ತುಮಕೂರು:ನಟ, ನಿರ್ದೇಶಕ, ರಂಗಕರ್ಮಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಟಿ.ಎಸ್​. ನಾಗಾಭರಣ ಅವರಿಗೆ ತುಮಕೂರು ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್​ ನೀಡಲಿದೆ. ನಾಗಾಭರಣ ಅವರ ಜೊತೆಗೆ ತುಮಕೂರು ಮೂಲದ ಸಮಾಜ ಸೇವಕರಾದ ಆರ್.ಎಲ್​. ರಮೇಶ್​ ಬಾಬು ಎಂಬುವವರಿಗೂ ವಿಶ್ವವಿದ್ಯಾಲಯದ ವತಿಯಿಂದ ಗೌರವ ಡಾಕ್ಟರೇಟ್​ ಪ್ರದಾನ ಮಾಡಲಾಗುತ್ತಿದೆ.
ಈ ಕುರಿತು ಮಾತನಾಡಿದ ತುಮಕೂರು ವಿವಿ ಕುಲಪತಿ ಪ್ರೊ. ವೆಂಕಟೇಶ್ವರಲು ಕನ್ನಡ ಚಲನಚಿತ್ರರಂಗದಲ್ಲಿ ನಾಗಾಭರಣ ಅವರು ಸಲ್ಲಿಸಿರುವ ಸೇವೆಯನ್ನು ಗುರುತಿಸಿ ಗೌರವ ಡಾಕ್ಟರೇಟ್​ ಪ್ರದಾನ ಮಾಡಲಾಗುತ್ತಿದೆ. ತುಮಕೂರು ವಿವಿಯ ಕಲಾ ಕಾಲೇಜಿನಲ್ಲಿ ಮಧ್ಯಾಹ್ನದ ಬಿಸಿಯೂಟಕ್ಕೆ ನೆರವು ನೀಡುತ್ತಿರುವ ಆರ್.ಎಲ್​. ರಮೇಶ್​ ಬಾಬು ಅವರಿಗೂ ಸಹ ಗೌರವ ಡಾಕ್ಟರೇಟ್​ ಪ್ರದಾನ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.
ತುಮಕೂರು ವಿವಿ ವತಿಯಿಂದ ಗೌರವ ಡಾಕ್ಟರೇಟ್​ಗೆ ಆಯ್ಕೆ ಮಾಡಲು ನೇಮಿಸಿದ್ದ ಸಮಿತಿಯ ಶಿಫಾರಸ್ಸಿಗೆ ರಾಜ್ಯಪಾಲರು ಅನುಮೋದನೆ ನೀಡಿದ್ದಾರೆ. ಆಗಸ್ಟ್​ 7ರಂದು ವಿಶ್ವವಿದ್ಯಾಲಯದ 16ನೇ ಘಟಿಕೋತ್ಸವ ನಡೆಯಲಿದ್ದು, ರಾಜ್ಯಪಾಲರಾದ ಥಾವರ್​ಚಂದ್​ ಗೆಹ್ಲೋತ್​ ಗೌರವ ಡಾಕ್ಟರೇಟ್​ ಪದವಿ ಪ್ರದಾನ ಮಾಡಲಿದ್ದಾರೆ ಎಂದು ಕುಲಪತಿ ಪ್ರೊ. ವೆಂಕಟೇಶ್ವರಲು ತಿಳಿಸಿದ್ದಾರೆ.
ಇದನ್ನೂ ಓದಿ:ಕೊಳೆತ ಆಹಾರವನ್ನೇ ವಾರ್ಡನ್​ಗೆ ತಿನ್ನಿಸಿ, ಚೆನ್ನಾಗಿ ಬಾರಿಸಿ; ವಿದ್ಯಾರ್ಥಿಗಳನ್ನು ಪ್ರಚೋದಿಸಿದ ಕಾಂಗ್ರೆಸ್​ ಶಾಸಕ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − 7 =
Remember me
