ತುಮಕೂರು: ತಾಲೂಕಿನಲ್ಲಿ ಶನಿವಾರ ಸಂಜೆ ಮಗುವನ್ನು ಬಲಿ ಪಡೆದ ಚಿರತೆಯೊಂದು ಜನರಲ್ಲಿ ಭಾರಿ ಆತಂಕ, ಭೀತಿಯನ್ನು ಸೃಷ್ಟಿಸಿತ್ತು. ಇಂತಹ ನರಭಕ್ಷಕ ಚಿರತೆ ಕೊನೆಗೂ ಅರಣ್ಯಾಧಿಕಾರಿಗಳ ಬೋನಿಗೆ ಬಿದ್ದಿದೆ.
ಹೆಬ್ಬೂರು ಹೋಬಳಿ ಬೈಚೇನಹಳ್ಳಿ ಗ್ರಾಮದಲ್ಲಿ ನರಭಕ್ಷಕ ಚಿರತೆ ಶನಿವಾರ ಸಂಜೆ ಮನೆ ಮುಂದೆ ಆಟವಾಡುತ್ತಿದ್ದ 3 ವರ್ಷದ ಹೆಣ್ಣು ಮಗು ಚಂದನಾಳನ್ನು ಹೊತ್ತೊಯ್ದು ಕೊಂದುಹಾಕಿತ್ತು. ಈ ಮಗು ಕಣಕುಪ್ಪೆ ಗ್ರಾಪಂ ಸದಸ್ಯ ಗಂಗಚಿಕ್ಕಣ್ಣ ಅವರ ಮೊಮ್ಮಗಳು. ಶಿಲ್ಪಾ ಮತ್ತು ಶ್ರೀನಿವಾಸ್ ದಂಪತಿಯ ಏಕೈಕ ಪುತ್ರಿ. ಸಚಿವ ಜೆ.ಸಿ.ಮಾಧುಸ್ವಾಮಿ ಅವರೂ ಇವರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ. ಅರಣ್ಯ ಸಚಿವ ಆನಂದ್ ಸಿಂಗ್ ಅವರು ಮಧ್ಯಾಹ್ನ ಇವರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಲಿದ್ದಾರೆ ಎಂದು ಮೂಲಗಳು ತಿಳಿಸವೆ. ಈ ಘಟನೆಯಿಂದಾಗಿ ಗ್ರಾಮಸ್ಥರಷ್ಟೇ ಅಲ್ಲ, ಇಡೀ ತಾಲೂಕಿನ ಜನ ಬೆಚ್ಚಿಬಿದ್ದಿದ್ದರು. ಚಿರತೆಯನ್ನು ಸೆರೆಹಿಡಿದು ಕೊಲ್ಲಬೇಕು ಎಂಬ ಆಗ್ರಹ ಎಲ್ಲೆಡೆ ಕೇಳಿಬಂದಿತ್ತು.
ನರಭಕ್ಷಕ ಚಿರತೆ ಊರ ಜನರಲ್ಲಿ ಭೀತಿ ಸೃಷ್ಟಿಸಿದ ಕಾರಣ ಅರಣ್ಯ ಇಲಾಖೆ ಸಿಬ್ಬಂದಿ ಮತ್ತು ಪೊಲೀಸರು ನಿನ್ನೆ ಸಂಜೆಯಿಂದಲೇ ಕಾರ್ಯಾಚರಣೆ ಆರಂಭಿಸಿದ್ದರು. ಎಲ್ಲ ರೀತಿಯ ಪೂರ್ವ ಸಿದ್ಧತೆಯೊಂದಿಗೆ ನಡೆಸಿದ ಕಾರ್ಯಾಚರಣೆಗೆ ಫಲ ಸಿಕ್ಕಿದ್ದು, ನರಭಕ್ಷಕ ಚಿರತೆ ಬೋನಿಗೆ ಬಿದ್ದಿದೆ. ತಾಲೂಕಿನ ಹೊನ್ನೂಡಿಕೆ ಬಳಿ ತಾವರೆಕೆರೆಯಲ್ಲಿ ಭಾನುವಾರ ಬೆಳಗಿನ ಜಾವ ಬೋನಿಗೆ ಬಿದ್ದಿದೆ. ಈ ಚಿರತೆಯನ್ನು ಬಂಡೀಪುರ ಅರಣ್ಯಕ್ಕೆ ಬಿಡಲು ಅಧಿಕಾರಿ ತೀರ್ಮಾನಿಸಿದ್ದಾರೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 − 3 =
Remember me
