ತುಮಕೂರು:ಶಿರಾ ಉಪಸಮರದಲ್ಲಿ ನಮ್ಮ ಅಭ್ಯರ್ಥಿ 20 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅಭಿಪ್ರಾಯಪಟ್ಟರು.
ನಗರದಲ್ಲಿ ಮಂಗಳವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಯಾವ ಕ್ಷೇತ್ರದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಶಕ್ತಿ ಇರಲಿಲ್ಲವೊ ಅಲ್ಲಿ ಗೆಲ್ಲುವ ಸವಾಲು ನಮ್ಮ ಮುಂದಿತ್ತು ಎಂದರು. ನಮ್ಮೆಲ್ಲಾ ಮುಖಂಡರ ಒಗ್ಗಟ್ಟಿನ ಫಲವಾಗಿ ಗೆಲುವು ನಿಶ್ಚಿತವಾಗಿದ್ದು ಸಂತೃಪ್ತಿಯಿಂದ ಬೆಂಗಳೂರಿಗೆ ವಾಪಸಾಗುತ್ತಿದ್ದೇವೆ ಎಂದರು.
ಶೇ.80ಕ್ಕೂ ಹೆಚ್ಚು ಮತದಾನ ಮಾಡಿರುವ ಶಿರಾ ಮತದಾರರು ಹಾಗೂ ನಮ್ಮೆಲ್ಲಾ ಮುಖಂಡರು, ಕಾರ್ಯಕರ್ತರನ್ನು ಅಭಿನಂದಿಸುವುದಾಗಿ ಹೇಳಿದರು. ಕಾಂಗ್ರೆಸ್ ಹಾಗೂ ಜೆಡಿಎಸ್ ಭಾರತೀಯ ಜನತ ಪಕ್ಷವನ್ನು ಲೆಕ್ಕಕ್ಕೆ ಇಟ್ಟುಕೊಂಡಿರಲಿಲ್ಲ, ವಾರದಿಂದ ಶಿರಾ ರಾಜಕೀಯ ಚಿತ್ರಣವೇ ಬದಲಾಗಿದ್ದು ಫಲಿತಾಂಶ ಬಿಜೆಪಿ ಪರವಾಗಿರಲಿದೆ ಎಂದರು.
ಇದನ್ನೂ ಓದಿ:ಶಿರಾ, ಆರ್​ ಆರ್​ ನಗರ ಕ್ಷೇತ್ರದಲ್ಲಿ ಅಭ್ಯರ್ಥಿಗಳ ಹಣೆಬರಹ ಬರೆದ ಮತದಾರರು!
ಶಿರಾದಲ್ಲಿ ಬದಲಾವಣೆಯ ಸುನಾಮಿ ಎದ್ದಿದೆ, ಮಹಿಳೆಯರು ಹಾಗೂ ಯುವಕರು ಬಿಜೆಪಿ ಪರವಾಗಿ ಮತ ನೀಡಿದ್ದಾರೆ, ವಿರೋಧಿಗಳ ಘಟಾನುಘಟಿ ನಾಯಕರ ಮಾತಿಗೆ ಜನರು ಮರಳಾಗಿಲ್ಲ, ಶಿರಾ ಇತಿಹಾಸದಲ್ಲೇ ಅತೀ ಹೆಚ್ಚಿನ ಅಂತರ ಗೆಲುವು ನಮ್ಮ ಅಭ್ಯರ್ಥಿ ಸಾಧಿಸಲಿದ್ದಾರೆ ಎಂದರು. ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ಗೆಲುವು ಮುಂದುವರಿಸುತ್ತೇವೆ ಎಂದರು.
ಸುದ್ದಿಗೋಷ್ಟಿಯಲ್ಲಿ ಶಾಸಕ ಜಿ.ಬಿ.ಜ್ಯೋತಿಗಣೇಶ್, ಬಿಜೆಪಿ ಜಿಲ್ಲಾಧ್ಯಕ್ಷ ಬಿ.ಸುರೇಶ್ ಗೌಡ, ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಸೇರಿದಂತೆ ಮತ್ತಿತರರು ಇದ್ದರು.
ಖಾಲಿ ಹುದ್ದೆ ಭರ್ತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ: ಸಿ.ಎಸ್. ಷಡಕ್ಷರಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight + three =
Remember me
