ಬೆಂಗಳೂರು:ಚಲಿಸುತ್ತಿದ್ದ ಸಾರಿಗೆ ಬಸ್​ನಿಂದ ಶಾಲಾ ಬಾಲಕಿಯೊಬ್ಬಳು ಕೆಳಗೆ ಬಿದ್ದು ಮೃತಪಟ್ಟಿರುವ ಘಟನೆ ಜೂ.12ರಂದು ಹಾವೇರಿಯ ಹಾನಗಲ್ಲ ತಾಲೂಕಿನಲ್ಲಿ ನಡೆದಿತ್ತು. 8ನೇ ತರಗತಿ ವಿದ್ಯಾರ್ಥಿನಿ ಮಧು ಕರಬಸಪ್ಪ ಚಕ್ರಸಾಲಿ(14) ಮೃತೆ. ಹೆಚ್ಚಿನ ಸಂಖ್ಯೆಯ ಪ್ರಾಯಣಿಕರನ್ನು ಬಸ್​ನಲ್ಲಿ ತುಂಬಿದ್ದು ಘಟನೆಗೆ ಕಾರಣವಾಗಿತ್ತು.
ಈ ಪ್ರಕರಣವನ್ನು ಉಲ್ಲೇಖಿಸಿ ರಾಜ್ಯ ಬಿಜೆಪಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿತ್ತು. ಯಾವುದೇ ಪೂರ್ವ ಸಿದ್ಧತೆ ಇಲ್ಲದೆ ‘ಶಕ್ತಿ ಯೋಜನೆ’ ಜಾರಿ ಮಾಡಿದ ಪರಿಣಾಮ ಈ ದುರಂತ ಸಂಭವಿಸಿದೆ. ಇದಕ್ಕೆ ಯಾರು ಹೊಣೆ? ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಉತ್ತರಿಸಬೇಕು ಎಂದು ಬಿಜೆಪಿ ಟ್ವೀಟ್ ಮಾಡಿ ಪ್ರಶ್ನಿಸಿತ್ತು.
ಇದನ್ನೂ ಓದಿ:ಮದ್ಯದ ಬೆಲೆ ಹೆಚ್ಚಾದರೆ ಮದ್ಯಪ್ರಿಯರು ಬೇಸರ ಆಗ್ತಾರೆಂದು ಯಾರು ಹೇಳಿದ್ದು? ಅಬಕಾರಿ ಸಚಿವ ಪ್ರಶ್ನೆ
ಇದೀಗ ರಾಜ್ಯ ಕಾಂಗ್ರೆಸ್ ಟ್ವೀಟ್ ಮೂಲಕ ರಾಜ್ಯ ಬಿಜೆಪಿಯನ್ನು ವ್ಯಂಗ್ಯವಾಡಿದೆ. ಬಿಜೆಪಿ ಪಕ್ಷದ ನೋವು ನಮಗೆ ಅರ್ಥವಾಗುತ್ತದೆ. ಬಿಜೆಪಿಯ ಉರಿ ಶಮನಕ್ಕಾಗಿ ‘ಬರ್ನಲ್ ಭಾಗ್ಯ’ ಕೊಡುವ ಬಗ್ಗೆ ಚಿಂತಿಸುತ್ತೇವೆ ಎಂದು ಹೇಳಿದೆ. ಪೂರ್ವಸಿದ್ಧತೆ ಇಲ್ಲದೆ ಲಾಕ್ ಡೌನ್ ಮಾಡಿ, ನೋಟು ನಿಷೇಧ ಮಾಡಿ ಮೃತಪಟ್ಟ ನೂರಾರು ಮಂದಿಯ ಬಗ್ಗೆ ಇದೇ ಕಾಳಜಿ ಇರಲಿಲ್ಲವೇಕೆ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.ಪ್ರಯಾಣಿಕರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಹೆಚ್ಚುವರಿ ಬಸ್​ಗಳನ್ನು ಖರೀದಿಸಲು ಚಿಂತಿಸುತ್ತಿದ್ದೇವೆ. ಸಾರಿಗೆ ಸಂಸ್ಥೆಗಳನ್ನು ಖಾಸಗೀಕರಣ ಮಾಡಲು ಹುನ್ನಾರ ನಡೆಸಿದ ನಿಮ್ಮಿಂದ ಪಾಠ ಕಲಿಯುವ ಅಗತ್ಯವಿಲ್ಲ ಎಂದು ಉತ್ತರಿಸುವ ಮೂಲಕ ಕಾಂಗ್ರೆಸ್​ ಟಕ್ಕರ್ ನೀಡಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − 13 =
Remember me
