ತುಮಕೂರು:ಕರೊನಾ ಭೀತಿ ಹಿನ್ನೆಲೆಯಲ್ಲಿ ದೇಶವ್ಯಾಪಿ ಲಾಕ್‌ಡೌನ್ ಜಾರಿಯಲ್ಲಿದ್ದರೂ ಬಿಜೆಪಿ ಶಾಸಕರೇ ಸಾರ್ವಜನಿಕವಾಗಿ ಹುಟ್ಟುಹಬ್ಬ ಆಚರಿಸಿಕೊಂಡು ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ.
ತುರುವೇಕೆರೆ ಶಾಸಕ ಮಸಾಲ ಜಯರಾಂ ತಮ್ಮ ಹುಟ್ಟುಹಬ್ಬವನ್ನು ಸಾರ್ವಜನಿಕವಾಗಿ ಆಚರಿಸಿಕೊಂಡಿದ್ದಲ್ಲದೇ ಕರೊನಾ ರೋಗ ಹರಡದಂತೆ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕಾದ ಜವಾಬ್ದಾರಿಯನ್ನೂ ಮರೆತು ನಿಯಮ ಉಲ್ಲಂಘಿಸಿದ್ದಾರೆ. ಜತೆಗೆ ಮಾಸ್ಕ್ ಧರಿಸದೆ ಹುಟ್ಟುಹಬ್ಬದ ಸಂಭ್ರಮದಲ್ಲಿ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳ ಜತೆ ಮಿಂದೆದ್ದರು. ಇನ್ನು, ನಿಷೇಧಾಜ್ಞೆ ಜಾರಿಯಲ್ಲಿರುವಾಗ ನೂರಾರು ಮಂದಿ ಒಂದೆಡೆ ಸೇರಿರುವುದು ಕಾನೂನಿನ ಸ್ಪಷ್ಟ ಉಲ್ಲಂಘನೆಯಾಗಿದೆ.
ಮಸಾಲ ಜಯರಾಂ ಹುಟ್ಟೂರಾದ ಗುಬ್ಬಿ ತಾಲೂಕಿನ ಇಡಗೂರು ಗ್ರಾಮದ ಸರ್ಕಾರಿ ಶಾಲೆ ಆವರಣದಲ್ಲಿ ಕೇಕ್ ಕತ್ತರಿಸಿ ಜನರೊಟ್ಟಿಗೆ ತಮ್ಮ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಈ ವೇಳೆ ಕೈಗವುಸು ತೊಟ್ಟಿದ್ದ ಶಾಸಕರು ಮಾಸ್ಕ್ ಧರಿಸಿರಲಿಲ್ಲ. ಸಾಮಾಜಿಕ ಅಂತರವವನ್ನೂ ಕಾಯ್ದುಕೊಂಡಿರಲಿಲ್ಲ.
ಅಭಿಮಾನಿಗಳಿಗೆ ಬಾಡೂಟ:ಹುಟ್ಟುಹಬ್ಬ ಆಚರಿಸುವುದಕ್ಕೆ ಸೇರಿದ್ದ ಅಭಿಮಾನಿಗಳಿಗೆಲ್ಲ ಬಿರಿಯಾನಿ ಊಟ ಹಾಕಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಶಾಸಕರ ಬರ್ತ್‌ಡೇ ವಿಡಿಯೋ ಸಾಕಷ್ಟು ಚರ್ಚೆಗೆ ಗ್ರಾಸ ಒದಗಿಸಿದೆ. ಇದಕ್ಕೂ ಮುನ್ನ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತರಿಗೆ ಮಾಸ್ಕ್, ಸ್ಯಾನಿಟೈಸರ್‌ಗಳನ್ನು ವಿತರಿಸಿ ಸರಳವಾಗಿ ಶಾಸಕರು ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ ಎನ್ನಲಾಗಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ವಂಶಿಕೃಷ್ಣ ಅವರು, ‘‘ಶಾಸಕರು ಹುಟ್ಟುಹಬ್ಬ ಆಚರಿಸಿಕೊಂಡಿರುವ ವಿಡಿಯೋ ದೃಶ್ಯಗಳನ್ನು ನೋಡಿದ್ದೇನೆ. ಈ ಬಗ್ಗೆ ವರದಿ ನೀಡಲು ಸ್ಥಳೀಯ ಪೊಲೀಸರಿಗೆ ಸೂಚನೆ ನೀಡಿದ್ದೇನೆ. ಸೆಕ್ಷನ್ 144ರ ಸ್ಪಷ್ಟ ಉಲ್ಲಂಘನೆ ಇದಾಗಿದ್ದು, ವರದಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು’’ ಎಂದಿದ್ದಾರೆ.
ಮತ್ತೊಮ್ಮೆ ವಿಶ್ವದ ಗಮನ ಸೆಳೆದ ಭಾರತ: ರಾಷ್ಟ್ರಪತಿ, ಪ್ರಧಾನಿಯ ಟ್ವಿಟರ್‌ ಖಾತೆ ಫಾಲೋ ಮಾಡುತ್ತಿರುವ ಶ್ವೇತ ಭವನ

VIDEO| ರೂಲ್ಸ್‌ ಅಂದ್ರೆ ರೂಲ್ಸ್‌ ಅಷ್ಟೇ… ಊಟ ಕೊಡಹೋದ ಪೊಲೀಸರಿಗೆ ವ್ಯಕ್ತಿಯ ಕರೊನಾ ಪಾಠ ವಿಡಿಯೋ ವೈರಲ್​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve − ten =
Remember me
