ಬೆಂಗಳೂರು:ಶುಕ್ರವಾರ ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ನಡೆದ ನಾಲ್ಕನೇ ಟಿ-20 ಪಂದ್ಯದ ವೇಳೆ ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪದ ಮೇಲೆ ಜೆಪಿ ನಗರ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.
ಬಂಧಿತರನ್ನು ಇನಾಯತ್​ವುಲ್ಲಾ ಖಾನ್ ಹಾಗೂ ಸೈಯದ್ ಮುಬಾರಕ್ ಎಂದು ಗುರುತಿಸಲಾಗಿದ್ದು, ಪಬ್​ ಒಂದರಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಪಂದ್ಯ ವೀಕ್ಷಿಸುವ ವೇಳೆ ಇಬ್ಬರು ಪಾಕಿಸ್ತಾನದ ಪರ ಘೋಷಣೆ ಕೂಗಿದ್ದರು ಎಂದು ತಿಳಿದು ಬಂದಿದೆ.
ಇದನ್ನೂ ಓದಿ:ಸರ್ಕಾರ ಎಲ್ಲಾ ವಿಷಯಗಳ ಬಗ್ಗೆ ಚರ್ಚೆಗೆ ಸಿದ್ಧ, ಪ್ರತಿಪಕ್ಷಗಳು ಅನುಕೂಲಕರ ವಾತಾವರಣ ಖಾತ್ರಿಪಡಿಸಬೇಕು: ಪ್ರಲ್ಹಾದ್ ಜೋಶಿ
ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಜೆಪಿ ನಗರ ಎರಡನೇ ಹಂತದಲ್ಲಿರುವ ಮೊಹಾಲಿಕಾ ಪಬ್​ನಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಟಿ-20 ಪಂದ್ಯ ವೀಕ್ಷಿಸುತ್ತಿದ್ದ ವೇಳೆ ಪಾಕಿಸ್ತಾನದ ಪರ ಘೋಷಣೆಗಳನ್ನು ಕೂಗಿದ್ದಾರೆ. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಇತರರು ಕೂಡಲೇ ಪೊಲೀಸರಿಗೆ ವಿಚಾರವನ್ನು ತಿಳಿಸಿದ್ದಾರೆ.
ಆರೋಪಿಗಳಿಬ್ಬರು ಕುಡಿದ ಮತ್ತಿನಲ್ಲಿ ಈ ರೀತಿಯ ಕೆಲಸ ಮಾಡಿದ್ದು, ಪಬ್​ನ ವ್ಯವಸ್ಥಾಪಕರು ನೀಡಿದ ದೂರಿನ ಮೇರೆಗೆ ಆರೋಪಿಗಳನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ವಿಚಾರಣೆ ನಡೆಯುತ್ತಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಮಾಹಿತಿಯನ್ನು ನೀಡಲಾಗುವುದು ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 1 =
Remember me
