ಬೆಂಗಳೂರು:ಹಿರಿಯ ವಿದ್ವಾಂಸ ಎ. ನರಸಿಂಹ ಭಟ್ಟರು ಇಂದು ನಿಧನರಾದರು. ಸಾಹಿತ್ಯ ಮತ್ತು ವೇದಾಂತಗಳ ಪರಿಣತರಾಗಿದ್ದ ಅವರು ಅನುವಾದ ಕ್ಷೇತ್ರದಲ್ಲಿ ಹೆಸರುವಾಸಿಯಾಗಿದ್ದರು. ಮೂಲತಃ ಕಾಸರಗೋಡಿನವರಾದ ಇವರು ಶಿಕ್ಷಣ ಕ್ಷೇತ್ರದಲ್ಲಿ ಅಪಾರ ಸೇವೆ ಸಲ್ಲಿಸಿ, ಪ್ರೌಢಶಾಲಾ ಮುಖ್ಯೋಪಾಧ್ಯಾಯರಾಗಿ ನಿವೃತ್ತರಾಗಿದ್ದರು.
ಡಿವಿಜಿಯವರ ಮಂಕುತಿಮ್ಮನ ಕಗ್ಗ, ಮರುಳಮುನಿಯನ ಕಗ್ಗ ಮತ್ತು ಗೋವಿಂದಪೈಯವರ ಗೊಲ್ಗೊಥಾ ಮತ್ತು ವೈಶಾಖಿ ಕಾವ್ಯಕೃತಿಗಳನ್ನು ಇಂಗ್ಲಿಷ್​ಗೆ ಅನುವಾದಿಸಿದ್ದರು. ಕನ್ನಡದಲ್ಲೂ ಇವುಗಳಿಗೆ ಸರಳವಾಗಿ ಅರ್ಥವಾಗುವಂತೆ ಅದ್ಭುತ ವ್ಯಾಖ್ಯಾನಗಳನ್ನು ಪ್ರಕಟಿಸಿದ್ದರು.
ಇವರು ದೇವಮಾನವ ಯೇಸು, ಮಿರ್ದಾನನ ಮಂತ್ರಪುಸ್ತಕ, ದೇವಪ್ರವಾದಿ ಹಾಗೂ ಪಥರಹಿತ ಪಥ ಎಂಬ ಕೃತಿಗಳನ್ನು ಹೊರತಂದಿದ್ದರು. ಫ್ರೂಟ್ಸ್‌ ಆ್ಯಂಡ್​ ನಟ್ಸ್ ಎಂಬ ಶೀರ್ಷಿಕೆಯಲ್ಲಿ 115 ಶ್ರೇಷ್ಠ ಕವಿತೆಗಳನ್ನು ಇಂಗ್ಲಿಷಿಗೆ ಭಾಷಾಂತರಿಸಿದ್ದರು. ನೂರು ಭಾವಗೀತೆಗಳನ್ನು ಸಿಂಗಿಂಗ್ ಸೆಂಟಿಮೆಂಟ್ಸ್ ಎಂಬ ಹೆಸರಿನಲ್ಲಿ ಇಂಗ್ಲಿಷಿಗೆ ಅನುವಾದಿಸಿದ್ದರು. ಅಂತೆಯೇ ಭವ್ಯ ಅನ್ಯಭಾಷಾ ಸಾಹಿತ್ಯದ ಸ್ವಾದವನ್ನು ಪಾಂಡಿತ್ಯಪೂರ್ಣವಾಗಿ ಕನ್ನಡಕ್ಕೆ ತಂದಿದ್ದರು.ಇವರಿಗೆ ಕುವೆಂಪು ಭಾಷಾ ಪ್ರಶಸ್ತಿ, ಡಿವಿಜಿ ಪ್ರತಿಷ್ಠಾನ ಬಳಗದ ಗೌರವವೂ ಸೇರಿ ಅನೇಕ ಪುರಸ್ಕಾರಗಳು ಸಂದಿದ್ದವು.
ನಿವೃತ್ತನಾಗಿದ್ರೂ ಲಂಚಕ್ಕಾಗಿ ಹೊರಗುತ್ತಿಗೆ ನೌಕರನಾಗಿ ಬಂದ; ಕಡೆಗೂ ಸಿಕ್ಕಿಬಿದ್ದ…

ಬರೀ ಚಿಲ್ಲರೆ ಹಣದಲ್ಲೇ ಸ್ಕೂಟರ್ ಖರೀದಿಸಿದ ಭೂಪ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 + five =
Remember me
