ತುಮಕೂರು:ಪತ್ನಿಯ ಕಾಟಕ್ಕೆ ಬೇಸತ್ತು ಇಂಜಿನಿಯರ್ ಒಬ್ಬರು​ ಸಾವಿನ ಹಾದಿ ಹಿಡಿದಿರುವ ಆಘಾತಕಾರಿ ಘಟನೆ ತುಮಕೂರಿನ ಕೆ.ಬಿ.ಕ್ರಾಸ್ ಬಳಿಯ ಕುಂದೂರು ಪಾಳ್ಯದಲ್ಲಿ ನಡೆದಿದೆ.
ಮಂಜುನಾಥ್ (38) ನೇಣುಬಿಗಿದುಕೊಂಡು ಸಾವಿಗೆ ಶರಣಾದ ದುರ್ದೈವಿ. ಇವರು ಬೆಂಗಳೂರಿನ ಬಿಎಂಆರ್​ಸಿಎಲ್​ನಲ್ಲಿ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ಕಳೆದ 10 ವರ್ಷದ ಹಿಂದೆ ತುರುವೇಕೆರೆ ಮೂಲದ ಪ್ರಿಯಾಂಕಾಳನ್ನು ಮದುವೆಯಾಗಿದ್ದರು. ದಂಪತಿ ಬೆಂಗಳೂರಿನಲ್ಲಿ ವಾಸವಿದ್ದರು.
ಗಂಡ-ಹೆಂಡತಿ ನಡುವೆ ಹೊಂದಾಣಿಕೆ ಇಲ್ಲದೆ ಪದೇಪದೆ ಗಲಾಟೆ ನಡೆಯುತ್ತಿತ್ತು. ಮದುವೆಯಾದ ಬಳಿಕ ಮಂಜುನಾಥ್​ಗೆ ಪ್ರಿಯಾಂಕಾ ಮಾನಸಿಕ ಕಿರುಕುಳ ನೀಡುತ್ತಿದ್ದರು ಎಂಬ ಆರೋಪವಿದೆ. ನೀನು ಹಳ್ಳಿ ಗುಗ್ಗು, ನಿನ್ನನ್ನು ಮದುವೆಯಾಗಲು ನನಗೆ ಇಷ್ಟ ಇರಲಿಲ್ಲ ಎಂದು ಪದೇಪದೆ ಪ್ರಿಯಾಂಕಾ ಚುಚ್ಚಿ ಚುಚ್ಚಿ ಮಾತನಾಡುತ್ತಿದ್ದಳು ಎಂದು ಹೇಳಲಾಗಿದೆ.
ಇದನ್ನೂ ಓದಿ:ಆಂಧ್ರದ ವಿದ್ಯಾರ್ಥಿನಿ ಸಾವಿನ ಬಗ್ಗೆ ಅಮೆರಿಕ ಪೊಲೀಸ್​ ಅಪಹಾಸ್ಯ: ತನಿಖೆಗೆ ಒತ್ತಾಯಿಸಿದ ಭಾರತ
ಪತ್ನಿಯ ನಿರಂತರ ಕಿರುಕುಳಕ್ಕೆ ಬೇಸತ್ತ ಮಂಜುನಾಥ್​ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೂ ಮುನ್ನ ತನ್ನ ಸಹೋದರನಿಗೆ ಆಡಿಯೋ ಮೆಸೇಜ್ ಕಳುಹಿಸಿದ್ದು, ನನಗೆ ಅವಳ ಜತೆ ಜೀವನ ಮಾಡುವುದಕ್ಕೆ ಆಗುತ್ತಿಲ್ಲ. ಮನೆಯಲ್ಲಿ ಆಕೆಯ ಹಾಳಿಯನ್ನು ತಾಳಲಾರದೇ ನಾನು ಸಾಯುತ್ತಿದ್ದೇನೆ. ನನ್ನ ಮಕ್ಕಳನ್ನು ಚೆನ್ನಾಗಿ ನೋಡಿಕೊಳ್ಳಿ ಎಂದು ಮಂಜುನಾಥ್​​ ಮೆಸೇಜ್​ ಮಾಡಿದ್ದಾರೆ.
ಆರೋಪಿ ಪತ್ನಿ ಪ್ರಿಯಾಂಕಾ ವಿರುದ್ಧ ಕಿಬ್ಬನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಖದೀಮರನ್ನು ಏಕೆ ಬೆಂಬಲಿಸುತ್ತೀರಿ? ರಜನಿಕಾಂತ್​ ವಿರುದ್ಧ ಕಿಡಿಕಾರಿದ ಸಚಿವೆ ರೋಜಾ

ತೆರಿಗೆ ಸಂಗ್ರಹ; ಅಧಿಕಾರಿಗಳ ಜತೆ ಸಿಎಂ ಗಹನ‌ ಚರ್ಚೆ

ಕೇವಲ ಹತ್ತೇ ಸೆಕೆಂಡಲ್ಲಿ ಲಕ್ಷಾಧಿಪತಿಯಾಗಿದ್ದ ಯುವಕ! ಬರಿಗೈನಲ್ಲಿ ಬಂದವನಿಗೆ ಸಿಕ್ಕಿದ್ದು 94 ಲಕ್ಷ ಹಣ

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:seven + three =
Remember me
