ಬೆಂಗಳೂರು:ಬೆಂಗಳೂರಿನ ರಾಜರಾಜೇಶ್ವರಿ ನಗರ ಹಾಗೂ ತುಮಕೂರಿನ ಶಿರಾ ಕ್ಷೇತ್ರಗಳ ಉಪಚುನಾವಣೆಯ ದಿನಾಂಕವನ್ನು ಚುನಾವಣಾ ಆಯೋಗ ಮಂಗಳವಾರ ಪ್ರಕಟಿಸಿದೆ.
ನವೆಂಬರ್​ 3ರಂದು ಎರಡು ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು, ನ. 10ರಂದು ಫಲಿತಾಂಶ ಹೊರಬೀಳಲಿದೆ. ನಾಮಪತ್ರ ಸಲ್ಲಿಸಲು ಅಕ್ಟೋಬರ್​​ 16 ಕೊನೆಯ ದಿನಾಂಕವಾಗಿದ್ದು, ಅಕ್ಟೋಬರ್​​ 17ಕ್ಕೆ ಪರಿಶೀಲನೆ ನಡೆಯಲಿದೆ. ನಾಮಪತ್ರ ಹಿಂಪಡೆಯಲು ಅ​​. 19 ಕೊನೆಯ ದಿನವಾಗಿದೆ.
ಕರ್ನಾಟಕದ ಎರಡು ಕ್ಷೇತ್ರ ಸೇರಿದಂತೆ ದೇಶ ಒಟ್ಟು 56 ಕ್ಷೇತ್ರಗಳಿಗೆ ಉಪಚುನಾವಣೆ ನಿಗದಿಯಾಗಿದ್ದು, ಅದರ ಪಟ್ಟಿಯನ್ನು ಸುದ್ದಿಯ ಕೊನೆಯಲ್ಲಿ ಕಾಣಬಹುದಾಗಿದೆ.
ಗರಿಗೆದರಲಿದೆ ರಾಜಕೀಯ ಚಟುವಟಿಕೆರಾಜರಾಜೇಶ್ವರಿ ನಗರ ಕ್ಷೇತ್ರ ಉಪಚುನಾವಣೆಯಲ್ಲಿ ಬಿಜೆಪಿಯಲ್ಲಿ ಟಿಕೆಟ್​ ವಿಚಾರವಾಗಿ ಮುನಿರತ್ನಾ ಹಾಗೂ ತುಳಸಿಮುನಿರಾಜಗೌಡ ನಡುವೆ ಫೈಟ್​ ನಡೆಯಲಿದೆ. ಮುನಿರತ್ನ ರಾಜೀನಾಮೆ ನೀಡಿರುದರಿಂದ ಬಿಜೆಪಿ ಟಿಕೆಟ್​ ಮುನಿರತ್ನಗೆ ಪಕ್ಕಾ ಆಗಿದೆ. ಆದರೆ, ಮುನಿರತ್ನಗೆ ಟಿಕೆಟ್ ನೀಡುವುದಕ್ಕೆ ಮುನಿರಾಜು ವಿರೋಧ ವ್ಯಕ್ತಪಡಿಸಿದ್ದಾರೆ. ಹೀಗಾಗಿ ತೀವ್ರ ಕುತೂಹಲ ಮೂಡಿಸಿದೆ.
ಇನ್ನು ಕಾಂಗ್ರೆಸ್​ನಿಂದ ಯಾವುದೇ ಹೆಸರು ಫೈನಲ್ ಆಗಿಲ್ಲ. ಕೆಪಿಸಿಸಿ ಅಧ್ಯಕ್ಷ ಡಿಕೆಶಿ ನೇತೃತ್ವದಲ್ಲಿ ಇನ್ನೆರಡು ದಿನದಲ್ಲಿ ಸಭೆ ಸೇರಿ ಅಭ್ಯರ್ಥಿ ಹೆಸರು ಫೈನಲ್​ ಆಗಲಿದೆ. ಜೆಡಿಎಸ್ ಅಭ್ಯರ್ಥಿ ಸಹ ಇನ್ನೂ ತಿರ್ಮಾನ ಆಗಿಲ್ಲ.
ಇನ್ನು ಶಿರಾ ಕ್ಷೇತ್ರದಲ್ಲಿ ಕಾಂಗ್ರೆಸ್​ನಿಂದ ಟಿ.ಬಿ.ಜಯಚಂದ್ರರಿಗೆ ಟಿಕೆಟ್ ಫೈನಲ್ ಆಗಿದೆ. ಜೆಡಿಎಸ್ ಹಾಗು ಬಿಜೆಪಿ ಇನ್ನೂ ಅಂತಿಮ‌ ಮಾಡಬೇಕಿದೆ. ನಿಧನರಾದ ಸತ್ಯನಾರಾಯಣ ಕುಟುಂಬದವರಿಗೆ ಜೆಡಿಎಸ್ ಟಿಕೆಟ್ ನೀಡುವ ಸಾಧ್ಯತೆ ಹೆಚ್ಚಿದೆ.


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − 3 =
Remember me
