ತುಮಕೂರು:ಗೃಹ ಸಚಿವ ಡಾ. ಜಿ. ಪರಮೇಶ್ವರ್ ಒಡೆತನದ ಸಿದ್ಧಾರ್ಥ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾಳೆ.
ಬನಸಿರಿ‌ (20) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಈಕೆ ಚಿತ್ರದುರ್ಗದ ಹೊಳಲ್ಕೆರೆ ತಾಲ್ಲೂಕಿನ ಶಿವಪುರ ಗ್ರಾಮದ ನಿವಾಸಿ. ತುಮಕೂರಿನ ಸಿದ್ದಾರ್ಥ ಇಂಜಿನಿಯರಿಂಗ್ ಕಾಲೇಜಿನಲ್ಲಿ ದ್ವಿತೀಯ ವರ್ಷದ ತೃತೀಯ ಸೆಮಿಸ್ಟರ್ ಟೆಲಿಕಾಂ ಇಂಜಿನಿಯರಿಂಗ್ ಓದುತ್ತಿದ್ದಳು.
ಬನಸಿರಿ ಕಾಲೇಜಿನ ಆವರಣದಲ್ಲಿರುವ ಹುಡುಗಿಯರ ಹಾಸ್ಟೆಲ್​ನ 101 ಬಿ ಕೊಠಡಿಯಲ್ಲಿ ತಂಗಿದ್ದಳು. ಇಂದು ಮಧ್ಯಾಹ್ನ 2 ಗಂಟೆ ಸುಮಾರಿಗೆ ಊಟ ಮುಗಿಸಿಕೊಂಡು ಬಂದ ಬಳಿಕ ಬನಸಿರಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಆತ್ಮಹತ್ಯೆಗೆ ಕಾರಣ ಏನು ಎಂಬುದು ಇನ್ನೂ ತಿಳಿದು ಬಂದಿಲ್ಲ. ಈ ಪ್ರಕರಣ ಇದೀಗ ನಿಗೂಢವಾಗಿದೆ.
ಮಾಹಿತಿ ತಿಳಿದು ಘಟನಾ ಸ್ಥಳಕ್ಕೆ ಆಗಮಿಸಿದ ತಿಲಕ್​ ಪಾರ್ಕ್ ಪೊಲೀಸರು ಹಾಗೂ ತುಮಕೂರು ಡಿವೈಎಸ್​ಪಿ ಚಂದ್ರಶೇಖರ್ ಪರಿಶೀಲನೆ ನಡೆಸಿದ್ದಾರೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ತಿಲಕ್​ ಪಾರ್ಕ್ ಠಾಣಾ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಚಾಕೋಲೇಟ್​ಗಳಲ್ಲಿ ಅಪಾಯಕಾರಿ ಮಟ್ಟದಲ್ಲಿ ಸೀಸ​, ಕ್ಯಾಡ್ಮಿಯಂ ಪತ್ತೆ: ಗಂಭೀರ ಆರೋಗ್ಯ ಸಮಸ್ಯೆಗಳ ಎಚ್ಚರಿಕೆ

VIDEO | ಹಾವಿನ ತುಟಿಗೆ ಬಾಯಿಟ್ಟು ಸಿಪಿಆರ್ ಚಿಕಿತ್ಸೆ ನೀಡಿದ ಪೊಲೀಸ್‌!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen + eighteen =
Remember me
