ಚಾಮರಾಜನಗರ:ಚಲಿಸುತ್ತಿದ್ದ ಕಾರಿನ ಮೇಲೆ ಮರವೊಂದು ಉರುಳಿಬಿದ್ದ ಪರಿಣಾಮವಾಗಿ ಕಾರಿನಲ್ಲಿದ್ದ ತಂದೆ ಮಗ ಇಬ್ಬರೂ ಸ್ಥಳದಲ್ಲೇ ದಾರುಣ ಸಾವಿಗೀಡಾಗಿದ್ದಾರೆ. ಚಾಮರಾಜನಗರ ತಾಲೂಕಿನ ಸಂತೇಮರಹಳ್ಳಿ ಸಮೀಪ ಹೆಗ್ಗವಾಡಿ ಕ್ರಾಸ್ ಬಳಿ ಈ ಅಪಘಾತ ಸಂಭವಿಸಿದೆ.
ಹೊನ್ನೂರು ಗ್ರಾಮದ ಹೆಚ್.ಬಿ.ರಾಜು (49) ಹಾಗೂ ಇವರ ಪುತ್ರ ಶರತ್ (22) ಸಾವಿಗೀಡಾದವರು. ಯಳಂದೂರಿನಲ್ಲಿ ಹೋಲ್‌ಸೇಲ್ ಅಂಗಡಿ ನಡೆಸುತ್ತಿದ್ದ ರಾಜಣ್ಣ ತಮ್ಮ ಪುತ್ರನೊಂದಿಗೆ ಕಾರಿನಲ್ಲಿ ಕುದೇರು ರಸ್ತೆಯಲ್ಲಿ ಸಾಗುತ್ತಿದ್ದಾಗ ಈ ಅವಘಡ ಸಂಭವಿಸಿದೆ.
ಇವರು ಮಾರುತಿ ಒಮ್ನಿಯಲ್ಲಿ ಪ್ರಯಾಣಿಸುತ್ತಿದ್ದು, ಆಲದ ಮರ ಬಿದ್ದ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಒಳಗಿದ್ದ ಇವರಿಬ್ಬರು ಅಪ್ಪಚ್ಚಿಯಾಗಿ ಸಾವಿಗೀಡಾಗಿದ್ದಾರೆ. ಸಂತೇಮರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಮನೆ ಮೇಲೇ ಕುಸಿದ ಗುಡ್ಡ, ಮಕ್ಕಳಿಬ್ಬರು ಮಣ್ಣಿನಡಿ ಸಿಲುಕಿ ಸಾವು..
ಮಗನ ಮೇಲೆ ಚಿರತೆ ದಾಳಿ ಸುದ್ದಿ ಕೇಳಿ ತಾಯಿ ಹೃದಯಾಘಾತದಿಂದ ಸಾವು; ಬದುಕುಳಿದ ಮಗನಿಗೆ ಮತ್ತೊಂದು ಶಾಕ್!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − 6 =
Remember me
