ಬೆಂಗಳೂರು:ಮಾಜಿ ಸಚಿವ, ಹಾಲಿ ಮದ್ದೂರು ಶಾಸಕ ಡಿ.ಸಿ. ತಮ್ಮಣ್ಣ ಮತ್ತು ಅವರ ಪತ್ನಿ, ಪುತ್ರನ ವಿರುದ್ಧ ದಾಖಲಾಗಿದ್ದ ವಂಚನೆ ಪ್ರಕರಣದ ತನಿಖೆಗೆ ಸುಪ್ರೀಂಕೋರ್ಟ್ ಗ್ರೀನ್ ಸಿಗ್ನಲ್ ತೋರಿಸಿದೆ. ಆದೇಶ ಹೊರಬೀಳುತ್ತಿದಂತೆ ಸಂಜಯನಗರ ಪೊಲೀಸರು 7 ವರ್ಷದ ಬಳಿಕ ಮತ್ತೆ ತನಿಖೆ ಚುರುಕುಗೊಳಿಸಿದ್ದಾರೆ.
ಸಂಜಯನಗರದ ವೈದ್ಯ
ಡಾ. ಲಕ್ಷ್ಮಣ್, ಅತ್ತಿಬೆಲೆ ಹೋಬಳಿಯ ಬಳ್ಳೂರಲ್ಲಿ ಆಸ್ಪತ್ರೆ ನಿರ್ವಣಕ್ಕಾಗಿ 100 ಎಕರೆ ಜಮೀನು ಖರೀದಿಸಲು ಯೋಜಿಸಿದ್ದರು. ಅದಕ್ಕಾಗಿತಮ್ಮಣ್ಣ ಪುತ್ರ ಸಂತೋಷ್ ಮಾಲೀಕತ್ವದ ಪ್ರಮೀಳಾ- ಸಂತೋಷ್ ಲ್ಯಾಂಡ್ ಡೆವಲಪರ್ಸ್ ಜತೆ 2012ರಲ್ಲಿ ಒಡಂಬಡಿಕೆ ಮಾಡಿಕೊಂಡಿದ್ದರು. ಸಂತೋಷ್​ಗೆ 9 ಕೋಟಿ ರೂ.ಗಳನ್ನುಲಕ್ಷ್ಮಣ್ ಪಾವತಿಸಿದ್ದರು. ಆದರೆ, ಸಂತೋಷ್ ಜಮೀನು ಕೊಡಿಸಿಲ್ಲ. ಹಣವನ್ನೂ ಹಿಂದಿರುಗಿಸಿರಲಿಲ್ಲ. ಹೀಗಾಗಿ ಲಕ್ಷ್ಮಣ್ 2013ರ ಮೇ 29ರಂದು ಸಿಟಿ ಸಿವಿಲ್ ಕೋರ್ಟ್ ಮೊರೆ ಹೋಗಿದ್ದರು. ವಾದ ಆಲಿಸಿದ ಕೋರ್ಟ್, ಪ್ರಕರಣ ದಾಖಲಿಸಿ ತನಿಖೆ ನಡೆಸುವಂತೆ ಸಂಜಯನಗರ ಪೊಲೀಸರಿಗೆ ನಿರ್ದೇಶನ ನೀಡಿತ್ತು.
ಕೋರ್ಟ್ ನಿರ್ದೇಶನದ ಮೇಲೆ ತಮ್ಮಣ್ಣ, ಪತ್ನಿ ಪ್ರಮೀಳಾ ಮತ್ತು ಪುತ್ರ ಸಂತೋಷ್ ವಿರುದ್ಧ ಎಫ್​ಐಆರ್ ದಾಖಲಿಸಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದರು. ಸಂತೋಷ್ ವಿಚಾರಣೆಗೆ ಹಾಜರಾಗಿದ್ದರು. ಇದಾದ ಕೆಲವೇ ದಿನಕ್ಕೆ ಅಧೀನ ನ್ಯಾಯಾಲಯ ನೀಡಿದ ಆದೇಶ ಪ್ರಶ್ನಿಸಿ ಹೈಕೋರ್ಟ್​ಗೆ ಮೇಲ್ಮನವಿ ಹೋಗಿದ್ದರು. ಹೈಕೋರ್ಟ್​ನಲ್ಲಿ ಪೊಲೀಸರ ಪರವಾದ ಮೇಲೆ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ವಾದ- ಪ್ರತಿವಾದ ಆಲಿಸಿದ ಸುಪ್ರೀಂಕೋರ್ಟ್, ಮಾಜಿ ಸಚಿವರ ಕುಟುಂಬದ ವಿರುದ್ಧ ಕೇಳಿ ಬಂದಿರುವ ಸಂಬಂಧ ಪೊಲೀಸರು ತನಿಖೆ ಮುಂದುವರಿಸುವಂತೆ ಆದೇಶಿಸಿದೆ. ತೀರ್ಪಿನ ಪ್ರತಿ ಪಡೆದಿರುವ ಸಂಜಯನಗರ ಪೊಲೀಸರು, ಮತ್ತೆ ತನಿಖೆ ಕೈಗೊಂಡಿದ್ದಾರೆ.
ವಿಚಾರಣೆ ನಡೆಸುವ ಸಾಧ್ಯತೆ
ಹೊಸದಾಗಿ ಆರೋಪಿಗಳಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆ ನಡೆಸಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ. ಡಿಸೆಂಬರ್​ನಲ್ಲಿ ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ಮಾರ್ಚ್ ನಲ್ಲಿ ಆದೇಶ ಪ್ರತಿ ಕೈ ಸೇರಿದ್ದು, ಕರೊನಾ ಲಾಕ್​ಡೌನ್ ಹಿನ್ನೆಲೆಯಲ್ಲಿ ತನಿಖೆಗೆ ಅಡ್ಡಿ ಉಂಟಾಗಿದೆ. ಶೀಘ್ರ ವಿಚಾರಣೆ ಪೂರ್ಣಗೊಳಿಸಿ ಕೋರ್ಟ್​ಗೆ ಆರೋಪಪಟ್ಟಿ ಸಲ್ಲಿಸುವುದಾಗಿ ಪೊಲೀಸರು ತಿಳಿಸಿದ್ದಾರೆ.
ಅಮೆರಿಕ ಇನ್ನೂ ಆತಂಕ, ಕತಾರ್ ಚೇತರಿಕೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen + sixteen =
Remember me
