ತುಮಕೂರು:ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಪೋಷಕರೊಂದಿಗೆ ದೇವಸ್ಥಾನಕ್ಕೆ ತೆರಳಿದ್ದ ಬಾಲಕಿ ಹಾವು ಕಡಿತದಿಂದ ಸಾವನ್ನಪ್ಪಿರುವ ದಾರುಣ ಘಟನೆ ಜಿಲ್ಲೆಯ ಕುಣಿಗಲ್ ಪಟ್ಟಣದ 22 ನೇ ವಾರ್ಡ್ ನಲ್ಲಿ ನಡೆದಿದೆ.
ಇದನ್ನೂ ಓದಿ:2026 ಅಂತ್ಯಕ್ಕೆ ಎತ್ತಿನಹೊಳೆ ಯೋಜನೆಯ ಕಾಮಗಾರಿ ಪೂರ್ಣ: ಸಿಎಂ ಸಿದ್ದರಾಮಯ್ಯ ಭರವಸೆ
ಸ್ಪಂದನ (13), ಮೃತ ಬಾಲಕಿ. ಈಕೆ 22ನೇ ವಾರ್ಡ್‌ನ ಮಲ್ಲಿಪಾಳ್ಯದಲ್ಲಿ ವಾಸವಾಗಿರುವ ಪುರಸಭೆ ವಾಟರ್ ಮ್ಯಾನ್ ಕುಮಾರ್ ಮಗಳು ಎನ್ನಲಾಗಿದೆ. ಮೃ ಬಾಲಕಿ ಕುಣಿಗಲ್ ಪಟ್ಟಣದ ಖಾಸಗಿ ಶಾಲೆಯಲ್ಲಿ 7 ನೇ ತರಗತಿ ಓದುತ್ತಿದ್ದಳು.
ಇಂದು ಗೌರಿ-ಗಣೇಶ ಹಬ್ಬ ಹಿನ್ನಲೆಯಲ್ಲಿ ಕುಟುಂಬದವರ ಜೊತೆ ಕುಣಿಗಲ್ ಪಟ್ಟಣದ ಮುಳಕಟ್ಟಮ್ಮ ದೇವಸ್ಥಾನಕ್ಕೆ ತೆರಳಿದ್ದ ಬಾಲಕಿ, ದೇವಾಲಯದ ಆವರಣದಲ್ಲಿದ್ದ ವಿಶ್ರಾಂತಿ ಪಡೆಯುವ ಚೇರ್ ಮೇಲೆ ಕುಳಿತಿದ್ದಾಗ ಹಾವು ಕಡಿತಕ್ಕೆ ಒಳಗಾಗಿದ್ದಾಳೆ.
ಹಾವು ಕಡಿದಿದ್ದನ್ನ ಗಮನಿಸದ ಬಾಲಕಿ, ಪೂಜೆ ಮುಗಿಸಿಕೊಂಡು ಕುಟುಂಬದವರೊಂದಿಗೆ ಮನೆಗೆ ಬಂದ ಬಾಲಕಿ, ಕೆಲಕಾಲ ಆಟ ಆಡಿದ್ದಾಳೆ. ನಂತರ ತೀವ್ರ ಅಸ್ವಸ್ಥಗೊಂಡು ಕೆಳಗೆ ಬಿದ್ದಿದ್ದಾಳೆ. ಮನೆಯವರು ಚಿಕಿತ್ಸೆಗೆ ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಬೆಳ್ಳೂರಿನ ಆದಿಚುಂಚನಗಿರಿ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಸಾವನ್ನಪ್ಪಿದ್ದಾಳೆ. ಬಾಲಕಿ ಸಾವಿನಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಸಿಎಂ ಕೇಜ್ರಿವಾಲ್​ಗೆ ಶಾಕ್​: ಆರ್.ಪಿ.ಗೌತಮ್ ಎಎಪಿ ತೊರೆದು ಕಾಂಗ್ರೆಸ್ ಸೇರ್ಪಡೆ !

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:thirteen − one =
Remember me
