ಬೆಂಗಳೂರು:ನಿಶ್ಚಿತಾರ್ಥ ಹಾಗೂ ಮದುವೆಯ ಸಂಭ್ರಮವಿದ್ದ ಮನೆಯಲ್ಲೀಗ ಭಾರಿ ಶೋಕ ಆವರಿಸಿದೆ. ಮಾರ್ಗಮಧ್ಯೆ ಸಂಭವಿಸಿದ ದುರಂತವೊಂದರಲ್ಲಿ ತಂದೆ-ಮಗಳು ಇಬ್ಬರೂ ಗಂಭೀರ ಗಾಯಗೊಂಡಿದ್ದು, ಆ ಪೈಕಿ ತಂದೆ ಸಾವಿಗೀಡಾದರೆ ಪುತ್ರಿಯ ಪರಿಸ್ಥಿತಿ ಗಂಭೀರವಾಗಿದೆ. ಬೆಂಗಳೂರಿನ ಉಲ್ಲಾಳ ಸಮೀಪದ ಮಂಗನಹಳ್ಳಿಯ ಶಿವರಾಜ್ (55) ಸಾವಿಗೀಡಾದ ತಂದೆ. ಚೈತನ್ಯಾ (19) ಗಂಭೀರ ಪರಿಸ್ಥಿತಿಯಲ್ಲಿರುವ ಪುತ್ರಿ.
ಸೆಕ್ಯುರಿಟಿ ಗಾರ್ಡ್ ಆಗಿದ್ದ ಶಿವರಾಜ್ ದಂಪತಿಗೆ 15 ವರ್ಷಗಳ ಬಳಿಕ ಚೈತನ್ಯಾ ಹುಟ್ಟಿದ್ದಳು. ಒಬ್ಬಳೇ ಮಗಳು, ದ್ವಿತೀಯ ಪಿಯುಸಿ ಓದುತ್ತಿದ್ದಳು. ಮದುವೆಗೆ ಹುಡುಗನನ್ನು ನೋಡಿ ಏಪ್ರಿಲ್ ಮೊದಲ ವಾರದಲ್ಲಿ ನಿಶ್ಚಿತಾರ್ಥ ನಿಗದಿ ಮಾಡಿದ್ದರು. ಮುಂದಿನ ವಾರ ಸಂಬಂಧಿಕರ ಮದುವೆ ಇದ್ದ ಕಾರಣ ಬೆಳಗ್ಗೆ ತಂದೆ-ಮಗಳು ಹೊಸ ಬಟ್ಟೆ ಖರೀದಿಸಿಕೊಂಡು ಹಾಗೇ ನಿಶ್ಚಿತಾರ್ಥಕ್ಕೆ ಪಾರ್ಟಿ ಹಾಲ್ ಬುಕ್ ಮಾಡಲು ಹೋಗಿದ್ದರು. ಅಲ್ಲಿಂದ ದ್ವಿಚಕ್ರ ವಾಹನದಲ್ಲಿ ಮಧ್ಯಾಹ್ನ 3 ಗಂಟೆಯಲ್ಲಿ ಮನೆಗೆ ವಾಪಸ್ ಬರುತ್ತಿದ್ದಾಗ ಕೆಲವೇ ನಿಮಿಷದಲ್ಲಿ ಮನೆ ಸೇರುತ್ತಿದ್ದರು.
ಮಾರ್ಗಮಧ್ಯೆ ಮಂಗನಹಳ್ಳಿ ಬ್ರಿಡ್ಜ್ ಬಳಿಯ ತಾಂತ್ರಿಕ ದೋಷದಿಂದ ಟ್ರಾನ್ಸ್​​ಫಾರ್ಮರ್​ ಸ್ಫೋಟಗೊಂಡು ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ತಂದೆ-ಮಗಳ ಮೇಲೆ ಬೆಂಕಿ ಕಿಡಿ ಮತ್ತು ಆಯಿಲ್ ತಗುಲಿ ಇಬ್ಬರಿಗೂ ಬೆಂಕಿ ಹೊತ್ತಿಕೊಂಡಿದೆ. ಸ್ಫೋಟದ ಸದ್ದು ಕೇಳಿ ಮತ್ತು ದಾರಿ ಹೋಕರು ಬಂದು ತಂದೆ, ಮಗಳನ್ನು ರಕ್ಷಣೆ ಮಾಡಲು ಪ್ರಯತ್ನ ಮಾಡಿದ್ದಾರೆ.
ಇದನ್ನೂ ಓದಿ:ಮುತ್ತಲ್ಲೂ ಮೋಸ: ಐನೂರಕ್ಕೂ ಹೆಚ್ಚು ಮಂದಿಗೆ ವಂಚನೆ
ಕಣ್ಣೆದುರೇ ತಂದೆ-ಮಗಳು ಬೆಂಕಿಗೆ ಸಿಲುಕಿರುವ ದೃಶ್ಯವನ್ನು ಕಂಡು ಸ್ಥಳೀಯರು ಕಣ್ಣೀರು ಹಾಕುತ್ತ ಬೆಡ್‌ಶೀಟ್ ಹೊದಿಸಿ ಹರಸಾಹಸ ಪಟ್ಟು ಬೆಂಕಿಯಿಂದ ಇಬ್ಬರನ್ನು ರಕ್ಷಣೆ ಮಾಡಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದಾರೆ. ವಿಷಯ ತಿಳಿದ ಅಗ್ನಿ ಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ. ಸ್ಥಳಕ್ಕೆ ಭೇಟಿ ಕೊಟ್ಟ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ತಂದೆ-ಮಗಳು ಇಬ್ಬರನ್ನೂ ವಿಕ್ಟೋರಿಯಾ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕಕ್ಕೆ ದಾಖಲಿಸಲಾಗಿತ್ತು. ತಂದೆ ಶಿವರಾಜ್ ದೇಹ ಶೇ.70 ಸುಟ್ಟು ಹೋಗಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾಗಿದ್ದು, ಚೈತನ್ಯಾ ದೇಹವು ಶೇ.50 ಸುಟ್ಟಿದ್ದು, ಪರಿಸ್ಥಿತಿ ಚಿಂತಾಜನಕವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೆಸ್ಕಾಂ ನಿರ್ಲಕ್ಷ್ಯದ ಆರೋಪದ ಮೇಲೆ ಅಧಿಕಾರಿಗಳ ವಿರುದ್ಧ ಎಫ್​ಐಆರ್ ದಾಖಲಿಸಿ ತನಿಖೆ ಕೈಗೊಂಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಜ್ಞಾನಭಾರತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗನಹಳ್ಳಿ ರಸ್ತೆಯಲ್ಲಿ ಇರುವ ಟ್ರಾನ್ಸ್​ಫಾರ್ಮರ್​​ನಲ್ಲಿ ಆಯಿಲ್ ಸೋರಿಕೆ ಆಗುತ್ತಿದ್ದ ಬಗ್ಗೆ ಬುಧವಾರ ಬೆಳಗ್ಗೆ ಸ್ಥಳೀಯರು ಬೆಸ್ಕಾಂ ಸಹಾಯವಾಣಿಗೆ ಕರೆ ಮಾಡಿ ದೂರು ನೀಡಿದ್ದಾರೆ. ಯಾರೂ ಬಂದು ದುರಸ್ತಿ ಮಾಡಿಲ್ಲ. ಆಯಿಲ್ ಸೋರಿಕೆ ಹೆಚ್ಚಾಗಿ ಬೆಂಕಿ ಕಿಡಿ ತಗುಲಿ ಟ್ರಾನ್ಸ್​ಫಾರ್ಮರ್​ ಸ್ಫೋಟಗೊಂಡಿರುವ ಸಾಧ್ಯತೆಗಳು ಹೆಚ್ಚಾಗಿವೆ. ದೂರು ಸ್ವೀಕರಿಸಿದ ಕೂಡಲೇ ಬೆಸ್ಕಾಂ ಸಿಬ್ಬಂದಿ ಸ್ಥಳಕ್ಕೆ ಭೇಟಿ ಕೊಟ್ಟು ದೋಷ ಸರಿ ಮಾಡಿದ್ದರೆ ಬಹುಶಃ ಅನಾಹುತ ತಪ್ಪುತ್ತಿತ್ತು. ಇದಕ್ಕೆ ಬೆಸ್ಕಾಂ ಅಧಿಕಾರಿಗಳೇ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಸ್ಥಳಕ್ಕೆ ಸಚಿವರ ಭೇಟಿ:ಅನಾಹುತ ಸಂಭವಿಸಿದ ಸ್ಥಳಕ್ಕೆ ಸ್ಥಳೀಯ ಶಾಸಕ, ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಭೇಟಿ ಕೊಟ್ಟು ಪರಿಶೀಲನೆ ನಡೆಸಿದರು. ಅನಾಹುತ ಕುರಿತು ಸ್ಥಳೀಯರಿಂದ ಮತ್ತು ಪೊಲೀಸರಿಂದ ಮಾಹಿತಿ ಪಡೆದರು. ಟ್ರಾನ್ಸ್​ಫಾರ್ಮರ್​​ ದೋಷದ ಬಗ್ಗೆ ದೂರು ನೀಡಿದರೂ ನಿರ್ಲಕ್ಷ್ಯ ವಹಿಸಿದ ಬೆಸ್ಕಾಂ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಪೊಲೀಸರಿಗೆ ಸಚಿವರು ಸೂಚನೆ ನೀಡಿದ್ದಾರೆ.
ಅಭಿಮಾನಿಗಳಲ್ಲಿ ಕ್ಷಮೆ ಕೋರಿದ್ರು ಜೇಮ್ಸ್ ನಿರ್ಮಾಪಕ..

ನಮ್ಮದೇ ಮೊದಲ ‘ದಸರಾ’ ಎಂದ ಶರ್ಮಿಳಾ; ತೆಲುಗು ನಿರ್ಮಾಪಕರ ವಿರುದ್ಧ ವಾಣಿಜ್ಯ ಮಂಡಳಿಗೆ ದೂರು..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − 10 =
Remember me
