ಬೆಂಗಳೂರು:ಸಾರಿಗೆ ನೌಕರರ ಮುಷ್ಕರ ಮೂರನೆ ದಿನಕ್ಕೆ ಕಾಲಿರಿಸಿದ್ದು, ನೌಕರರನ್ನು ಮಾತುಕತೆ ಆಹ್ವಾನಿಸಿರುವ ಸಾರಿಗೆ ಸಚಿವ ಡಿಸಿಎಂ ಲಕ್ಷ್ಮಣ ಸವದಿ ತಮ್ಮ ಖಾಸಗಿ ನಿವಾಸದಲ್ಲಿ ಅವರಿಗಾಗಿ ಕಾಯುತ್ತಿದ್ದಾರೆ. ಪೂರ್ವನಿಗದಿತ ಕಾರ್ಯಕ್ರಮಗಳನ್ನೂ ಅವರು ರದ್ದುಗೊಳಿಸಿದ್ದು, ಸಾರಿಗೆ ನೌಕರರ ಸಮಸ್ಯೆ ಇತ್ಯರ್ಥಕ್ಕೆ ಮುಂದಾಗಿದ್ದಾರೆ.
ಸಂಜೆ ತನಕ ನೌಕರರ ಜತೆಗೆ ಮಾತುಕತೆಗೆ ಕಾಯುವುದಕ್ಕೆ ಸರ್ಕಾರ ಮುಂದಾಗಿದೆ. ಅಷ್ಟರೊಳಗೆ ನೌಕರರು ಮಾತುಕತೆಗೆ ಮುಂದಾಗದೇ ಇದ್ದರೆ ಸೂಕ್ತ ತೀರ್ಮಾನವನ್ನು ಸರ್ಕಾರವೇ ತೆಗೆದುಕೊಳ್ಳಲಿದೆ. ನೌಕರರು ಪಟ್ಟು ಸಡಿಲಿಸದಿದ್ದರೆ ಕಾನೂನು ಕ್ರಮ ಜರುಗಿಸುವುದಕ್ಕೆ ಸರ್ಕಾರ ಚಿಂತನೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ:ಮಂಗಳೂರು ಮಾದರಿ ಕೋಮುಗಲಭೆ ಸೃಷ್ಟಿಗೆ ಯತ್ನ, ರಾಣೆಬೆನ್ನೂರಲ್ಲಿ 11 ಜನರ ಬಂಧನ
ಡಿಸಿಎಂ ಸವದಿ ಅವರಿಗೆ ಇಂದು ಬಿಜೆಪಿ ರಾಜ್ಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರ ಜತೆಗೆ ಮೀಟಿಂಗ್ ನಿಗದಿ ಆಗಿತ್ತು. ಅದನ್ನೂ ರದ್ದುಗೊಳಿಸಿರುವ ಸವದಿ, ನೌಕರರ ಸಮಸ್ಯೆ ಇತ್ಯರ್ಥಕ್ಕೆ ಆದ್ಯತೆ ನೀಡಿದ್ದಾರೆ. (ದಿಗ್ವಿಜಯ ನ್ಯೂಸ್)
ಕ್ಷಣ ಕ್ಷಣದ ಸುದ್ದಿಗಳ ಅಪ್ಡೇಟ್ಸ್​ಗಾಗಿ ನಮ್ಮಫೇಸ್​ಬುಕ್​ ಪುಟಲೈಕ್ ಮಾಡಿ ಮತ್ತು ಫಾಲೋ ಮಾಡಿ..
ಸಾರಿಗೆ ನೌಕರರ ಮುಷ್ಕರ ಎರಡನೆ ದಿನ: ಸಾರಿಗೆ ಸಮರಕ್ಕೆ ನಲುಗಿದ ಸಾರ್ವಜನಿಕರು, ಮಲಗಿದೆ ಆಡಳಿತ ಯಂತ್ರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 + fourteen =
Remember me
