ತುಮಕೂರು:ಶಿರಾ ವಿಧಾನಸಭೆ ಕ್ಷೇತ್ರದ ಉಪಸಮರ ದಿನೇದಿನೆ ರಂಗೇರುತ್ತಿದ್ದು, ಜಿದ್ದಾಜಿದ್ದಿ ಕಣದಲ್ಲಿ ಪಕ್ಷಾಂತರಿಗಳ ಹೈಜಂಪ್​ ಜೋರಾಗಿದೆ.ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಜಿಪಂ ಅಧ್ಯಕ್ಷೆ ಎಂ.ಲತಾ ಅವರ ಪತಿ ಜೆಡಿಎಸ್ ಮುಖಂಡ ಕಲ್ಕರೆ ರವಿಕುಮಾರ್​ ಕಾಂಗ್ರೆಸ್​ ಸೇರ್ಪಡೆಯಾಗಿದ್ದು, ಜೆಡಿಎಸ್​ ಪಾಳಯದಲ್ಲಿ ಆತಂಕ ಶುರುವಾಗಿದೆ.
ರವಿಕುಮಾರ್​ ಪತ್ನಿ ಲತಾ ಜೆಡಿಎಸ್​ನಿಂದ ಜಿಪಂಗೆ ಆಯ್ಕೆಯಾಗಿದ್ದು, ಅಧ್ಯೆಯಾಗಿ ನಾಲ್ಕೂವರೆ ವರ್ಷದಿಂದಲೂ ಅಧಿಕಾರ ಅನುಭವಿಸುತ್ತಿದ್ದಾರೆ. ಈ ನಡುವೆ ಅಧ್ಯಕ್ಷೆ ವಿರುದ್ಧ ಸದಸ್ಯರು ಅವಿಶ್ವಾಸ ಮಂಡಿಸಿದ್ದಾರೆ. ಅ.7ರಂದು ಜಿಪಂ ಅಧ್ಯಕ್ಷೆ ವಿರುದ್ಧ ನಡೆಯಲಿರುವ ಅವಿಶ್ವಾಸ ನಿರ್ಣಯ ಸಭೆಯಲ್ಲಿ ಲತಾ ಅವರನ್ನು ಕಾಂಗ್ರೆಸ್ ಬೆಂಬಲಿಸಲಿದೆ. ಇದಕ್ಕೆ ಪ್ರತಿಯಾಗಿ ಜೆಡಿಎಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ರವಿಕುಮಾರ್ ಕಾಂಗ್ರೆಸ್​ಗೆ ಜಿಗಿದಿದ್ದಾರೆ. ಆ ಮೂಲಕ ಜಿಪಂ ಗದ್ದುಗೆ ಉಳಿಸಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿರಿಕುಸುಮಾ ತಲೆ ಮೇಲೆ ‘ಕೈ’ ಇಟ್ರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ !
ಭಾನುವಾರ ಕೆಪಿಸಿಸಿ ಕಚೇರಿಯಲ್ಲಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಕುರುಬ ಸಮುದಾಯದ ರವಿಕುಮಾರ್​ ಕಾಂಗ್ರೆಸ್​ ಸೇರ್ಪಡೆಯಾಗಿದ್ದು, ಕ್ಷೇತ್ರ ಉಳಿಸಿಕೊಳ್ಳುವ ಸಂಕಲ್ಪ ತೊಟ್ಟಿರುವ ಜೆಡಿಎಸ್​ಗೆ ದೊಡ್ಡ ಹಿನ್ನಡೆ ಎನಿಸಿದೆ.
ಯಾದವರಿಗೆ ಅಧ್ಯಕ್ಷ ಸ್ಥಾನ ಕೊಟ್ಟು ಶಿರಾ ಬೈ ಎಲೆಕ್ಷನ್​ನಲ್ಲಿ ರಾಜಕೀಯ ಲಾಭ ಪಡೆಯುವ ಬಿಜೆಪಿ ಲೆಕ್ಕಾಚಾರ ಉಲ್ಟಾ ಹೊಡೆದಿದೆ. ಜೆಡಿಎಸ್​ ಸದಸ್ಯರು ದಿಕ್ಕು ತೋಚದಂತಾಗಿದ್ದಾರೆ. ಸಾಕಷ್ಟು ಸಂಪನ್ಮೂಲದಿಂದ ಶಿರಾ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ರವಿಕುಮಾರ್​ ಸೇರ್ಪಡೆ ಜಯಚಂದ್ರಗೆ ಲಾಭ ಎನ್ನಲಾಗಿದೆ.
ಶಿರಾ ಉಪಚುನಾವಣೆಯಲ್ಲಿ ಜೆಡಿಎಸ್​ ಟಿಕೆಟ್​ ಪ್ರಬಲ ಆಕಾಂಕ್ಷಿಯಾಗಿರುವ ಕಲ್ಕರೆ ರವಿಕುಮಾರ್​ ಪಕ್ಷಾಂತರ ಕಾಂಗ್ರೆಸ್​ಗೆ ಲಾಭ ತಂದುಕೊಡಲಿದೆ ಎಂಬ ಹಿನ್ನೆಲೆಯಲ್ಲಿ ಟಿ.ಬಿ.ಜಯಚಂದ್ರ ವಿಶೇಷ ಆಸಕ್ತಿವಹಿಸಿ ಪಕ್ಷಕ್ಕೆ ಕರೆತಂದಿದ್ದಾರೆ ಎನ್ನಲಾಗಿದೆ.
ಆರ್​ಆರ್​ ನಗರ ಬೈ ಎಲೆಕ್ಷನ್​: ಕಾಂಗ್ರೆಸ್​ ಅಭ್ಯರ್ಥಿ ಯಾರು ಗೊತ್ತಾ? ಇಲ್ಲಿದೆ ಡಿಕೆಶಿ ಫೈನಲ್​ ಲಿಸ್ಟ್

ನನ್ನ ಮಗನ ಫೋಟೋ-ಹೆಸರು ಬಳಸಿದ್ರೆ ಬೆಂಕಿ ಹಚ್ಚಿಸ್ತೀನಿ: ಸೊಸೆ ವಿರುದ್ಧ ಸಿಡಿದೆದ್ದ ಡಿ.ಕೆ. ರವಿ ತಾಯಿ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:5 × one =
Remember me
