ಬೆಂಗಳೂರು:“ದ್ವೇಷದ ಬಜಾರ್‌ನಲ್ಲಿ ಪ್ರೀತಿಯ ಅಂಗಡಿ ತೆರೆಯುತ್ತೆವೆಂದು ಸುಳ್ಳಿನಿಂದ ಶುರುವಾದ ಎಟಿಎಂ ಸರ್ಕಾರ ಅಧಿಕಾರಕ್ಕೆ ಬಂದ ನಂತರದ ಪ್ರತಿ ಕ್ಷಣದಿಂದಲೂ ದ್ವೇಷವೇ ನಮ್ಮ ತಂದೆ-ತಾಯಿ, ದ್ವೇಷವೇ ನಮ್ಮ ಬಂಧು-ಬಳಗ ಎನ್ನುವ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಾ​​ ಒಂದು ತಿಂಗಳು ಪೂರೈಸಿದೆ. ರಾಜ್ಯದ ಇತಿಹಾಸದಲ್ಲಿ ಕೇವಲ ಒಂದು ತಿಂಗಳಲ್ಲಿಯೇ ಆಡಳಿತ ವಿರೋಧಿ ಅಲೆಯನ್ನು ಎದುರಿಸುತ್ತಿರುವುದು ಸಿದ್ದರಾಮಯ್ಯ ಅವರ ಸರ್ಕಾರದ ಏಕೈಕ ಸಾಧನೆ” ಎಂದು ಬಿಜೆಪಿ ಟ್ವೀಟ್ ಮಾಡಿ ಟೀಕಿಸಿದೆ.
ಇದನ್ನೂ ಓದಿ:ಬಿಜೆಪಿಯಲ್ಲಿ ವಿರೋಧ ಪಕ್ಷದ ನಾಯಕನಾಗುವ ಅರ್ಹತೆ ಇರುವ ಒಬ್ಬೇ ಒಬ್ಬ ಶಾಸಕನಿಲ್ಲದಿರುವುದು ಅತ್ಯಂತ ನಾಚಿಕೆಗೇಡು: ಕಾಂಗ್ರೆಸ್​​
“ಬರದಿಂದ ಬಸವಳಿಯುತ್ತಿರುವ ರಾಜ್ಯದ ಜನತೆಗೆ, ಬೆಲೆಯೇರಿಕೆ ಬರೆಯನ್ನು ಎಳೆದಿರುವ ಈ ಸರ್ಕಾರ ತಾನು ಚುನಾವಣಾ ಪೂರ್ವ ನೀಡಿದ್ದ ಗ್ಯಾರಂಟಿಗಳನ್ನು ಈಡೇರಿಸಿಲ್ಲ. ಅಧಿಕಾರ ಹಿಡಿದ ಮೇಲೆ ಎಲ್ಲದಕ್ಕೂ ಕಂಡಿಷನ್ ಅಪ್ಲೈ ಎಂದು ಹೇಳುತ್ತಾ, ವರ್ಗಾವಣೆ ದಂಧೆಯಲ್ಲಿ ನಿರಂತರವಾಗಿ ಸಿದ್ದರಾಮಯ್ಯ ಅವರ ಸರ್ಕಾರ ತೊಡಗಿದೆ” ಎಂದು ಟ್ವೀಟ್​ ಮಾಡಿದೆ.
“ಕೇವಲ ಬಾಯಿಮಾತಿಗೆ ಸರ್ವಜನಾಂಗದ ಶಾಂತಿಯ ತೋಟ ಎಂದು ಬೊಗಳೆ ಬಿಡುವ ಸಿದ್ದರಾಮಯ್ಯ ಅವರ ಆಡಳಿತದಲ್ಲಿ ಟಿಪ್ಪು ಛಾಯೆ ಎದ್ದು ಕಾಣುತ್ತದೆ. ಗೋ ಹತ್ಯೆ ನಿಷೇಧ, ಮತಾಂತರ ನಿಷೇಧ ಕಾಯ್ದೆಯನ್ನು ಹಿಂಪಡೆಯುವ ಮೂಲಕ ತಾವು ಹಿಂದೂ ವಿರೋಧಿ ಸರ್ಕಾರ ಎಂಬುದನ್ನು ಸಿದ್ದರಾಮಯ್ಯರವರ ಈ ತುಘಲಕ್ ಸರ್ಕಾರ ಸಾಬೀತುಪಡಿಸುತ್ತಿದೆ” ಎಂದು ಸರಣಿ ಟ್ವೀಟ್ ಮಾಡುವ ​​ಮೂಲಕ ಕಾಂಗ್ರೆಸ್​​ ಸರ್ಕಾರವನ್ನು ಟೀಕಿಸಿದೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen − 4 =
Remember me
