ತುಮಕೂರು:ಬಿಗ್​ಬಾಸ್​ ಸೀಸನ್​ 10ರ ಸ್ಪರ್ಧಿ ಹಾಗೂ ಹಾಸ್ಯ ನಟ ತುಕಾಲಿ ಸಂತೋಷ್​ ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಆಟೋ ಚಾಲಕ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ.
ಜಗದೀಶ್ (44) ಮೃತ ದುರ್ದೈವಿ. ಈತ ಕುಣಿಗಲ್ ತಾಲ್ಲೂಕಿನ ಕೋಡಿಹಳ್ಳಿ ಪಾಳ್ಯದ ನಿವಾಸಿ. ಆಟೋ ಓಡಿಸಿಕೊಂಡು ಜೀವನ ನಡೆಸುತ್ತಿದ್ದ. ನಿನ್ನೆ ರಾತ್ರಿ ಹೊನ್ನೆನಹಳ್ಳಿ ಬಳಿ ತುಕಾಲಿ ಸಂತೋಷ್ ಕಾರು ಹಾಗೂ ಆಟೋ ನಡುವೆ ಅಪಘಾತ ನಡೆದಿತ್ತು. ಜಗದೀಶ್​ಗೆ ಗಾಯವಾಗಿತ್ತು. ಕೂಡಲೇ ಆತನನ್ನು ಕುಣಿಗಲ್ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಇಂದು (ಮಾ.14) ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೇ ಜಗದೀಶ್ ಮೃತಪಟ್ಟಿದ್ದಾರೆ.
ಅಪಘಾತ ನಡೆದ ವೇಳೆ ಆಟೋ ಚಾಲಕ ಜಗದೀಶ್ ಮದ್ಯಪಾನ ಮಾಡಿದ್ದ ಎಂದು ಹೇಳಲಾಗಿದೆ. ಘಟನೆ ಸಂಬಂಧ ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರಿಂದ ತನಿಖೆ ಮುಂದುವರಿದಿದೆ.
ತುಕಾಲಿ ಸಂತೋಷ್​ ಅವರು ಕೆಲ ವಾರಗಳ ಹಿಂದಷ್ಟೇ ಹೊಸ ಕಿಯಾ ಸೆಲ್ಟೋಸ್​ ಕಾರನ್ನು ಖರೀದಿ ಮಾಡಿದ್ದರು. ಹೊಸ ಕಾರು ಮನೆಗೆ ಬಂದು ಎರಡು ವಾರ ಕಳೆಯುವಷ್ಟರಲ್ಲೇ ಅಪಘಾತ ಸಂಭವಿಸಿದೆ. ಕುಣಿಗಲ್​ ಮಾರ್ಗವಾಗಿ ತುಕಾಲಿ ಸಂತೋಷ್​ ದಂಪತಿ ಹಾಸನ ಜಿಲ್ಲೆ ಹೊಳೆನರಸೀಪುರದತ್ತ ಪ್ರಯಾಣಿಸುತ್ತಿದ್ದರು. ಇದೇ ವೇಳೆ ಕುಣಿಗಲ್​​ ಕಡೆಯಿಂದ ಕುರುಡಿಹಳ್ಳಿಗೆ ಬರುತ್ತಿದ್ದ ಆಟೋ, ತುಕಾಲಿ ಸಂತೋಷ್​ ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದು ದುರ್ಘಟನೆ ಸಂಭವಿಸಿದೆ.
ಮದ್ವೆಯಾದ ಕೆಲವೇ ತಿಂಗಳಲ್ಲಿ ನಟಿಯ ಕಳ್ಳಾಟ ಗಂಡನಿಂದಲೇ ಬಯಲು: ಮನೆಯ ಕಬೋರ್ಡ್​ನಲ್ಲಿ ಕಾಂಡೋಮ್ಸ್​ ಪತ್ತೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × three =
Remember me
