ತುಮಕೂರು:ಡಾ. ಶಿವಕುಮಾರ ಶ್ರೀಗಳ ಪ್ರಥಮ ವರ್ಷದ ಪುಣ್ಯಸ್ಮರಣೋತ್ಸವವಾದ ಇಂದು ನಾಡಿನ ವಿವಿಧ ಭಾಗಗಳಿಂದ ಭಕ್ತರು ಆಗಮಸಿದ್ದಾರೆ.
ಶ್ರೀಗಳ ತ್ರಿವಿಧ ದಾಸೋಹ ನೆನೆಪಿಸಿ ನಮಿಸಿದ ಭಕ್ತರು, ಮುಂಜಾನೆ 3.30ರಿಂದ ಸಿದ್ದಲಿಂಗ ಶ್ರೀಗಳೊಂದಿಗೆ ಲಿಂಗ ಪೂಜೆಯಲ್ಲಿ ಭಕ್ತರು ಭಾಗಿಯಾಗಿದ್ದರು.
ಉದ್ದಾನ ಶ್ರೀಗಳ ಗದ್ದಿಗೆಗೆ ನಮಿಸಿ, ನಂತರ ಡಾ .ಶಿವಕುಮಾರ ಶ್ರೀಗಳ ಗದ್ದುಗೆ ಬಳಿ ಸಿದ್ದಲಿಂಗ ಸ್ವಾಮಿಗಳು ತೆರಳಿದರು. ಶ್ರೀಗಳ ಪುಣ್ಯ ಸ್ಮರಣೆ ಅಂಗವಾಗಿ ಮಠದ ಗೋಸಲ ಸಿದ್ದೇಶ್ವರ ವೇದಿಕೆಯಲ್ಲಿ ಸಭಾ ಕಾರ್ಯಕ್ರಮ ಆಯೋಜಿಸಲಾಗಿದ್ದು, ಮೈಸೂರು ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಮ್ಮಡಿ ನಿರ್ವಾಣ ಸ್ವಾಮೀಜಿ, ಶಿವರುದ್ರು ಸ್ವಾಮೀಜಿ ಸೇರಿದಂತೆ ವಿವಿಧ ಮಠಾಧೀಶರು ಭಾಗಿಯಾಗಲಿದ್ದಾರೆ. ಸಿಎಂ ಯಡಿಯೂರಪ್ಪ ಅವರು ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದಾರೆ.
ಡಿಸಿಎಂ ಗೋವಿಂದ ಕಾರಜೋಳ, ಡಿಸಿಎಂ ಲಕ್ಷಣ ಸವದಿ, ಮಾಜಿ ಸಿಎಂಗಳಾದ ಸಿದ್ಧರಾಮಯ್ಯ, ಕುಮಾರಸ್ವಾಮಿ. ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸಚಿವರಾದ ಮಾಧುಸ್ವಾಮಿ, ಸಿ.ಟಿ. ರವಿ, ವಿ. ಸೊಮಣ್ಣ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
50 ಸಾವಿರಕ್ಕೂ ಹೆಚ್ಚು ಆಸನ ವ್ಯವಸ್ಥೆ ಮಾಡಲಾಗಿದ್ದು ಬೆಳಗ್ಗೆ 10.30 ರಿಂದ ಮುಖ್ಯ ಸಭಾ ಕಾರ್ಯಕ್ರಮ ನಡೆಯಲಿದೆ.
ಶ್ರೀ ಶಿವಕುಮಾರ ಸ್ವಾಮೀಜಿ ಭಾವಚಿತ್ರ ಗುಲಾಬಿ ಹೂವಿನಲ್ಲಿ ಅರಳಿದ್ದು ಭಕ್ತರ ಗಮನ ಸೆಳೆಯುತ್ತಿದೆ. ಗುಲಾಬಿ ಹೂವು, ಬಿಳಿ ಸೇವಂತಿಗೆ ಹೂವುಗಳನ್ನು ಬಳಸಿ ಶ್ರೀಗಳ ಭಾವ ಚಿತ್ರ ತಯಾರಿಲಾಗಿದೆ.
ಗೋಸಲ ಸಿದ್ದೇಶ್ವರ ವೇದಿಕೆಯಲ್ಲಿ ಶ್ರೀಗಳ ಈ ಹೂವಿನಿಂದ ಭಾವಚಿತ್ರ ಅರಳಿದೆ. ವೇದಿಕೆ ಎರಡೂ ಕಡೆಗೂ ಗುಲಾಬಿ ಹೂವಿನ ಶ್ರೀಗಳ ಭಾವಚಿತ್ರವನ್ನು ತಯಾರಿಸಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × three =
Remember me
