ಬೆಂಗಳೂರು:ಅಕ್ರಮವಾಗಿ ನಗರದಲ್ಲಿ ನೆಲೆಸಿದಲ್ಲದೇ ಮಾದಕವಸ್ತು ಮಾರಾಟ ಮಾಡಲು ಯತ್ನಿಸುತ್ತಿದ್ದ ನೈಜೀರಿಯಾ ಪ್ರಜೆಯನ್ನು ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಬಂಧಿಸಿ 13 ಗ್ರಾಂ 61 ಮಿಲಿ ತೂಕದ ಎಂಡಿಎಂಎ ವಶ ಪಡಿಸಿಕೊಂಡಿದ್ದಾರೆ.
ಜೇಮ್ಸ್ ಇಪೊಲುವಾ ಓವಾಲೆ(26) ಬಂಧಿತ ನೈಜೀರಿಯಾ ಪ್ರಜೆ. ಆರೋಪಿಯು ಬೆಂಗಳೂರು ಉತ್ತರ ತಾಲೂಕು ವಿದ್ಯಾರಣ್ಯ ಪುರದ ವಡೇರಹಳ್ಳಿ ಲೇಔಟ್‌ನಲ್ಲಿ ನೆಲೆಸಿದ್ದನು.
ಸುಮ್ಮನಹಳ್ಳಿಯ ಬಸ್ ನಿಲ್ದಾಣದ ಹತ್ತಿರ ಮಾದಕ ವಸ್ತು ಮಾರಾಟ ಮಾಡಲು ಯತ್ನಿಸುತ್ತಿದ್ದಾಗ ಕಾರ್ಯಾಚರಣೆ ನಡೆಸಿದ ಪೊಲೀಸರು ಆತನನ್ನು ಬಂಧಿಸಿ ಎಂಡಿಎಂಎ ವಶ ಪಡಿಸಿಕೊಂಡಿದ್ದಾರೆ. ಆರೋಪಿ ವಿರುದ್ಧ ಎನ್‌ಡಿಪಿಎಸ್ ಕಾಯ್ದೆ ಹಾಗೂ ವಿದೇಶಿ ಕಾಯ್ದೆ ಅನ್ವಯ ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ವಿಚಾರಣೆಗೆ ಒಳಪಡಿಸಿ ಆತ ವಾಸಿಸುತ್ತಿದ್ದ ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ ಮಾದಕ ವಸ್ತು ವಶ ಪಡಿಸಿಕೊಂಡಿದ್ದಾರೆ. ಆರೋಪಿಯು ಅಕ್ರಮವಾಗಿ ನಗರದಲ್ಲಿ ನೆಲೆಸಿದ್ದು, ಈತನ ವಿರುದ್ಧ ಯಲಹಂಕ ಪೊಲೀಸ್ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿದ್ದು, ಪ್ರಕರಣವು ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಾಸ್ಕ್​ ಕಡ್ಡಾಯ, ನ್ಯೂ ಇಯರ್​ ಪಾರ್ಟಿಗೆ ಗರ್ಭಿಣಿ-ಮಕ್ಕಳಿಗಿಲ್ಲ ಅವಕಾಶ, ಡಬಲ್​ ಡೋಸ್​ ಪಡೆದಿಲ್ಲ ಅಂದ್ರೆ ಬಾರ್​ಗೂ ಎಂಟ್ರಿಯಿಲ್ಲ: ಆರ್​.ಅಶೋಕ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 3 =
Remember me
