ಬೆಂಗಳೂರು:ಸಾರಿಗೆ ಇಲಾಖೆಯು ಶಕ್ತಿ ಯೋಜನೆಗೆ ಮತ್ತಷ್ಟು ಶಕ್ತಿ ತುಂಬಲು ಪ್ಲಾನ್ ಮಾಡಿದ್ದು, ಅಹಿತಕರ ಘಟನೆಗಳು ನಡೆಯದಂತೆ ಸಾರಿಗೆ ಸಿಬ್ಬಂದಿಗೆ ಎಚ್ಚರಿಕೆಯನ್ನು ನೀಡಿದೆ.ಶಕ್ತಿಯೋಜನೆಯಡಿ ಮಹಿಳೆಯರಿಗೆ ಉಚಿತ ಪ್ರಯಾಣ ನೀಡಲಾಗುತ್ತಿದ್ದು, ಈ ಯೋಜನೆಯ ಯಶಸ್ವಿ ಅನುಷ್ಠಾನಕ್ಕೆ ಚಾಲನಾ ಸಿಬ್ಬಂದಿಗಳ ಪರಿಶ್ರಮವು ಹೆಚ್ಚಿನ ಮಟ್ಟದಲ್ಲಿರುತ್ತದೆ. ಆದರೆ ಕೆಲ ಅಹಿತಕರ ಘಟನೆಗಳು ಯೋಜನೆ ಬಗ್ಗೆ ಭಿನ್ನಾಭಿಪ್ರಾಯವನ್ನು ಮೂಡಿಸುತ್ತಿವೆ.ಇದನ್ನೂ ಓದಿ:ಮೆಟ್ರೋ ಪಿಲ್ಲರ್ ಕುಸಿದು ತಾಯಿ-ಮಗ ಸಾವು ಪ್ರಕರಣ: 1100 ಪುಟಗಳ ಚಾರ್ಜ್​ಶೀಟ್ ಸಲ್ಲಿಕೆ, 11 ಮಂದಿ ವಿರುದ್ಧ ಆರೋಪಈ ಹಿನ್ನೆಲೆಯಲ್ಲಿ ಸಿಬ್ಬಂದಿಗಳು ಮಹಿಳಾ ಪ್ರಯಾಣಿಕರ ಹಿತದೃಷ್ಟಿ ಕಾಯಬೇಕಾಗಿದ್ದು, ಬಸ್ ನಿಲ್ಲಿಸದೇ ಇರುವುದು ಮತ್ತೀತರ ದೂರುಗಳು ಬರಬಾರದು ಎಂದು ಎಚ್ಚರಿಕೆಯನ್ನು ನೀಡುವುದರ ಜತೆಗೆ ಈ ಬಗ್ಗೆ ಸಾರಿಗೆ ಇಲಾಖೆ ಸುತ್ತೋಲೆಯನ್ನು ಹೊರಡಿಸಿದೆ.ಚಾಲನಾ ಸಿಬ್ಬಂದಿಗಳು ನಿಗಮದ ಸಾರಿಗೆಗಳಲ್ಲಿ ಪ್ರಯಾಣಿಸುವ ಮಹಿಳಾ ಪ್ರಯಾಣಿಕರೊಂದಿಗೆ ಸೌಜನ್ಯಯುತವಾಗಿ ವರ್ತಿಸುವುದು ಹಾಗೂ ಈ ಬಗ್ಗೆ ಮಹಿಳಾ ಪ್ರಯಾಣಿಕರಿಂದ ಯಾವುದೇ ದೂರುಗಳಿಗೆ ಅವಕಾಶ ನೀಡದಂತೆ ಕರ್ತವ್ಯ ನಿರ್ವಹಿಸುವುದು. ತಪ್ಪಿದಲ್ಲಿ, ಈ ಬಗ್ಗೆ ಗಂಭೀರವಾಗಿ ಪರಿಗಣಿಸಲಾಗುವುದು ಎಂದು ತಿಳಿಸಲಾಗಿದೆ.
ಅದಾಗ್ಯೂ ಸಹ ಮಹಿಳೆಯರು ಇರುವ ಬಸ್ ನಿಲ್ದಾಣದಲ್ಲಿ ಬಸ್ ನಿಲ್ಲಿಸದೇ ಇರುವುದು, ಮಹಿಳಾ ಪ್ರಯಾಣಿಕರಿಗೆ ಉಚಿತವಾಗಿ ಪ್ರಯಾಣಿಸುವ ಬಗ್ಗೆ ಅಪಹಾಸ್ಯ ಮಾಡುವುದು ಹಾಗೂ ಇನ್ನಿತರ ರೀತಿಯಲ್ಲಿ ಮಹಿಳೆಯರೊಂದಿಗೆ ಆಗೌರವದಿಂದ ನಡೆದುಕೊಳ್ಳುತ್ತಿರುವ ಪಕರಣಗಳ ಬಗ್ಗೆ ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಲ್ಲಿ ವರದಿಗಳು ಪ್ರಸಾರವಾಗುತ್ತಿರುವುದನ್ನು ಮಾನ್ಯ ಸಾರಿಗೆ ಹಾಗೂ ಮುಜರಾಯಿ ಸಚಿವರು ಗಂಭೀರವಾಗಿ ಪರಿಗಣಿಸಿದ್ದಾರೆ.ಇದನ್ನೂ ಓದಿ:ಪ್ರಧಾನಿ ಮೋದಿ ಅಮೇರಿಕಾ ಪ್ರವಾಸ: ಅತಿಥಿಗಳ ಭೋಜನಕೂಟಕ್ಕೂ, ಗುಜರಾತ್​ಗೂ ಇದೆ ಈ ವಿಶೇಷ ವೈನ್​ ನಂಟು!ಮಹಿಳೆಯರಿಗೆ ವಿತರಿಸುವ ಟಿಕೆಟ್ ಮೊತ್ತವನ್ನು ಸಾರಿಗೆ ಅದಾಯವೆಂದು ಪರಿಗಣಿಸಲಾಗುತ್ತಿರುವ ಹಿನ್ನೆಲೆಯಲ್ಲಿ ನಿಗಮದ ಚಾಲಕ ಮತ್ತು ನಿರ್ವಾಹಕರುಗಳು ಮಹಿಳಾ ಪ್ರಯಾಣಿಕರೊಂದಿಗೆ ಯಾವುದೇ ರೀತಿಯಲ್ಲಿ ಅಗೌರವದಿಂದ ನಡೆದುಕೊಳ್ಳುವ ಪ್ರಕರಣಗಳು ವರದಿಯಾದಲ್ಲಿ, ಸಂಬಂಧಪಟ್ಟ ಚಾಲಕ ಮತ್ತು ನಿರ್ವಾಹಕರ ಮೇಲೆ ಸೂಕ್ತ ಶಿಸ್ತು ಕ್ರಮ ಕೈಗೊಳ್ಳುವುದು ಎಂದು ತಿಳಿಸಲಾಗಿದೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 + one =
Remember me
