ನಂಜನಗೂಡು:ಕಾಂಗ್ರೆಸ್ ನಾಯಕರು ರಾಜ್ಯಕ್ಕೆ ಆಗಮಿಸಿ ಕರ್ನಾಟಕದ ಸಾರ್ವಭೌಮತೆ ವಿಚಾರವನ್ನು ಪ್ರಸ್ತಾಪಿಸುವ ಮೂಲಕ ಕರ್ನಾಟಕವನ್ನು ಭಾರತದಿಂದ ವಿಭಜಿಸುವ ವಕಾಲತ್ತು ನಡೆಸುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ‌ಮೋದಿ ಆರೋಪಿಸಿದರು.
ನಂಜನಗೂಡು ತಾಲ್ಲೂಕಿನ ಎಲಚಗೆರೆಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಬಿಜೆಪಿ ನವ ಕರ್ನಾಟಕ ಸಂಕಲ್ಪ ಸಮಾವೇಶದಲ್ಲಿ ಅವರು ಮಾತನಾಡಿದರು.
ಇದನ್ನೂ ಓದಿ:ನಕ್ಕರೆ ಕಣ್ಣೀರೂ ಆನಂದಬಾಷ್ಪ!; ನಗುವಿನಿಂದ ಅಂದ-ಆನಂದ-ಆಹ್ಲಾದ
ಕಾಂಗ್ರೆಸ್ ನಾಯಕರು ರಾಜ್ಯಕ್ಕೆ ಆಗಮಿಸಿ ರಾಜ್ಯದ ಸಾರ್ವಭೌಮತ್ವವನ್ನು ರಕ್ಷಿಸುವ ಮಾತನ್ನು ಆಡುವ ಅವಶ್ಯಕತೆ ಏನಿತ್ತು? ಇದರ ಅರ್ಥ ಏನು ಗೊತ್ತಾ? ಯಾವುದೇ ರಾಷ್ಟ್ರಕ್ಕೆ ಸ್ವಾತಂತ್ರ್ಯ ಸಿಕ್ಕಾಗ ಅದು ಸಾರ್ವಭೌಮ ರಾಷ್ಟ್ರವಾಗಿ ರೂಪುಗೊಳ್ಳುತ್ತದೆ. ಕರ್ನಾಟಕದ ಸಾರ್ವಭೌಮತೆಯನ್ನು ಕಾಂಗ್ರೆಸ್ ಪ್ರಸ್ತಾಪಿಸುವ ಮೂಲಕ ಕರ್ನಾಟಕವನ್ನು ದೇಶದಿಂದ ವಿಭಜಿಸಲು ವಕಾಲತ್ತು ನಡೆಸುತ್ತಿದೆ ಎಂದು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹೆಸರು ಪ್ರಸ್ತಾಪಿಸದೆ ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ:ಸಿದ್ದರಾಮಯ್ಯ ಸೋಲಲಿ ಎಂದು ಡಿ.ಕೆ.ಶಿವಕುಮಾರ್ ಹೋಮ ಮಾಡಿಸಿದ್ದಾರೆ: ಸಿ.ಟಿ.ರವಿ
ಭಾರತದ ಕರ್ನಾಟಕದ ಅಂಗವಲ್ಲ ಎಂಬ ರೀತಿಯಲ್ಲಿ ಕಾಂಗ್ರೆಸ್ ಬಿಂಬಿಸುವ ಪ್ರಯತ್ನ ಮಾಡುತ್ತಿದೆ. ಈ ಮಾತನ್ನು ನಾನು ಅತ್ಯಂತ ದುಃಖ ಹಾಗೂ ನೋವಿನಿಂದ ಹೇಳುತ್ತಿದ್ದೇನೆ. ಇದು ಕೇವಲ ಕರ್ನಾಟಕದ ವಿಚಾರವಲ್ಲ, ದೇಶದ ವಿಚಾರ. ಭಾರತದಿಂದ ಕರ್ನಾಟಕವನ್ನು ವಿಭಜಿಸುವ ಪಿತೂರಿಯನ್ನು ತುಕಡೆ ತುಕಡೆ ಗ್ಯಾಂಗ್ ಮಾಡುತ್ತಿದೆ. ಕಾಂಗ್ರೆಸ್ ಯಾವ ಮಟ್ಟಕ್ಕೆ ಹೋಗಿದೆ ಎಂದರೆ ದೇಶದ ಸ್ವಾತಂತ್ರ್ಯ ಸಂಗ್ರಾಮಕ್ಕೆ ಹೋರಾಡಿದ ಲಕ್ಷಾಂತರ ಕನ್ನಡಿಗರಿಗೆ ಹಾಗೂ ಕೋಟ್ಯಂತರ ಕನ್ನಡಿಗರ ದೇಶ ಭಕ್ತಿಗೆ ಅಪಮಾನ‌ ಮಾಡುತ್ತಿದೆ‌ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ:ಈ ಚುನಾವಣೆ ಬಿಜೆಪಿ ವರ್ಸಸ್ ಕಾಂಗ್ರೆಸ್​ ಅಲ್ಲ, ಇದು ಬಜರಂಗಿ ವರ್ಸಸ್ ತಾಲಿಬಾನ್: ಸಿ.ಟಿ.ರವಿ
ಕರ್ನಾಟಕ ಭಾರತದ ಅವಿಭಜಿತ ಅಂಗ. ಇದನ್ನು ರಾಷ್ಟ್ರಕವಿ ಕುವೆಂಪು ನಾಡಗೀತೆಯಲ್ಲಿ ಪ್ರಸ್ತಾಪಿಸಿದ್ದಾರೆ. ‘ಭಾರತ ಪ್ರತಿಯೊಬ್ಬ ಕನ್ನಡಿಗರ ತಾಯಿ. ಅದೇ ರೀತಿ ಭಾರತಕ್ಕೆ ಕರ್ನಾಟಕ ಮಗಳು’ ಎಂದು ಕುವೆಂಪು ಬಣ್ಣಿಸಿದ್ದಾರೆ. ಆದರೆ, ರಾಜ್ಯದ ಸಂಸ್ಕೃತಿ, ಪರಂಪರೆಯನ್ನು ಕಾಂಗ್ರೆಸ್ ಅಪಮಾನ‌ ಮಾಡುತ್ತಿದೆ. ಭಾರತದ ವಿರುದ್ಧ ಇರುವ ರಾಷ್ಟ್ರಗಳ ಪ್ರತಿನಿಧಿಗಳೊಂದಿಗೆ ಕಾಂಗ್ರೆಸ್ ನಾಯಕರು ವಿದೇಶದಲ್ಲಿ ಮಾತುಕತೆ ನಡೆಸುತ್ತಾರೆ. ಕಾಂಗ್ರೆಸ್​​ನವರಿಗೆ ನಾಚಿಕೆ ಅನ್ನುವುದೇ ಇಲ್ಲ. ನಾಚಿಕೆ ಬಿಟ್ಟು ದೇಶದ ಭಾವನೆಗೆ ಧಕ್ಕೆಯಾಗುವ ರೀತಿಯಲ್ಲಿ ನಡೆದುಕೊಳ್ಳುತ್ತಿದ್ದಾರೆ ಎಂದರು.
ಬಿ.ಎಲ್. ಸಂತೋಷ್ ವಿರುದ್ಧ ಸುಳ್ಳು ಸುದ್ದಿ ಸೃಷ್ಟಿಸಿದ್ದ ಯುವಕನ ಬಂಧನ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − 7 =
Remember me
