ತುಮಕೂರು:ನಿಂತಿದ್ದ ಬಸ್ ಗೆ ಟೆಪೋ ಟ್ರಾವೆಲರ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟು ನಾಲ್ವರು ಗಾಯಗೊಂಡಿದ್ದಾರೆ. ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಹುಲಿಯೂರುದುರ್ಗ ಹೋಬಳಿಯ ಡಿ.ಹೊಸಹಳ್ಳಿ ಬಳಿ ಈ ಘಟನೆ ನಡೆದಿದೆ.
ರಾಯಚೂರು ಜಿಲ್ಲೆ ಸಿಂಧನೂರು ವಾಸಿ (ಟಿಟಿ ವಾಹನದ ಚಾಲಕ) ವೀರೇಶ್ (30), ಹಾಗೂ ಶಶಿಕಲಾ( 69) ಮೃತ ದುರ್ದೈವಿಗಳು, ದಿಲೀಪ್ ಕುಮಾರ್, ಆನಂದ್ ಕುಮಾರ್, ಪ್ರಿಯಾ, ಪ್ರತಿಕ್ಷಾ ಗಾಯಗೊಂಡಿದ್ದು, ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದನ್ನೂ ಓದಿ:ಈ ನಾಲ್ಕು ಹೈಪ್ರೋಫೈಲ್ ಪ್ರಕರಣಗಳಿಗೆ ಮತ್ತೆ ಜೀವ ಬರುತ್ತಾ? ಅಧಿಕಾರಿಗಳೊಂದಿಗೆ ಇಂದು ಡಿಜಿಪಿ ಸಭೆ
ಶಶಿಕಲಾ ಹಾಗೂ ಅವರ ಕುಟುಂಬದ 11 ಮಂದಿ ಸಿಂಧನೂರಿನಿಂದ ಮೈಸೂರು ಜಿಲ್ಲೆ ಪ್ರವಾಸಕ್ಕೆ ತೆರಳುತ್ತಿದ್ದ ವೇಳೆ ಗುರುವಾರ ಬೆಳಗ್ಗೆ ಡಿ.ಹೊಸಹಳ್ಳಿ ಗ್ರಾಮದ ಬಳಿ ನಿಂತಿದ್ದ ಖಾಸಗಿ ಬಸ್​ಗೆ ಟಿಟಿ ಡಿಕ್ಕಿ ಹೊಡೆದಿದ್ದು ಚಾಲಕ ವೀರೇಶ್ ಸ್ಥಳದಲ್ಲೇ ಮೃತಪಟ್ಟರೆ, ಆಸ್ಪತ್ರೆಗೆ ಸಾಗಿಸುವ ಮಾರ್ಗದ ಮಧ್ಯೆ ಶಶಿಕಲಾ ಮೃತಪಟ್ಟಿದ್ದಾರೆ. ಹುಲಿಯೂರುದುರ್ಗ ಪೊಲೀಸರು ಸ್ಥಳಕ್ಕೆ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಜಾತ್ರೆಯಲ್ಲಿ ಆಟವಾಡಲು ಹೋಗಿದ್ದ ಬಾಲಕ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಸಾವು



ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 − 3 =
Remember me
