ಬೆಂಗಳೂರು:ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸುವಂತೆ ವಿಧಾನಸೌಧ ಚಲೋ ಪ್ರತಿಭಟನೆಗೆ ಸರ್ಕಾರ ಸ್ಪಂದಿಸದ ಕಾರಣ ಸಾರಿಗೆ ನೌಕರರು ಇಂದು ಕರ್ತವ್ಯ ಬಹಿಷ್ಕರಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಬೆಂಗಳೂರು ಸೇರಿ ಹಲವೆಡೆ ಬಸ್​ ಸಂಚಾರದಲ್ಲಿ ವ್ಯತ್ಯಾಸವಾಗಿದ್ದು, ಪ್ರಯಾಣಿಕರು ಸಂಕಷ್ಟಕ್ಕೆ ಒಳಗಾಗಿದ್ದಾರೆ.
ರಾಜ್ಯದಲ್ಲಿನ ನಾಲ್ಕು ನಿಗಮಗಳಿಂದ 1.30 ಲಕ್ಷ ನೌಕರರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ. ಇದರಿಂದ ಶುಕ್ರವಾರ ಬಸ್​ಗಳ ಕಾರ್ಯಾಚರಣೆಯಲ್ಲಿ ಯಾವುದೇ ವ್ಯತ್ಯಾಸವಾಗುವುದಿಲ್ಲ ಎಂದು ಕೆಎಸ್​ಆರ್​ಟಿಸಿ ತಿಳಿಸಿದೆ. ಆದರೆ, ಬಸ್ ಸೇವೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ ಹೆಚ್ಚಾಗಿದೆ. ಸಾರಿಗೆ ನೌಕರರ ಪ್ರತಿಭಟನೆಗೆ ರಾಜ್ಯ ರೈತ ಸಂಘ ಮತ್ತು ಹಸಿರುಸೇನೆ ಬೆಂಬಲ ಸೂಚಿಸಿದೆ. ಕಳೆದ ಮೂರ್ನಾಲ್ಕು ವರ್ಷಗಳಿಂದ ಬಸ್ ಸೇವೆಯಲ್ಲಿ ವ್ಯತ್ಯವಾಗಿರಲಿಲ್ಲ. ಸರ್ಕಾರದ ನಡೆಯಿಂದ ಬೇಸತ್ತು ಬೃಹತ್ ಪ್ರತಿಭಟನೆಗೆ ಸಾರಿಗೆ ನೌಕರರು ಮುಂದಾಗಿದ್ದಾರೆ.
ಇದನ್ನೂ ಓದಿ:Web Exclusive|ತುಂಗಭದ್ರಾ ಏತ ನೀರಾವರಿಯಿಂದ ಸಿಎಂ ಕ್ಷೇತ್ರಕ್ಕೆ ನೀರು; ಭೂಸ್ವಾಧೀನಕ್ಕೆ ರೈತರ ವಿರೋಧ
ಸಾರಿಗೆ ನೌಕರರಿಂದ ವಿಧಾನಸೌಧ ಚಲೋ:ಸಾರಿಗೆ ನೌಕರರು ನಿನ್ನೆ ನಡೆಸಿದ ವಿಧಾನಸೌಧ ಚಲೋ ಬೃಹತ್ ಪ್ರತಿಭಟನೆಗೆ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಹಾಗೂ ಸ್ಪಟಿಕಪುರಿ ಮಹಾಸಂಸ್ಥಾನದ ಪೀಠಾಧ್ಯಕ್ಷ ನಂಜಾವಧೂತ ಸ್ವಾಮೀಜಿ ಬೆಂಬಲ ನೀಡಿದರು. ಸಾರಿಗೆ ಸಚಿವರು ಸಂಜೆ 4 ಗಂಟೆಯೊಳಗಾಗಿ ಪ್ರತಿಭಟನಾ ಸ್ಥಳ ಪ್ರೀಡಂಪಾರ್ಕ್​ಗೆ ಬಂದು ಸರ್ಕಾರಿ ನೌಕರರಾಗಿ ತಮ್ಮನ್ನು ಪರಿಗಣಿಸುವ ಬೇಡಿಕೆ ಬಗ್ಗೆ ಸರ್ಕಾರದ ಸ್ಪಷ್ಟ ನಿಲುವು ತಿಳಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಗಡುವು ಮುಗಿದರೂ ಸಾರಿಗೆ ಸಚಿವ ಅಥವಾ ಸರ್ಕಾರದ ಪರ ಯಾವೊಬ್ಬ ಪ್ರತಿನಿಧಿಯೂ ಪ್ರತಿಭಟನಾ ಸ್ಥಳದ ಕಡೆ ಸುಳಿಯಿಲಿಲ್ಲ. ಇದರಿಂದ ಕುಪಿತರಾದ ಸಾರಿಗೆ ನೌಕರರು, ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಮುಂದಾದಾಗ ಪೊಲೀಸರು ವಶಕ್ಕೆ ಪಡೆದು ಬಿಎಂಟಿಸಿ ಬಸ್​ಗಳಲ್ಲಿ ಕರೆದೊಯ್ದರು.
ಇದನ್ನೂ ಓದಿ:ಬರಿಯ ಸಂಪತ್ತನ್ನಲ್ಲದೆ ಯೋಗಕ್ಷೇಮವನ್ನೂ ಸೃಷ್ಟಿಸಬೇಕು: ಸದ್ಗುರು ಅಂಕಣ
ಬಿಎಂಟಿಸಿ ಸುತ್ತೋಲೆ :ಸಾರಿಗೆ ಅಗತ್ಯ ಸೇವೆಗಳ ಅಡಿಯಲ್ಲಿ ಬರುವುದರಿಂದ ಸಾರ್ವಜನಿಕರಿಗೆ ಸೇವೆ ನೀಡುವುದು ಕರ್ತವ್ಯವಾಗಿದೆ. ಯಾವುದೇ ಕಾರಣಕ್ಕೂ ಬಸ್ ಸಂಚಾರದಲ್ಲಿ ವ್ಯತ್ಯಯವಾಗುವಂತಿಲ್ಲ. ಪ್ರತಿಭಟನೆ ನೆಪ ಹೇಳಿ ರಜೆ ಹಾಕಿದರೆ ದಿನದ ವೇತನ ಕಡಿತಗೊಳಿಸುವುದಾಗಿ ಬಿಎಂಟಿಸಿ ಸುತ್ತೋಲೆ ಮೂಲಕ ನೌಕರರಿಗೆ ಎಚ್ಚರಿಕೆ ನೀಡಿದೆ.
ಕ್ಷಣ ಕ್ಷಣದ ಸುದ್ದಿಗಳ ಅಪ್ಡೇಟ್ಸ್​ಗಾಗಿ ನಮ್ಮಫೇಸ್​ಬುಕ್​ ಪುಟಲೈಕ್ ಮಾಡಿ ಮತ್ತು ಫಾಲೋ ಮಾಡಿ..
ದೇಶದಲ್ಲಿ ಕರೊನಾ ಪ್ರಕರಣಗಳ ನಿರಂತರ ಇಳಿಕೆ; ಶೇಕಡ 94.66ಕ್ಕೇರಿತು ಚೇತರಿಕೆ ಪ್ರಮಾಣ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 3 =
Remember me
