ರಾಮನಗರ/ವಿಜಯಪುರ:ಸರ್ಕಾರಿ ನೌಕರರೆಂದು ಪರಿಗಣಿಸುವಂತೆ ಆಗ್ರಹಿಸಿ ಸಾರಿಗೆ ನೌಕರರು ನಡೆಸುತ್ತಿರುವ ದಿಢೀರ್ ಮುಷ್ಕರದ ಪರಿಣಾಮ ಸಾರ್ವಜನಿಕ ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ನಡುವೆ, ಮುಷ್ಕರ ಯಶಸ್ವಿಗೊಳಿಸಬೇಕೆಂಬ ಭರದಲ್ಲಿ ರಾಮನಗರದಲ್ಲಿ ಕೆಎಸ್​ಆರ್​ಟಿಸಿ ಬಸ್​ ಮೇಲೆ ಕಲ್ಲು ತೂರಾಟ ನಡೆದಿದೆ.
ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಮುದುಗೆರೆ ಗ್ರಾಮದಲ್ಲಿ ಅಪರಿಚಿತರು ಕೆಎಸ್​ಆರ್​ಟಿಸಿ ಬಸ್​ಗೆ ಕಲ್ಲು ತೂರಿದ್ದಾರೆ. ಬಸ್ಸಿನ ಮುಂಭಾಗದ ಗಾಜು ಪುಡಿಯಾಗಿದ್ದು, ಪ್ರಯಾಣ ವಿವರದ ಬೋರ್ಡ್ ಇರುವ ಕಡೆ ಕಲ್ಲು ಬಿದ್ದ ಗುರುತಾಗಿದೆ. ಪ್ರಯಾಣಿಕರಿಗೆ ಯಾರಿಗೂ ತೊಂದರೆಯಾಗಿಲ್ಲ. ಮೈಸೂರಿನಿಂದ ಬೆಂಗಳೂರಿಗೆ ಬಸ್​ ಸಂಚರಿಸುತ್ತಿತ್ತು. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿದ್ದಾರೆ.
ಇದನ್ನೂ ಓದಿ:‘ಸಾರ್ವಜನಿಕರು ಸಹಕರಿಸಿ’ – ಉಪಮುಖ್ಯಮಂತ್ರಿಯೂ ಆಗಿರುವ ಸಾರಿಗೆ ಸಚಿವ ಲಕ್ಷ್ಮಣ ಸವದಿ ಮನವಿ !
ಇನ್ನೊಂದೆಡೆ ವಿಜಯಪುರ ಜಿಲ್ಲಾ ಕೇಂದ್ರದಲ್ಲಿರುವ ಬಸ್​ನಿಲ್ದಾಣದಲ್ಲಿ ಸಾರಿಗೆ ನೌಕರರು ಪ್ರತಿಭಟನೆ ನಡೆಸುವುದಕ್ಕೆ ಮುಂದಾಗಿದ್ದರು. ಇದಕ್ಕೆ ಅವಕಾಶ ನೀಡದ ಪೊಲೀಸರು ಸಾರಿಗೆ ನೌಕರರ ನಾಯಕರೆನಿಸಿಕೊಂಡವರ ಕತ್ತಿನಪಟ್ಟಿ ಹಿಡಿದೆಳೆದುಕೊಂಡು ಹೋದದೃಶ್ಯ ಕಂಡುಬಂತು. ಕೂಡಲೇ ಉಳಿದ ನೌಕರರೂ ಜತೆಗೂಡಿ ಪೊಲೀಸರಿಗೆ ಮನವಿ ಮಾಡಿಕೊಂಡು ಇಬ್ಬರು ಪೊಲೀಸ್ ವಶದಿಂದ ಬಿಡಿಸಿಕೊಂಡು ಹೋದರು.
ಸಾರಿಗೆ​ ನೌಕರರ ಮುಷ್ಕರ – ಎಲ್ಲೆಲ್ಲಿ ಏನೇನು ಸ್ಥಿತಿಗತಿ..?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten − 7 =
Remember me
