ತುಮಕೂರು:ವಾರ್ತಾ ಮತ್ತು ಸಾರ್ವಜನಿಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕರಾದ ಎಂ.ಆರ್. ಮಮತಾ (47) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ನಿಧನ ಹೊಂದಿದರು.
ಇದನ್ನೂ ಓದಿ:ವಯನಾಡ್ ಭೂಕುಸಿತದಿಂದ ಎಚ್ಚೆತ್ತ ಸರ್ಕಾರ; ಪಶ್ಚಿಮ ಘಟ್ಟದಲ್ಲಿ ಅರಣ್ಯ ಒತ್ತುವರಿ ತೆರವಿಗೆ ಈಶ್ವರ ಖಂಡ್ರೆ ಸೂಚನೆ
ಇತ್ತೀಚೆಗೆ ಅನಾರೋಗ್ಯದಿಂದ ಬಳಲುತ್ತಿದ್ದರು. ಅದಕ್ಕಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಮೃತರು ಪತ್ರಕರ್ತ ಎಚ್ ಆರ್ ರವೀಶ್, ಪುತ್ರ ಪ್ರಜ್ವಲ್ ಹಾಗೂ ಅಪಾರ ಬಂಧು ಬಾಂಧವರನ್ನು ಅಗಲಿದ್ದಾರೆ.
ಕಳೆದ 19 ವರ್ಷಗಳಿಂದ ವಾರ್ತಾ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ತುಮಕೂರಿನಲ್ಲಿ ಸಹಾಯಕ ಹಿರಿಯ ನಿರ್ದೇಶಕಿಯಾಗಿ 2 ವರ್ಷದಿಂದ ಕೆಲಸ ಮಾಡುತ್ತಿದ್ದರು. ಇತ್ತೀಚೆಗೆ ಮಿದುಳು ರಕ್ತಸ್ರಾವದಿಂದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಅವರು ಕಳೆದ ಕೆಲ ದಿನಗಳಿಂದ ರಜೆಯಲ್ಲಿದ್ದು ಚಿಕಿತ್ಸೆ ಪಡೆಯುತ್ತಿದ್ದರು.
ಬೆಂಗಳೂರಿನ ಅವರ ಮನೆಯಲ್ಲಿ ಇಂದು (ಆಗಸ್ಟ್ 2) ಸಂಜೆ 8 ಗಂಟೆಯಿಂದ ನಾಳೆ ಬೆಳಗ್ಗೆ 8 ಗಂಟೆಯವರೆಗೆ ಅಂತಿಮ ದರ್ಶನಕ್ಕೆ ಇಡಲಾಗುವುದು. ತಾಲ್ಲೂಕಿನ ಹಾಲನೂರು ಗ್ರಾಮದ ಅವರ ತೋಟದಲ್ಲಿ ಆಗಸ್ಟ್ 03 ರಂದು (ಶನಿವಾರ) ಮಧ್ಯಾಹ್ನ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ರಾಯಚೂರಿನಲ್ಲಿ ಏಮ್ಸ್ ಸ್ಥಾಪಿಸಿ: ಕೇಂದ್ರಕ್ಕೆ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ಮನವಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − 3 =
Remember me
