ತುಮಕೂರು:ಎರಡು ಕಾರುಗಳ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದು ವರ್ಷದ ಹೆಣ್ಣು ಮಗು ಸೇರಿದಂತೆ 13 ಮಂದಿ ಸಾವಿಗೀಡಾಗಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ.
ಇಂದು ನಸುಕಿನ ಜಾವ 2.30ರ ಸುಮಾರಿಗೆ ಕುಣಿಗಲ್​ ತಾಲೂಕಿನ ಬ್ಯಾಲದಕೆರೆ ಬಳಿ ಘಟನೆ ನಡೆದಿದೆ. ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಹೋಗುತ್ತಿದ್ದ‌ ಬ್ರಿಝಾ ಕಾರು ಹಾಗೂ ಧರ್ಮಸ್ಥಳದಿಂದ ತಮಿಳುನಾಡಿಗೆ ಹಿಂದಿರುಗುತ್ತಿದ್ದ ಟವೇರಾ ಕಾರು ನಡುವೆ ಅಪಘಾತ ಸಂಭವಿಸಿದೆ.
ಬ್ರಿಝಾ ಕಾರು ಡಿವೈಡರ್​ಗೆ ಡಿಕ್ಕಿ ಹೊಡೆದು ಬಲಭಾಗದಲ್ಲಿ ಬರುತ್ತಿದ್ದ ಟವೇರಾಗೆ ಗುದ್ದಿದೆ. ಬ್ರಿಝಾ ಕಾರಿನಲ್ಲಿದ್ದವರು ಬೆಂಗಳೂರಿನ ದೊಡ್ಡಾಲದ ಮರದ ಬಳಿಯ ರಾಮನಹಳ್ಳಿಯವರಾಗಿದ್ದು, ಕಾರಿನಲ್ಲಿದ್ದ ನಾಲ್ವರಲ್ಲಿ ಮೂವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಮತ್ತೊಬ್ಬನ ಸ್ಥಿತಿ ಗಂಭೀರವಾಗಿದೆ.
ಟವೇರಾದಲ್ಲಿದ್ದವರು ತಮಿಳುನಾಡಿನ ಹೊಸೂರು ಮೂಲದವರಾಗಿದ್ದು, ಟವೇರಾದಲ್ಲಿದ್ದ 13 ಜನರಲ್ಲಿ 10 ಜನ ಸ್ಥಳದಲ್ಲೇ ಸಾವಿಗೀಡಾಗಿ, 3 ಜನರಿಗೆ ಗಂಭೀರ ಗಾಯಗಳಾಗಿವೆ.
ಟವೇರಾ ಕಾರಿನಲ್ಲಿದ್ದ ಮೃತಪಟ್ಟವರ ಗುರುತುಮಂಜುನಾಥ್ (35), ತನುಜ (25), ಗೌರಮ್ಮ (60), ರತ್ನಮ್ಮ (52), ಸೌಂದರರಾಜ್ (48), ರಾಜೇಂದ್ರ (27), ಸರಳ (32), ಪ್ರಶನ್ಯಾ (14) ಹಾಗೂ ಒಂದು ವರ್ಷದ ಹೆಣ್ಣು ಮಗು ಮೃತಪಟ್ಟಿದೆ. ಉಳಿದ ಶ್ವೇತಾ (32), ಹರ್ಪಿತಾ (12), ಮಾಲಾಶ್ರೀ (4) ಹಾಗೂ ಗಂಗೋತ್ರಿ (14) ಗಂಭೀರವಾಗಿ ಗಾಯಗೊಂಡಿದ್ದಾರೆ.
ಬ್ರಿಝಾ ಕಾರಿನಲ್ಲಿ ಮೃತಪಟ್ಟವರ ಗುರುತುಲಕ್ಷ್ಮಿ ಕಾಂತ್ (24), ಸಂದೀಪ (36) ಹಾಗೂ ಮಧು (28) ಎಂಬುವರು ಸಾವಿಗೀಡಾಗಿದ್ದಾರೆ.(ದಿಗ್ವಿಜಯ ನ್ಯೂಸ್​)

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 + 19 =
Remember me
