ಬೆಂಗಳೂರು:ರಾಜ್ಯ ಸರ್ಕಾರ ತುಂಗಭದ್ರಾ ಅಣೆಕಟ್ಟೆಯ ಡ್ಯಾಮ್ ಮ್ಯಾನೇಜ್ ಮೆಂಟ್ ಕಮಿಟಿ ನೀಡಿರುವ ಸಲಹೆಗಳನ್ನು ಗಂಭೀರವಾಗಿ ತೆಗೆದುಕೊಳ್ಳದಿರುವುದರಿಂದ ಡ್ಯಾಮ್ ನ ಕ್ರಸ್ಟ್ ಗೇಟ್ ಮುರಿದು ಸಮಸ್ಯೆ ಎದುರಿಸುವಂತಾಗಿದೆ ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಆಕ್ರೋಶ ಹೊರ ಹಾಕಿದ್ದಾರೆ.
ಸುದ್ದಿಗಾರರೊಂದಿಗೆ ಭಾನುವಾರ ಮಾತನಾಡಿದ ಅವರು, ತುಂಗಭದ್ರಾ ಡ್ಯಾಂ ಸ್ವತಂತ್ರ ಪೂರ್ವದಲ್ಲಿ ನಿರ್ಮಾಣ ಆಗಿದೆ. ಅದು ಕಾಲ ಕಾಲಕ್ಕೆ ಹಲವಾರು ಸಮಸ್ಯೆ ಎದುರಿಸುತ್ತಾ ಬಂದಿದೆ. ಹೂಳು ತುಂಬಿರುವ ಬಗ್ಗೆ ಬಹಳ ದೊಡ್ಡ ಸಮಸ್ಯೆ ಆಗಿತ್ತು. ಹೀಗಾಗಿ  ಸಮಾನಾಂತರವಾದ ಅಣೆಕಟ್ಟು  ಕಟ್ಟಬೇಕು ಅಂತ ನಮ್ಮ ಅವಧಿಯಲ್ಲಿ  ಡಿಪಿಆರ್ ಮಾಡಿ ಸಿದ್ಧತೆ ಮಾಡಲಾಗಿತ್ತು ಎಂದರು.
ಡ್ಯಾಂ ಮ್ಯಾನೇಜ್ ಮೆಂಟ್ ಕಮಿಟಿ ಕೇಂದ್ರ ಸರ್ಕಾರದಿಂದ ಬಂದು ಹಲವು ಸಲಹೆ ಕೊಟ್ಟಿರುತ್ತಾರೆ. ಅವರ ಸಲಹೆಗಳನ್ನು ರಾಜ್ಯ ಸರ್ಕಾರ ಒತ್ತು ಕೊಟ್ಟು ಜಾರಿ ಮಾಡಬೇಕು. ಆದರೆ, ಸರ್ಕಾರ ಗಂಭೀರವಾಗಿ ಅವರ ಸಲಹೆ ತೆಗೆದುಕೊಂಡಿಲ್ಲ ಅನಿಸುತ್ತದೆ. ಅವರ ಸಲಹೆ ಗಂಭೀರವಾಗಿ ಪರಿಗಣಿಸಿದ್ದರೆ ಈ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಸರ್ಕಾರ ಈ ಕೂಡಲೇ ಚೈನ್ ಅಷ್ಟೇ ಅಲ್ಲ, ಸಂಪೂರ್ಣ ಗೇಟ್ ಭದ್ರಗೊಳಿಸಬೇಕು. ಹಣ ಬಿಡುಗಡೆ ಮಾಡಿ ಗೇಟ್ ದುರಸ್ತಿ ಕೆಲಸ ಮಾಡಬೇಕು. ಡ್ಯಾಂ ಹಾಗೂ ಜನರ ಸುರಕ್ಷತೆಯನ್ನು ಸರ್ಕಾರ ಗಮನಿಸಬೇಕು. ಸರ್ಕಾರದ ನಿರ್ಲಕ್ಷ್ಯತನದಿಂದಲೇ ಹೀಗೆ ಆಗಿರಬಹುದು. ಸರ್ಕಾರ ಮುಂಜಾಗ್ರತಾ ಕ್ರಮ ತೆಗೆದುಕೊಂಡಿಲ್ಲ. ಹಣಕಾಸು ಅಥವಾ ತಾಂತ್ರಿಕ ಸಮಸ್ಯೆ ಆಗಿರಬಹುದು.  ನೋಡೋಣ  ಏನಾಗಿದೆ ಎಂದು ಗೊತ್ತಾಗುತ್ತದೆ.
ಡ್ಯಾಂನಲ್ಲೇ ಇಂಜಿನಿಯರ್ ಗಳು, ತಾಂತ್ರಿಕ ತಜ್ಞರು ಇದ್ದರು. ಅವರೆಲ್ಲ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕಿತ್ತು. ಈ ವರ್ಷ ಅತೀ ಹೆಚ್ಚು ಮಳೆ ಬರುತ್ತದೆ ಅಂತ ಮೊದಲೇ ಹವಾಮಾನ ತಜ್ಞರು ಹೇಳಿದ್ದರು. ಅದನ್ನು ಅರ್ಥ ಮಾಡಿಕೊಂಡು ಇವರು ಕೆಲಸ ಮಾಡಬೇಕಿತ್ತು. ಆದರೆ ಸರಿಯಾದ ನಿರ್ವಹಣೆ ಮಾಡದೇ ಈ ಸಮಸ್ಯೆ ಆಗಿದೆ. ಈ ಬಗ್ಗೆ ತನಿಖೆ ನಡೆಸಿದರೆ ಸತ್ಯ ಹೊರಬರಲಿದೆ ಎಂದು ಬೊಮ್ಮಾಯಿ ಹೇಳಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two + 3 =
Remember me
