ್ ಕುಮಾರ್ಸಚಿವ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight − two =
Remember me
