ಬೆಂಗಳೂರು:ತುಂಗಭದ್ರಾ ಅಣೆಕಟ್ಟಿನ ಗೇಟ್ ದುರಸ್ತಿ ಕಾರ್ಯ ಆರಂಭವಾಗಿದೆ. ನೀರಿನ ಪ್ರಮಾಣ ಕಡಿಮೆ ಮಾಡದ ಹೊರತಾಗಿ ದುರಸ್ತಿ ಕಾರ್ಯ ಸಾಧ್ಯವಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಇದನ್ನೂ ಓದಿ:ವಿನೇಶ್​​ ಫೋಗಟ್​ ಅನರ್ಹತೆಯಲ್ಲಿ ವೈದ್ಯಕೀಯ ತಂಡವನ್ನು ದೂರುವುದಲ್ಲ ತೂಕ ನಿರ್ವಹಣೆ ಪ್ರತಿಯೊಬ್ಬ ಕ್ರೀಡಾಪಟು ಜವಾಬ್ದಾರಿ: ಪಿ.ಟಿ.ಉಷಾ
ಬೆಂಗಳೂರಿನಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, “ನಾನು ಅಣೆಕಟ್ಟಿಗೆ ಭೇಟಿ ನೀಡಿ ಬಂದಿದ್ದೇನೆ. ಜಿಂದಾಲ್ ಕಂಪನಿ ಹಾಗೂ ಇತರರ ಜತೆ ಮಾತನಾಡಿದ್ದೇನೆ. ಕೆಲವೇ ಕ್ಷಣಗಳಲ್ಲಿ ಕೆಲಸ ಆರಂಭವಾಗಿರುವ ಬಗ್ಗೆ ಮಾಹಿತಿ ಕಳುಹಿಸಿಕೊಡುತ್ತೇನೆ ಎಂದು ತಿಳಿಸಿದರು.
ಈ ಘಟನೆಗೆ ಯಾರನ್ನಾದರೂ ಹೊಣೆ ಮಾಡಿದ್ದೀರಾ ಎಂದು ಕೇಳಿದಾಗ, “ಅಧಿಕಾರಿಗಳನ್ನು ಹೊಣೆ ಮಾಡುವುದಕ್ಕಿಂತ ಆಣೆಕಟ್ಟು ಉಳಿಸಿ, ರೈತರನ್ನು ರಕ್ಷಣೆ ಮಾಡುವುದು ನಮ್ಮ ಆದ್ಯತೆ. ಆನಂತರ ಅಧಿಕಾರಿಗಳ ವಿಚಾರ ನೋಡೋಣ. ಮೊದಲು ಸಮಸ್ಯೆ ಬಗೆಹರಿಸುವುದು ಮುಖ್ಯ ಎಂದರು.
ಇದು 70 ವರ್ಷಗಳ ಹಳೆಯ ಅಣೆಕಟ್ಟು. ಅದರ ಸರಪಳಿ ಕಟ್ ಆಗಿದೆ. ಬೇರೆ ಕಡೆಗಳಲ್ಲಿ ಎರಡು ಅವಕಾಶವಿರುತ್ತದೆ. ರೈತರಿಗೆ ನೀರು ಉಳಿಸುವುದಕ್ಕಾಗಿ ಗೇಟ್ ಹಾಕಲು ಪ್ರಯತ್ನ ಮಾಡುತ್ತಿದ್ದೇವೆ. ಅಣೆಕಟ್ಟಿನಲ್ಲಿ ನೀರು ಕಡಿಮೆಯಾಗದ ಹೊರತು ಕೆಲಸ ಮಾಡಲು ಸಾಧ್ಯವಿಲ್ಲ. ಹೀಗಾಗಿ ನೀರು ಹರಿಯಲಿದೆ. ದ್ವಿಗುಣ ಸಿಬ್ಬಂದಿ ನಿಯೋಜಿಸಿ ಹಗಲು ರಾತ್ರಿಯಿಡಿ ತ್ವರಿತಗತಿಯಲ್ಲಿ ಗೇಟ್ ಸಿದ್ಧಪಡಿಸಲಾಗುತ್ತಿದೆ” ಎಂದು ತಿಳಿಸಿದರು.
ಕೆಆರ್​ಎಸ್​ನಲ್ಲೂ ಸಮಸ್ಯೆಯಿದೆ ಎಂದು ಕುಮಾರಸ್ವಾಮಿ ಅವರು ಹೇಳಿದ್ದಾರೆ ಎಂದು ಕೇಳಿದಾಗ, “ಕುಮಾರಸ್ವಾಮಿಗೆ ರಾಜಕಾರಣ ಮಾತನಾಡುವುದು ಬಿಟ್ಟು ಬೇರೆ ಏನು ಗೊತ್ತು? ಕುಮಾರಸ್ವಾಮಿಗೆ ಕೆಆರ್​ಎಸ್ ನಲ್ಲಿ ಏನು ಸಮಸ್ಯೆಯಿದೆ? ಎಲ್ಲಾ ಅಣೆಕಟ್ಟುಗಳ ಸುರಕ್ಷತೆಗೆ ಸಮಿತಿ ರಚಿಸಿ ಅಣೆಕಟ್ಟುಗಳ ಭೇಟಿ ನೀಡಿ ವರದಿ ನೀಡುವಂತೆ ಸೂಚಿಸಲಾಗಿದೆ. ಯಾವುದೇ ರೈತರನ್ನು ಗಾಬರಿಪಡಿಸುವ ಅಗತ್ಯವಿಲ್ಲ” ಎಂದು ಹೇಳಿದರು.
ಬಿಹಾರ: ಆ್ಯಸಿಡ್​ನಿಂದ ವಿರೂಪಗೊಂಡ ಸ್ಥಿತಿಯಲ್ಲಿ ಒಂದೇ ಕುಟುಂಬದ ಮೂವರ ಶವ ಪತ್ತೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 3 =
Remember me
