ಆನೇಕಲ್​:ಚಾಲಕನ ನಿಯಂತ್ರಣ ತಪ್ಪಿ ಹಾಲೋ ಬ್ಲಾಕ್​ ತುಂಬಿದ್ದ ಕ್ಯಾಂಟರ್​ ಒಂದು ಮುಗುಚಿದ ಪರಿಣಾಮ ಇಬ್ಬರು ಕಾರ್ಮಿಕರು ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್​ ತಾಲ್ಲೂಕಿನ ಜಿಗಣಿ ಪೊಲೀಸ್​ ಠಾಣಾ ವ್ಯಾಪ್ತಿಯ ಕುಪ್ಪಸಿದ್ದನ ದೊಡ್ಡಿ ಬಳಿ ನಡೆದಿದೆ.
ಮೃತರನ್ನು ಬಿಹಾರ ಮೂಲದ ಅಖಿಲೇಶ್(28) ಮಿಥಿಲೇಶ್(30) ಎಂದು ಗುರುತಿಸಲಾಗಿದ್ದು, ರತ್ನಂ ಪ್ಲೋರಿಂಗ್​ ಕಂಪನಿಗೆ ಸೇರಿದ್ದ ಕ್ಯಾಂಟರ್​ ಪಲ್ಟಿಯಾಗಿ ಅವಘಡ ಸಂಭವಿಸಿದೆ.
ಇದನ್ನೂ ಓದಿ:ಅಕ್ರಮ ಹಣ ವರ್ಗಾವಣೆ; ಹೀರೋ ಮೋಟೋ ಕಾರ್ಪ್​ ಮುಖ್ಯಸ್ಥ ಪವನ್​ ಮುಂಜಾಲ್​ ಮನೆ ಮೇಲೆ ED ದಾಳಿ
ರತ್ನಂ ಪ್ಲೋರಿಂಗ್​ಗೆ ಸೇರಿದ್ದ ಲಾರಿಯು ಹಾಲೋಬ್ಲಾಕ್​ಗಳನ್ನು ತುಂಬಿಕೊಂಡು ಸಾಗುವ ವೇಳೆ ಆನೇಕಲ್​ ತಾಲ್ಲೂಕಿನ ಜಿಗಣಿ ಪೊಲೀಸ್​ ಠಾಣಾ ವ್ಯಾಪ್ತಿಯ ಕುಪ್ಪಸಿದ್ದನ ದೊಡ್ಡಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಮುಗುಚಿದೆ.
ಲಾರಿ ಮುಗುಚಿದ ಪರಿಣಾಮ ಅದರಲ್ಲಿದ್ದ ಹಾಲೋ ಬ್ಲಾಕ್​ಗಳು ಏಕಾಏಕಿ ಬಿದ್ದ ಪರಿಣಾಮ ಓರ್ವ ಕಾರ್ಮಿಕ ಸ್ಥಳದಲ್ಲೇ ಅಸುನೀಗಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ಮತ್ತೋರ್ವ ಕಾರ್ಮಿಕನನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾನೆ. ಸ್ಥಳಕ್ಕೆ ಭೇಟಿ ನೀಡಿದ ಜಿಗಣಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × three =
Remember me
