ಬೆಳಗಾವಿ:ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರ ಶನಿವಾರ ಎರಡನೇ ದಿನಕ್ಕೆ ಕಾಲಿಟ್ಟಿದೆ. ಈ ನಡುವೆ ಶುಕ್ರವಾರ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಬಸ್​ ಚಾಲಕರೊಬ್ಬರು ತಡರಾತ್ರಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ವಡಗಾವಿಯ ನಿವಾಸಿ ದತ್ತಾ ಮಂಡೋಳ್ಕರ್ (58) ಮೃತರು. ಬೆಳಗಾವಿಯ ಎರಡನೇ ಘಟಕದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಬಸ್ ಚಾಲಕ ದತ್ತಾ ಮಂಡೋಳ್ಕರ್, ಶುಕ್ರವಾರ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಆ ವೇಳೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮನೆಗೆ ತೆರಳಿದ್ದರು. ತಡರಾತ್ರಿ ಕೊನೆಯುಸಿರೆಳೆದಿದ್ದಾರೆ. ಇಂದೂ ಕೂಡ ಬೆಳಗಾವಿಯಲ್ಲಿ ನೌಕರರ ಪ್ರತಿಭಟನೆ ಮುಂದುವರಿದಿದೆ.
ಪ್ರಯಾಣಿಕರೇ ಗಮನಿಸಿ… ತೀವ್ರಗೊಂಡಿದೆ ಸಾರಿಗೆ ನೌಕರರ ಮುಷ್ಕರ, ಎಲ್ಲೆಡೆ ಬಸ್​ ಬಂದ್​

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:thirteen − six =
Remember me
