ಬೆಂಗಳೂರುತುಳುನಾಡು ಎಂದರೆ ಸಂಸ್ಕೃತಿ, ಸಾಹಸದ ಸಂಕೇತ. ತುಳುವರು ಎಂದರೆ ಧಾರ್ಮಿಕ ಶ್ರೇಷ್ಠತೆಯ ಸಂಕೇತ. ಇದೆಲ್ಲಕ್ಕೂ ಮಿಗಿಲಾಗಿ ವಿಶ್ವ ಮಟ್ಟದಲ್ಲಿ ಸ್ನೇಹದ ಚಾಪು ಸ್ಥಾಪಿಸಿದ ಕೀರ್ತಿ ತುಳುವರಿಗೆ ಸಲ್ಲುತ್ತದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಪ್ರಶಂಸೆ ವ್ಯಕ್ತಪಡಿಸಿದರು.
ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಎರಡು ದಿನಗಳ ಬೆಂಗಳೂರು ಕಂಬಳದ ಭಾನುವಾರದ ಸಂಜೆಯ ವೇದಿಕೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಬೆಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಕಂಬಳ ಆಯೋಜಿಸುವ ಮೂಲಕ ಇಡೀ ಬೆಂಗಳೂರು ಮಹಾನಗರ ಜನತೆಗೆ ಹಬ್ಬದ ವಾತಾವರಣ ಕಲ್ಪಿಸಿ ರಸದೌತಣ ನೀಡಿದ್ದೀರಿ. ಅದಕ್ಕೆ ಪ್ರತಿಯಾಗಿ ರಾಜಧಾನಿಯ ಜನರು ಕೂಡ ಕಂಬಳಕ್ಕೆ ರಾಜಗೌರವ ಸಮರ್ಪಣೆ ಮಾಡಿದ್ದಾರೆ. ಗ್ರಾಮೀಣ ಜನರ ಸ್ವಾಭಿಮಾನದ ಸಂಕೇತವಾಗಿರುವ ಕಂಬಳವನ್ನು ಪ್ರತಿ ವರ್ಷ ನಿರಂತರವಾಗಿ ನಡೆಸಬೇಕು. ಇದಕ್ಕೆ ನಾನು ಕೂಡ ಸಹಕಾರ, ಪ್ರೋತ್ಸಾಹ ನೀಡುತ್ತೇವೆ ಎಂದು ತಿಳಿಸಿದರು.
ಕರಾವಳಿ ಮತ್ತು ಬಿ.ಎಸ್. ಯಡಿಯೂರಪ್ಪ ಅವರಿಗೆ ಅವಿನಾಭಾವ ಸಂಬಂಧ. ಅವರು ಯಾವ ರೀತಿಯ ಅಭಿಮಾನವನ್ನಿಟ್ಟುಕೊಂಡಿದ್ದಾರೆ ಎಂಬುದಕ್ಕೆ ಶನಿವಾರ ಮತ್ತು ಭಾನುವಾರ ಎರಡೂ ದಿನ ಆಗಮಿಸಿ ಕಂಬಳವನ್ನು ನೋಡಿರುವುದೇ ಸಾಕ್ಷಿಯಾಗಿದೆ ಎಂದರು.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:19 + 2 =
Remember me
