ವಿಜಯನಗರ:ಐತಿಹಾಸಿಕ ತುಂಗಭದ್ರಾ ಜಲಾಶಯದ ಒಡಲಾಳ ಖಾಲಿಯಾಗುತ್ತಿದ್ದು ಅಪಾಯದ ಹಂತ ತಲುಪಿದೆ. ಸದ್ಯ ಕಲ್ಯಾಣ- ಕರ್ನಾಟಕದ ಜೀವನಾಡಿ ತುಂಗಭದ್ರಾ ಜಲಾಶಯದ ನೀರಿನ ಮಟ್ಟ ಡೆಡ್ ಸ್ಟೋರೆಜ್ ಗೆ ತಲುಪಿದ್ದು ಸರಿಯಾಗಿ ಜಲಾಶಯ 10% ಕೂಡ ತುಂಬಿಲ್ಲ.
ರಾಜ್ಯದ ನಾನಾ ಕಡೆ ಮಳೆಯಾಗಿರುವುದು ಎಲ್ಲರಿಗೂ ತಿಳಿದದ್ದೇ. ಅಲ್ಲಿ ಮಳೆಯಾಗುತ್ತದೆ, ಇಲ್ಲಿ ಮಳೆಯಾಗುತ್ತದೆ ಎಂದು ಹವಾಮಾನ ಇಲಾಖೆ ಸೂಚನೆ ಹೊರಡಿಸುತ್ತಿರುವುದನ್ನು ನೋಡಿದ್ದೇವೆ. ಆದರೆ ವರುಣ ದೇವನ ಕೃಪೆ ಮಾತ್ರ ಈ ಭಾಗದಲ್ಲಿ ಆಗುತ್ತಿಲ್ಲ.
ಇದನ್ನೂ ಓದಿ:ತುಂಗಭದ್ರಾ ನದಿ ಪಾತ್ರದಲ್ಲಿ ಆತಂಕ ತಂದೊಡ್ಡಿದ ವಿಮಾನ ಹಾರಾಟ
ಕಳೆದ ವರ್ಷ ಈ ಹೊತ್ತಿಗೆ ಆಗಲೇ 35 ಕ್ಕೂ ಹೆಚ್ಚು ಟಿಎಂಸಿ ನೀರು ಸಂಗ್ರಹವಿತ್ತು. ಆದ್ರೆ ಈ ಬಾರಿ ಇನ್ನೂ 5 ಟಿಎಂಸಿ ಕೂಡ ಸಂಗ್ರವಾಗಿಲ್ಲ. ತುಂಗಭದ್ರಾ ಜಲಾಶಯಕ್ಕೆ ಒಟ್ಟು 105 ಟಿಎಂಸಿ ಸಂಗ್ರಹ ಮಾಡುವ ಸಾಮರ್ಥ್ಯವಿದೆ.ಆದರೆ ಈ ಬಾರಿ ಕೇವಲ 5 ಟಿಎಂಸಿವರೆಗೆ ಮಾತ್ರವೇ ಸಂಗ್ರಹವಾಗಿ ಭಯದ ವಾತಾವರಣ ಸೃಷ್ಟಿಸಿದೆ.
ಈ ಜಲಾಶಯ, ವಿಜಯನಗರ, ಕೊಪ್ಪಳ, ಬಳ್ಳಾರಿ, ರಾಯಚೂರು ಸೇರಿದಂತೆ ಆಂಧ್ರಪ್ರದೇಶ, ತೆಲಂಗಾಣ ರಾಜ್ಯದ ಕೆಲ ಜಿಲ್ಲೆಗಳಿಗೆ ಜೀವನಾಡಿಯಾಗಿದೆ. ಆದಷ್ಟು ಬೇಗ ಮಳೆಯಾಗದಿದ್ದಲ್ಲಿ ಜಲಾಶಯದಲ್ಲಿ ನೀರು ಸಂಗ್ರವಿಲ್ಲದ ಕಾರಣ ಈ ಬಾರಿ ರೈತರಿಗೆ ಸಂಕಷ್ಟ ಎದುರಾಗುತ್ತಾ ಎನ್ನುವ ಭಯ ಕೂಡ ಕಾಡುತ್ತಿದೆ.
ಇದನ್ನೂ ಓದಿ:ತುಂಗಭದ್ರಾ ಜಲಾಶಯದ ಮುಂದಿನ ಕಿರು ಸೇತುವೆ ಮೇಲೆ ಜನರ ಹುಚ್ಚಾಟ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × three =
Remember me
